ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ನಗರಸಭಾ ಕಚೇರಿಯಲ್ಲಿ ಕೇಂದ್ರ ಪುರಸ್ಕೃತ ನಮಸ್ತೆ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ, ರಾಜ್ಯ ಸರ್ಕಾರಿ ಸಫಾಯಿ ಕರ್ಮಚಾರಿಗಳ ಆಯೋಗ ಸಹಯೋಗದಲ್ಲಿ ಪೌರಕಾರ್ಮಿಕರಿಗೆ ಸುರಕ್ಷತಾ ಆರೋಗ್ಯ ಕವಚವನ್ನು ವಿತರಿಸಿ ಮಾತನಾಡಿದರು.
ಪ್ರತಿನಿತ್ಯ ನಗರವನ್ನು ಸ್ವಚ್ಛಗೊಳಿಸುವ ಮೂಲಕ ನಾಗರಿಕರ ಆರೋಗ್ಯ ಕಾಪಾಡುವ ಪೌರಕಾರ್ಮಿಕರಿಗೆ ಆರೋಗ್ಯ ಮುಖ್ಯವಾಗಿದೆ. ಈ ವಿಚಾರದಲ್ಲಿ ನಿರ್ಲಕ್ಷ ತೋರದೆ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.ಪೌರಕಾರ್ಮಿಕರು ನಮ್ಮ ನಗರವನ್ನು ಸ್ವಚ್ಛವಾಗಿಸುತ್ತಿರುವ ಕಾರಣದಿಂದಾಗಿ ಇಂದು ನಮ್ಮೆಲ್ಲರ ಆರೋಗ್ಯ ಉತ್ತಮವಾಗಿದೆ. ಇವರ ಸ್ವಚ್ಛತಾ ಕಾರ್ಯಕ್ಕೆ ಸಮಾಜವು ಕೈಜೋಡಿಸಬೇಕು. ಎಲ್ಲೆಂದರಲ್ಲಿ ಕಸ ಎಸೆಯುವ ಪ್ರವೃತ್ತಿಗೆ ಸ್ವಯಂ ಕಡಿವಾಣ ಹಾಕಿಕೊಳ್ಳಬೇಕು. ಇದರಿಂದ ನಗರ ಸ್ವಚ್ಛವಾಗಿರುತ್ತದೆ ಎಂದು ಅಭಿಪ್ರಾಯಪಟ್ಟರು.
ಇದೇ ಸಂದರ್ಭದಲ್ಲಿ ನಗರಸಭೆ ಸ್ವಚ್ಛತಾ ವಾಹನಗಳ ಚಾಲಕರು, ಸಹಾಯಕರು ಮತ್ತು ಪೌರ ಕಾರ್ಮಿಕರು ಸೇರಿದಂತೆ ಸುಮಾರು 100 ಮಂದಿಗೆ ಕಾರ್ಯಕ್ರಮದ ಅಂಗವಾಗಿ ಸರ್ಕಾರಿ ಆಸ್ಪತ್ರೆ ವೈದ್ಯರಿಂದ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಡಾ.ಅನಿತಾ ಹಾಗೂ ಸಿಬ್ಬಂದಿ ಆರೋಗ್ಯ ತಪಾಸಣೆ ನಡೆಸಿ ಸಲಹೆ ಸೂಚನೆ ನೀಡಿದರು.