ಕನಕಪುರದ ಅಂಬೇಡ್ಕರ್ ಭವನದಲ್ಲಿ ಪೌರ ಕಾರ್ಮಿಕರ ದಿನಾಚರಣೆ । ಕಾರ್ಯಕ್ರಮದಲ್ಲಿ ಸೇವೆ ಸಲ್ಲಿಸಿದ ಪವರ ಕಾರ್ಮಿಕರಿಗೆ ಸನ್ಮಾನ
ನಮ್ಮ ಅನಾರೋಗ್ಯವನ್ನು ಪತ್ತೆ ಹಚ್ಚಿ, ಚಿಕಿತ್ಸೆ ನೀಡಿ ಆರೋಗ್ಯವಂತರನ್ನಾಗಿ ಮಾಡುವ ವೈದ್ಯ ವೃತ್ತಿಯಷ್ಟೇ ಪೌರಕಾರ್ಮಿಕರ ವೃತ್ತಿಯೂ ಸಹ ಸರಿಸಮಾನ ವಾದುದ್ದು ಎಂದು ಪೌರಾಯುಕ್ತ ಮಹದೇವ್ ಅಭಿಪ್ರಾಯಪಟ್ಟರು.
ನಗರದ ಅಂಬೇಡ್ಕರ್ ಭವನದಲ್ಲಿ ನಗರಸಭೆ ಮತ್ತು ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಅಸ್ವಸ್ಥತೆಯನ್ನು ಪತ್ತೆ ಹಚ್ಚಿ, ಚಿಕಿತ್ಸೆ ನೀಡಿ ನಮ್ಮ ಆರೋಗ್ಯವನ್ನು ಕಾಪಾಡುವ ವೈದ್ಯರಿಗೆ ‘ವೈದ್ಯೋಂ ನಾರಾಯಣೋ ಹರಿ’ ಎನ್ನುವಂತೆ ಸ್ವಚ್ಛತೆಯನ್ನು ಕಾಪಾಡಿ ಸಮಾಜದ ಆರೋಗ್ಯವನ್ನು ಕಾಪಾಡುವ ಪೌರಕಾರ್ಮಿಕರನ್ನೂ ‘ಪೌರಕಾರ್ಮಿಕ ನಾರಾಯಣೋ ಹರಿ’ ಎಂದರೆ ತಪ್ಪಾಗಲಾರದು ಎಂದರು.ಪ್ರತಿನಿತ್ಯ ನಾವೆಲ್ಲರೂ ಎಚ್ಚರಗೊಳ್ಳುವ ಮುನ್ನವೇ ಬೆಳಿಗ್ಗೆ 5:00ಗೆ ಶಿಸ್ತಿನ ಸಿಪಾಯಿಗಳಂತೆ ತಮ್ಮ ಕರ್ತವ್ಯಗಳಿಗೆ ಹಾಜರಾಗುವ ಪೌರಕಾರ್ಮಿಕರು, ನಾವು ಮನೆಯಿಂದ ಹೊರಗೆ ಬರುವ ವೇಳೆಗೆ ಸ್ವಚ್ಛ ಪರಿಸರವನ್ನು ಕೊಡುವ ಅವರ ಸೇವೆ ಶ್ಲಾಘನೀಯವಾದದ್ದು. ಪೌರಕಾರ್ಮಿಕರ ಮಕ್ಕಳು ಪೌರವ ಕಾರ್ಮಿಕರಾಗದೆ ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉನ್ನತ ಹುದ್ದೆ ಗಳನ್ನು ಅಲಂಕರಿಸಲಿ ಎಂದು ಶುಭ ಹಾರೈಸಿದರು.
ಭಾರತಕ್ಕೆ ಸಂವಿಧಾನವನ್ನು ಕೊಟ್ಟಿದ್ದು ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಪಕ್ಷದಲ್ಲಿದ್ದ ಜವಹರಲಾಲ್ ನೆಹರು ಅವರು ಅಂಬೇಡ್ಕರ್ ಅವರನ್ನು ಸಂವಿಧಾನ ರಚನಾ ಸಮಿತಿಯ ಮುಖ್ಯಸ್ಥರು ಆಗಬೇಕು ಎಂದು ಜವಾಬ್ದಾರಿಯನ್ನು ಕೊಟ್ಟಿದ್ದರು. ಇಂದು ನಾವು ನೀವೆಲ್ಲರೂ ಸಂವಿಧಾನದ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದರೆ ಡಾ. ಅಂಬೇಡ್ಕರ್ ಅವರೇ ಕಾರಣ. ತಮ್ಮ ಸುತ್ತಮುತ್ತಲಿನ ಪರಿಸರವನ್ನು ಪ್ರತಿನಿತ್ಯ ಸ್ವಚ್ಛವಾಗಿಡುವ ಪೌರಕಾರ್ಮಿಕರ ದಿನಾಚರಣೆಯನ್ನು ನಾವೆಲ್ಲರೂ ಆಚರಣೆ ಮಾಡಬೇಕು, ಪೌರ ನೌಕರರ ಸಂಘಕ್ಕೆ ನಮ್ಮ ಬಿಡಿಸಿಸಿ ಬ್ಯಾಂಕ್ ವತಿಯಿಂದ ಕಡಿಮೆ ಬಿಟ್ಟಿದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತದೆ ಅದರ ಸದುಪಯೋಗಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಪೌರಕಾರ್ಮಿಕರು ನಾನ ರೋಗ ರುಜಿನಗಳಿಗೆ ತುತ್ತಾಗುತ್ತಾರೆ, ಪೌರಕಾರ್ಮಿಕರನ್ನು ಕಷ್ಟಗಳನ್ನು ಕೇಳುವವರು ಇಲ್ಲ. ಅವರ ಆರೋಗ್ಯವನ್ನು ಕಾಪಾಡಬೇಕಾದರೆ ಅವರಿಗೆ ಆರೋಗ್ಯ ವಿಮೆ ಕೊಡಬೇಕು. ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಪೌರ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.
---