ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಬೀಡಿ ಕಾರ್ಮಿಕರಿಗೆ ತುಟ್ಟಿಭತ್ಯೆ ನೀಡಲು ಒತ್ತಾಯಿಸಿ ಸಿಐಟಿಯು ಶುಕ್ರವಾರ ಮೂಡುಬಿದಿರೆ ಸೌತ್ ಕೆನರಾ ಹೋಂ ಇಂಡಸ್ಟ್ರೀಸ್ ಮೂಡುಬಿದಿರೆ ಡಿಪೋ ಮುಂದೆ ನಡೆದ ಪ್ರತಿಭಟನಾ ಪ್ರದರ್ಶನದಲ್ಲಿ ಭಾಗವಹಿಸಿ ಮಾತನಾಡಿದರು.
ಬೀಡಿ ಕಾರ್ಮಿಕರಿಗೆ ಮಂಜೂರಾಗಿರುವ ತುಟ್ಟಿಭತ್ಯೆಯನ್ನು ನೀಡಲು ಹಿಂದೇಟು ಹಾಕುತ್ತಿರುವುದನ್ನು ಆಕ್ಷೇಪಿಸಿದರು.ಬೀಡಿ ಫೆಡರೇಶನ್ ರಾಜ್ಯಾಧ್ಯಕ್ಷ ಜೆ. ಬಾಲಕೃಷ್ಣ ಶೆಟ್ಟಿ ಪ್ರತಿಭಟನಾ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿ, ಬೆಲೆ ಏರಿಕೆ ಜಾಸ್ತಿಯಾಗುತ್ತಿರುವುದರಿಂದ ಜನರಿಗೆ ಜೀವನ ನಡೆಸಲು ಕಷ್ಟ ಸಾಧ್ಯವಾಗಿದೆ ಈ ಕೂಡಲೇ ಸರ್ಕಾರ ಮಧ್ಯ ಪ್ರವೇಶ ಮಾಡಿ ಏರಿಕೆಯಾಗಿರುವ ತುಟ್ಟಿಭತ್ತೆಯನ್ನು ಬೀಡಿ ಮಾಲಕರು ನೀಡುವಂತೆ ಮಾಡಬೇಕೆಂದು ಆಗ್ರಹಿಸಿದರು.
ಸಿಐಟಿಯು ಮುಖಂಡರಾದ ಯಾದವಶೆಟ್ಟಿ, ರಮಣಿ, ಸೀತಾರಾಮ ಬೆರಿಂಜ, ಸುರೇಶ್ ಕುಮಾರ್, ರಾಧ, ಗಿರಿಜಾ, ಲಕ್ಷ್ಮೀ ಮತ್ತಿತರರು ಉಪಸ್ಥಿತರಿದ್ದರು.