ಬೆಲೆ ಏರಿಕೆ ವಿರುದ್ಧ ಸಿಐಟಿಯು ಪ್ರತಿಭಟನೆ

KannadaprabhaNewsNetwork | Published : Apr 17, 2025 12:04 AM

ಸಾರಾಂಶ

ಬೆಲೆ ಏರಿಕೆಯ ವಿರುದ್ಧ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸುವ ನೈತಿಕತೆಯನ್ನು ಸಂಪೂರ್ಣ ಕಳೆದುಕೊಂಡಿದ್ದು, ಜನರ ಕಣ್ಣೊರೆಸುವ ನಾಟಕ ಮಾಡುತ್ತಿದ್ದಾರೆ. ಒಂದೆಡೆ ದಿನನಿತ್ಯ ದುಡಿದು ತಿನ್ನುವ ಅಸಂಘಟಿತ ಕಾರ್ಮಿಕರು, ರೈತರು, ಬೀದಿ ಬದಿ ವ್ಯಾಪಾರಸ್ಥರು, ಶ್ರಮಜೀವಿಗಳ ಆದಾಯ ವ್ಯಾಪಕವಾಗಿ ಕುಸಿಯುತ್ತಿದ್ದು, ಮತ್ತೊಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಕೂಡಲೇ ಕೇಂದ್ರ ಮತ್ತು ರಾಜ್ಯದ ಎರಡೂ ಸರ್ಕಾರಗಳು ಬೆಲೆ ಏರಿಕೆ ನೀತಿಗಳನ್ನು ಕೈಬಿಡಬೇಕೆಂದು ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ವಿವಿಧ ವಸ್ತುಗಳ ಹಾಗೂ ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ಬಿಜೆಪಿ ಸರ್ಕಾರ ಮತ್ತು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಐಟಿಯು ನೇತೃತ್ವದಲ್ಲಿ ಬುಧವಾರ ಪ್ರತಿಭಟಿಸಲಾಯಿತು.

ನಗರದ ಮಹಾವೀರ ವೃತ್ತದಲ್ಲಿ ಕೇಂದ್ರ ಮತ್ತು ರಾಜ್ಯದ ವಿರುದ್ಧ ಘೋಷಣೆ ಕೂಗಿದರು. ಇದೇ ವೇಳೆ ಎಂದು ಸಿಪಿಐಎಂ ಹಾಸನ ಜಿಲ್ಲಾ ಕಾರ್ಯದರ್ಶಿ ಎಚ್.ಆರ್‌.ನವೀನ್ ಕುಮಾರ್ ಮಾಧ್ಯಮದೊಂದಿಗೆ ಮಾತನಾಡಿ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನಸಾಮಾನ್ಯರ ಆದಾಯವನ್ನು ಲೂಟಿ ಮಾಡುತ್ತಿವೆ. ಒಂದೆಡೆ ಕೇಂದ್ರದ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರ್ಕಾರ ಪೆಟ್ರೋಲ್ ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ಬೆಲೆಗಳನ್ನು ವಿಪರೀತ ಹೆಚ್ಚಳ ಮಾಡಿದರೆ, ಮತ್ತೊಂದೆಡೆ ರಾಜ್ಯದ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರ ಹಾಲು, ವಿದ್ಯುತ್, ಮತ್ತಿತರೆ ಅಗತ್ಯವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಎರಡೂ ಸರ್ಕಾರಗಳು ಜನಸಾಮಾನ್ಯರ ಮೇಲಿನ ಹೊರೆಯನ್ನು ಹೆಚ್ಚಳ ಮಾಡಲು ಪೈಪೋಟಿ ನಡೆಸುತ್ತಿವೆ ಎಂದು ದೂರಿದರು. ಇವು ಕಾರ್ಪೋರೇಟ್ ಪರವಾದ ನವ ಉದಾರೀಕರಣ ಜನವಿರೋಧಿ ನೀತಿಗಳಾಗಿವೆ ಎಂದು ಸಿಪಿಐಎಂ ಹಾಸನ ಜಿಲ್ಲಾ ಕಾರ್ಯದರ್ಶಿ ನವೀನ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಬೆಲೆ ಏರಿಕೆಯ ವಿರುದ್ಧ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸುವ ನೈತಿಕತೆಯನ್ನು ಸಂಪೂರ್ಣ ಕಳೆದುಕೊಂಡಿದ್ದು, ಜನರ ಕಣ್ಣೊರೆಸುವ ನಾಟಕ ಮಾಡುತ್ತಿದ್ದಾರೆ. ಒಂದೆಡೆ ದಿನನಿತ್ಯ ದುಡಿದು ತಿನ್ನುವ ಅಸಂಘಟಿತ ಕಾರ್ಮಿಕರು, ರೈತರು, ಬೀದಿ ಬದಿ ವ್ಯಾಪಾರಸ್ಥರು, ಶ್ರಮಜೀವಿಗಳ ಆದಾಯ ವ್ಯಾಪಕವಾಗಿ ಕುಸಿಯುತ್ತಿದ್ದು, ಮತ್ತೊಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಕೂಡಲೇ ಕೇಂದ್ರ ಮತ್ತು ರಾಜ್ಯದ ಎರಡೂ ಸರ್ಕಾರಗಳು ಬೆಲೆ ಏರಿಕೆ ನೀತಿಗಳನ್ನು ಕೈಬಿಟ್ಟು ಕೂಡಲೇ ಜನಸಾಮಾನ್ಯರ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬೆಲೆ ಏರಿಕೆ ಮತ್ತು ರೈತ ಕಾರ್ಮಿಕರ ವಿರೋಧಿ ನೀತಿಗಳನ್ನು ಅನುಸರಿಸಿರುವುದರಲ್ಲಿ ಎರಡೂ ಸರ್ಕಾರಗಳಿಗೂ ಯಾವುದೇ ವ್ಯತ್ಯಾಸಗಳಿಲ್ಲ. ಒಮ್ಮೆ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಸಿಲೆಂಡರ್‌ ಬೆಲೆಗಳು ಹೆಚ್ಚಾದರೆ ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರುತ್ತವೆ. ಇದರಿಂದ ನಾಗರಿಕರು ಜೀವನ ನಡೆಸುವುದೇ ಕಷ್ಟಕರವಾಗಿದೆ. ಈ ಬೆಲೆ ಏರಿಕೆಯ ಲಾಭವನ್ನು ಕೆಲವೇ ಕೆಲವು ಕಾರ್ಪೋರೇಟ್ ಕಂಪನಿಗಳಿಗೆ ಲಾಭ ಮಾಡಿಕೊಡುವ ಉದ್ದೇಶ ಇದರ ಹಿಂದೆ ಅಡಗಿದೆ. ಇದರಿಂದಾಗಿ ಬಡವರು ಕಡು ಬಡವರಾಗಿ, ಶ್ರೀಮಂತರು ಮತ್ತಷ್ಟು ಶ್ರೀಮಂತರಾಗುತ್ತಿದ್ದಾರೆ. ಆರ್ಥಿಕ ಅಸಮಾನತೆ ದೊಡ್ಡ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಎಂದರು.

ಪಕ್ಷದ ಕಾರ್ಯಕರ್ತರು ಕೈಯಲ್ಲಿ ಕೆಂಬಾವುಟ ಹಿಡಿದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೊಧಿ ನೀತಿಗಳ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಸಿಪಿಐಎಂ ಹಾಸನ ಸ್ಥಳೀಯ ಸಮಿತಿ ಕಾರ್ಯದರ್ಶಿ ಎಂ.ಜಿ. ಪೃಥ್ವಿ, ಅರವಿಂದ, ಸತ್ಯನಾರಾಯಣ, ಪುಷ್ಪ, ಪ್ರಕಾಶ್, ರಮೇಶ್, ಸಿಐಟಿಯು ಜಿಲ್ಲಾ ಅಧ್ಯಕ್ಷರಾದ ಧರ್ಮೇಶ್, ಎಂ.ಜಿ. ಪೃಥ್ವಿ, ಅರವಿಂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share this article