ಹುಬ್ಬಳ್ಳಿ:ಹುಬ್ಬಳ್ಳಿ- ಧಾರವಾಡ ಮಹಾನಗರವನ್ನು ಮಾದರಿ ನಗರವನ್ನಾಗಿ ಪರಿವರ್ತಿಸಲು ನಾಗರಿಕರು ಸಹಕಾರ ಹಾಗೂ ಸಹಭಾಗಿತ್ವ ನೀಡಬೇಕು ಎಂದು ಮೇಯರ್ ಜ್ಯೋತಿ ಪಾಟೀಲ ಹೇಳಿದರು.
ನಗರದ ಸ್ವಚ್ಛತೆ ಹಿತದೃಷ್ಟಿಯಿಂದ ಪಾಲಿಕೆಯಿಂದ 66 ಹೊಸ ಆಟೋಟಿಪ್ಪರ್ ಖರೀದಿಸಿ ನೈರ್ಮಲ್ಯಕ್ಕೆ ಒತ್ತು ನೀಡಲಾಗುತ್ತಿದೆ. ಹಾಗಾಗಿ ಕಸವನ್ನು ಎಲ್ಲೆಂದ್ರರಲ್ಲಿ ಚೆಲ್ಲದೇ, ಮನೆ-ಮನೆಗೆ ಕಸ ಸಂಗ್ರಹಿಸಲು ಬರುವ ಆಟೋ ಟಿಪ್ಪರ್‌ಗೆ ಹಾಕಬೇಕು. ಆ ಮೂಲಕ ನಗರದ ಸ್ವಚ್ಛತೆಗೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಉಪಮೇಯರ್ ಸಂತೋಷ ಚವ್ಹಾಣ, ಸಭಾನಾಯಕ ಈರೇಶ ಅಂಚಟಗೇರಿ, ಮಾಜಿ ಮೇಯರ್ ರಾಮಪ್ಪ ಬಡಿಗೇರ, ಸದಸ್ಯರಾದ ರಾಜಣ್ಣ ಕೊರವಿ, ರೂಪಾ ಶೆಟ್ಟಿ, ಶಂಕರ ಶೆಳಕೆ ಸೇರಿದಂತೆ ಇತರರು ಇದ್ದರು.