ಹೊಸಪೇಟೆ: ಮಾಸಿಕ ₹36 ಸಾವಿರ ಕನಿಷ್ಠ ವೇತನ ನಿಗದಿ, ಕಾರ್ಮಿಕ ಸಂಹಿತೆಗಳಿಗೆ ತಿದ್ದುಪಡಿ, ಖಾಯಂಯೇತರ ಕಾರ್ಮಿಕರ ಖಾಯಂಗೆ ಶಾಸನಕ್ಕಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ಕಛೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ ಒತ್ತಾಯಿಸಿದರು.
ಕೇಂದ್ರ ಸರ್ಕಾರವು 29 ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸಿ ಮಾಡಿರುವ ನಾಲ್ಕು ಕಾರ್ಮಿಕ ಸಂಹಿತೆಗಳಿಂದ ಕಾರ್ಮಿಕರ ಹಕ್ಕುಗಳು ಮೊಕಟುಗೊಳ್ಳಲಿವೆ. ಶ್ರಮದ ಶೋಷಣೆ ಹೆಚ್ಚಾಗಲಿದೆ. ಕೈಗಾರಿಕಾ ಸಂಬಂಧಗಳಿಗೆ ದಕ್ಕೆಯಾಗಲಿದೆ. ಇದು ರಾಜ್ಯದ ಅಭಿವೃದ್ಧಿಗೆ ಮಾರಕವಾಗಲಿದೆ. ಇವುಗಳನ್ನು ರಾಜ್ಯ ಸರ್ಕಾರ ಯಥಾರೀತಿ ಜಾರಿ ಮಾಡದೆ, ತಿದ್ದುಪಡಿಗಳನ್ನು ಮಾಡಿ ಜಾರಿ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ಸಿಐಟಿಯು ಮುಖಂಡರಾದ ಆರ್.ಭಾಸ್ಕರ್ ರೆಡ್ಡಿ ಮತ್ತು ಕೆ.ನಾಗರತ್ನಮ್ಮ ಮಾತನಾಡಿ, ಗ್ರಾಮ ಪಂಚಾಯತಿ ನೌಕರರು, ಅಂಗನ ವಾಡಿ ಸಿಬ್ಬಂದಿ, ಬಿಸಿಯೂಟ ಕಾರ್ಮಿಕರು ಹಾಗೂ ಸ್ವಚ್ಚತಾ ಕಾರ್ಮಿಕರಿಗೆ ಕನಿಷ್ಠ ವೇತನ ನಿಗಧಿ ಮಾಡುವಂತೆ ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಸಿಐಟಿಯು ಮುಖಂಡರಾದ ಎಂ. ಗೋಪಾಲ್, ಕೆ.ಎಂ.ಸಂತೋಷ್ ಸಭೆಯಲ್ಲಿ ಮಾತನಾಡಿದರು.
ಹೊಸಪೇಟೆ ನಗರದಲ್ಲಿ ಶನಿವಾರ ಸಿಐಟಿಯುನಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾದಿಕಾರಿ ಕಚೇರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.