ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಸ್ವರ್ಣ ಜಯಂತಿ ಶಹರಿ ರೋಜ್ಗಾರ್ ಯೋಜನಾ ಭವನದಲ್ಲಿ ಪುರಸಭಾ ಕಾರ್ಯಾಲಯದ ಪೌರಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರೊಂದಿಗೆ ಸಂವಾದ ನಡೆಸಿ ಪೌರ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿ ಮಾತನಾಡಿದರು.
ಬಿಸಿಲು, ಮಳೆ, ಚಳಿ ಎನ್ನುವುದನ್ನು ಲೆಕ್ಕಿಸದೇ ಪಟ್ಟಣದ ಜನರ ಆರೋಗ್ಯ ಸಂವರ್ಧನೆಗಾಗಿ ದುಡಿಯುತ್ತಿರುವ ಪೌರಕಾರ್ಮಿಕರ ಬದುಕು ಇಂದು ಸಂಕಷ್ಟದಲ್ಲಿದೆ. ರೋಗ-ರುಜಿನಗಳು ಪೌರಕಾರ್ಮಿಕರನ್ನು ಕಿತ್ತು ತಿನ್ನುತ್ತಿದ್ದು, ಅಕಾಲಿಕವಾಗಿ ಅನಾರೋಗ್ಯದಿಂದ ಸಾವನ್ನಪ್ಪುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.ಪೌರಕಾರ್ಮಿಕರು ಪಟ್ಟಣದ ಜನತೆ ಆರೋಗ್ಯವನ್ನು ಕಾಪಾಡುವ ಜೊತೆಗೆ ತಮ್ಮ ವೈಯಕ್ತಿಕ ಸ್ವಚ್ಛತೆ ಹಾಗೂ ಆರೋಗ್ಯದ ಕಡೆಯೂ ಗಮನಹರಿಸಿ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಇದರಿಂದ ತಮ್ಮ ಕುಟುಂಬದ ಯೋಗ ಕ್ಷೇಮವನ್ನು ನೋಡಿಕೊಳ್ಳಬೇಕು ಎಂದರು.
ಪುರಸಭೆ ಮುಖ್ಯಾಧಿಕಾರಿ ಹಾಗೂ ಆಡಳಿತಾಧಿಕಾರಿಗಳು ಸ್ವಂತ ಸೂರನ್ನು ಹೊಂದಿರದ ಪೌರ ಕಾರ್ಮಿಕರನ್ನು ಗುರುತಿಸಿ ಅವರಿಗೆ ನಿವೇಶನವನ್ನು ಸರ್ಕಾರದ ವತಿಯಿಂದ ಕೊಡಿಸಿ ಸ್ವಂತ ಮನೆ ಹೊಂದಲು ನೆರವಾಗಬೇಕು. ಈ ದಿಕ್ಕಿನಲ್ಲಿ ರಾಜ್ಯ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಪ್ರಸ್ತಾವನೆಯನ್ನು ಕಳಿಸಿಕೊಡಬೇಕು ಎಂದು ಸಭೆಯಲ್ಲಿ ಹಾಜರಿದ್ದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಎಂ.ಅಶೋಕ್ ಕುಮಾರ್ ಅವರಿಗೆ ನಿರ್ದೇಶನ ನೀಡಿದರು.
ಯುಜಿಡಿ ಸೇರಿದಂತೆ ಶೌಚ ಗುಂಡಿಗಳ ಸ್ವಚ್ಛತೆಗೆ ಸಕ್ಕಿಂಗ್ ಯಂತ್ರಗಳನ್ನು ಬಳಸಲಾಗುತ್ತಿದೆ. ಪೌರಕಾರ್ಮಿಕರ ಆರೋಗ್ಯ ಸಂಮೋಧನೆಗಾಗಿ ಪ್ರತಿ ವರ್ಷವೂ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಿ ಔಷಧೋಪಚಾರ ನೀಡುವ ಜೊತೆಗೆ, ಆರೋಗ್ಯ ಸಂವರ್ಧನೆಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
ಸಭೆಯಲ್ಲಿ ಗ್ರೇಡ್ 2 ತಹಸೀಲ್ದಾರ್ ಲೋಕೇಶ್, ಪುರಸಭೆ ಪರಿಸರ ಇಂಜಿನಿಯರ್ ಪ್ರಿಯಾಂಕ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಅಶೋಕ್ ಕುಮಾರ್, ಆದಿ ದ್ರಾವಿಡ ಅರುಂಧತಿಯಾರ್ ಸಮಾಜದ ಮಂಡ್ಯ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಆರ್.ಬನ್ನಾರಿ, ಪಟ್ಟಣದ ರಾಮಯ್ಯ ಕಾಲೋನಿ ಆದಿದ್ರಾವಿಡ ಸಮಾಜದ ಮುಖಂಡರಾದ ಕುಮಾರ, ಮಧು, ನಾಗರಾಜು, ಕೃಷ್ಣ, ಮುತ್ತಣ್ಣ ಸೇರಿದಂತೆ ನೂರಾರು ಪೌರಕಾರ್ಮಿಕರು ಹಾಗೂ ಕುಟುಂಬದ ಸದಸ್ಯರು ಭಾಗವಹಿಸಿದ್ದರು.