ಕನ್ನಡಪ್ರಭ ವಾರ್ತೆ ಹೊಸಕೋಟೆ
ತಾಲೂಕಿನ ಸಮೇತನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿರುಮಲಶೆಟ್ಟಿಹಳ್ಳಿಯಲ್ಲಿ ಸ್ವಚ್ಛತಾ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮಗಳಲ್ಲಿ ಒಣಕಸ ಹಾಗೂ ಹಸಿ ಕಸ ಸಂಗ್ರಹಣೆ ಮಾಡುವ ಮೂಲಕ ಕಸ ಮುಕ್ತ ಗ್ರಾಮ ಪಂಚಾಯಿತಿ ಮಾಡುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಡಲಾಗಿದೆ. ಸುಮಾರು ₹30 ಲಕ್ಷ ಮೌಲ್ಯದ 4 ಕಸ ಸಂಗ್ರಹ ವಾಹನಗಳಿಗೆ ಚಾಲನೆ ನೀಡಲಾಗಿದೆ. ಆದ್ದರಿಂದ ಜನತೆ ಸ್ವಯಂಪ್ರೇರಿತರಾಗಿ ತಮ್ಮ ಸುತ್ತ ಮುತ್ತಲಿನ ಪರಿಸರ ಸ್ವಚ್ಛಗೊಳಿಸುವ ಮೂಲಕ ಗಾಂಧೀಜಿ ಕಂಡ ಸ್ವಚ್ಛ ಭಾರತದ ಕನಸು ನನಸಾಗಿಸಬೇಕು ಎಂದರು.ಸಮೇತನಹಳ್ಳಿ ಗ್ರಾಪಂ ಅಧ್ಯಕ್ಷ ಕಾಂತರಾಜ್ ಮಾತನಾಡಿ, ಬೆಂಗಳೂರು ನಗರಕ್ಕೆ ಹೊಂದಿಕೊಂಡಂತಿರುವ ಸಮೇತನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಜನಸಂಖ್ಯೆ ಹೆಚ್ಚಾಗಿದ್ದು, ಕಸ ಸಂಗ್ರಹಣೆ ಮಾಡುವ ಮೂಲಕ ಸ್ವಚ್ಛತೆ ಕಾಪಾಡಲು ಆದ್ಯತೆ ನೀಡಿ ಶಾಸಕ ಶರತ್ ಬಚ್ಚೇಗೌಡರ ನೇತೃತ್ವದಲ್ಲಿ ದಿಟ್ಟ ಹೆಜ್ಜೆ ಇಡಲಾಗಿದೆ. ಪ್ರತಿ ಮನೆಗೆ ಹಸಿ ಕಸ, ಒಣ ಕಸ ವಿಂಗಡಣೆಗೆ ಬಕೆಟ್ ವಿತರಿಸಿ ಶಾಸಕರೇ ಜಾಗೃತಿ ಮೂಡಿಸಲು ಚಾಲನೆ ನೀಡಿದ್ದಾರೆ ಎಂದರು.
ಪಿಡಿಒ ಪ್ರಸಾದ್ ಮಾತನಾಡಿ, ಸಮೇತನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಕಸ ವಿಲೇವಾರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಕಸ ಸಂಗ್ರಹಿಸುವ ೪ ವಾಹನಗಳಿಗೆ ಚಾಲನೆ ನೀಡಲಾಗಿದೆ. ನೇರವಾಗಿ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಕಸ ವಿಲೇವಾರಿ ಮಾಡಲಾಗುತ್ತಿದೆ. ಮನೆಯಲ್ಲೇ ತ್ಯಾಜ್ಯ ಪ್ರತ್ಯೇಕಿಸಿ, ವಾಹನಕ್ಕೆ ಹಾಕಬೇಕು. ನಿಯಮ ಮೀರಿ ಎಲ್ಲೆಂದರಲ್ಲಿ ಕಸ ಸುರಿದರೆ ದಂಡದ ಜತೆಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.ಬಿಎಂಆರ್‌ಡಿಎ ಸದಸ್ಯ ಕೊರಳೂರು ಸುರೇಶ್‌ಗೌಡ, ತಿರುಮಲ ಶೆಟ್ಟಿಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಸುಂದರ್, ಟಿಎಪಿಸಿಎಂಎಸ್ ಉಪಾಧ್ಯಕ್ಷ ಮುತ್ತೂರು ಮುನಿರಾಜು, ಮುನಿಯಪ್ಪ, ಮಾಜಿ ಅಧ್ಯಕ್ಷ ಮುತ್ಸಂದ್ರ ಬಾಬುರೆಡ್ಡಿ, ಮುಖಂಡರಾದ ಬೋಧನಹೊಸಹಳ್ಳಿ ಪ್ರಕಾಶ್, ಸಮೇತನಹಳ್ಳಿ ಸೊಣ್ಣಪ್ಪ, ದ್ವಿತೀಯ ದರ್ಜೆ ಸಹಾಯಕ ಮಂಜುನಾಥ್, ಸಿಬ್ಬಂದಿ ನಾಗರಾಜ್, ರಾಜೇಶ್, ಮಹೇಶ್ ಆರಾಧ್ಯ ಸೇರಿ ಹಲವಾರು ಮುಖಂಡರು ಹಾಜರಿದ್ದರು.