ಪೌರಕಾರ್ಮಿಕರು ಪಟ್ಟಣ ಸ್ವಚ್ಛ ಮಾಡುವ ಯೋಧರು

KannadaprabhaNewsNetwork |  
Published : Sep 24, 2025, 01:03 AM IST
23ಐಎನ್‌ಡಿ6,ಇಂಡಿ ಪೌರಕಾರ್ಮಿಕರ ದಿನಾಚರಣೆಯನ್ನು ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ ಉದ್ಘಾಟಿಸಿದರು.  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಇಂಡಿ ಪಟ್ಟಣದ ಸ್ವಚ್ಛತೆ ಮತ್ತು ನೀರು ಸರಬರಾಜು ಮಾಡುವ ಪೌರ ಕಾರ್ಮಿಕರು ಯೋಧರಿದ್ದಂತೆ. ಪೌರ ಕಾರ್ಮಿಕರನ್ನು ಸಮಾಜ ನಿಷ್ಕೃಷ್ಟವಾಗಿ ಕಾಣುವುದನ್ನು ಬಿಡಬೇಕು ಎಂದು ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ ಹೇಳಿದರು.

ಕನ್ನಡಪ್ರಭ ವಾರ್ತೆ ಇಂಡಿ

ಪಟ್ಟಣದ ಸ್ವಚ್ಛತೆ ಮತ್ತು ನೀರು ಸರಬರಾಜು ಮಾಡುವ ಪೌರ ಕಾರ್ಮಿಕರು ಯೋಧರಿದ್ದಂತೆ. ಪೌರ ಕಾರ್ಮಿಕರನ್ನು ಸಮಾಜ ನಿಷ್ಕೃಷ್ಟವಾಗಿ ಕಾಣುವುದನ್ನು ಬಿಡಬೇಕು ಎಂದು ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ ಹೇಳಿದರು.

ಪುರಸಭೆ ಏರ್ಪಡಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಡಿಯಲ್ಲಿನ ಯೋಧರು ದೇಶ ರಕ್ಷಣೆಯ ಕೆಲಸವನ್ನು ಮಾಡಿ ಜನರನ್ನು ರಕ್ಷಿಸುತ್ತಾರೆ. ಅದೇ ರೀತಿ ಪೌರ ಕಾರ್ಮಿಕರು ಪಟ್ಟಣದ ಸ್ವಚ್ಛತೆ ಕೈಗೊಂಡು ಸಾಂಕ್ರಾಮಿಕ ರೋಗಗಳಿಂದ ಜನರನ್ನು ರಕ್ಷಿಸುತ್ತಾರೆ ಎಂದು ಬಣ್ಣಿಸಿದರು. ಪೌರ ಕಾರ್ಮಿಕ ವರ್ಗ ಶೋಷಿತರಲ್ಲಿ ಶೋಷಿತ ವರ್ಗವಾಗಿದೆ. ನೈರ್ಮಲ್ಯದ ವಿರುದ್ಧ ಹೋರಾಡಿ ನಮ್ಮ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಆಗಬೇಕು. ಪೌರ ಕಾರ್ಮಿಕರು ಹಲವು ಮೂಲ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮುಖ್ಯವಾಗಿ ನಿವೇಶನ, ಯೋಗ್ಯ ಸಂಬಳ, ಭತ್ಯೆಯನ್ನು ಸರ್ಕಾರ ಹೆಚ್ಚಿಸಬೇಕು ಎಂದು ಹೇಳಿದರು.ಪುರಸಭೆ ಮುಖ್ಯಾಧಿಕಾರಿ ಸಿದರಾಯ ಕಟ್ಟಿಮನಿ ಮಾತನಾಡಿ, ನಾಗರಿಕರ ಆರೋಗ್ಯಕ್ಕೆ ಪೂರಕವಾಗಿ ಸೇವೆ ಸಲ್ಲಿಸುವ ಪೌರ ಕಾರ್ಮಿಕರ ಆರೋಗ್ಯ ಸಹ ಚೆನ್ನಾಗಿರಬೇಕು. ಈ ನಿಟ್ಟಿನಲ್ಲಿ ಸರ್ಕಾರ ಪೌರ ಕಾರ್ಮಿಕರಿಗೆ ಪುರಸಭೆಯಿಂದ ಕ್ರೀಡಾಕೂಟ ಏರ್ಪಡಿಸಿದೆ. ಮಾನಸಿಕ ಹಾಗೂ ದೈಹಿಕವಾಗಿ ಗಟ್ಟಿಗೊಳ್ಳಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡಾಕೂಟದಲ್ಲಿ ಸೋಲು ಗೆಲುವು ಮುಖ್ಯವಲ್ಲ, ಎಲ್ಲರೂ ಭಾಗವಹಿಸುವುದೇ ಮುಖ್ಯ. ಕ್ರೀಡಾಕೂಟವನ್ನು ಸರ್ಕಾರ ಪೌರಕಾರ್ಮಿಕರಿಗಾಗಿ ಆಯೋಜಿಸಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಿದರು.ಪುರಸಭೆ ಸದಸ್ಯ ಸುಧೀರ ಕರಕಟ್ಟಿ, ಮುಸ್ತಾಕ ಇಂಡಿಕರ, ಕಚೇರಿ ವ್ಯವಸ್ಥಾಪಕ ಪ್ರವೀಣ ಸೋನಾರ ಮಾತನಾಡಿ, ಪ್ರತಿಯೊಬ್ಬರು ಕ್ರೀಡಾ ಸ್ಫೂರ್ತಿಯಿಂದ ಆಟ ಆಡಿ. ಪ್ರತಿದಿನ ಒಂದಲ್ಲ ಒಂದು ಕ್ರೀಡೆಯನ್ನು ಪ್ರತಿಯೊಬ್ಬರು ಅಳವಡಿಸಿಕೊಂಡರೆ ಆರೋಗ್ಯ ಉತ್ತಮವಾಗಿರಲಿದೆ ಎಂದರು.

ಕಾರ್ಯಕ್ರಮದಲ್ಲಿ ಸತೀಶ ಕುಂಬಾರ, ಭೀಮಾಶಂಕರ ಮೂರಮನ, ಉಮೇಶ ದೇಗಿನಾಳ, ಶಬ್ಬಿರ ಖಾಜಿ, ಶ್ರೀಶೈಲ ಪೂಜಾರಿ, ಶಿವು ಬಡಿಗೇರ, ಪೌರ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಅಬ್ಬಾಸಲಿ ಕಾಖಂಡಕಿ, ತಾಲೂಕ ಅಧ್ಯಕ್ಷೆ ಲಕ್ಷ್ಮಿ ಕಾಲೇಬಾಗ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುಚ್ಚಪ್ಪ ಶಿವಶರಣ, ಸಿಂದಗಿ ತಾಲೂಕಾಧ್ಯಕ್ಷ ಕಲ್ಲಪ್ಪ ಚೌರ, ಜಗದೀಶ ಹರಿಜನ, ಚಂದು ಕಾಲೇಬಾಗ, ಅಸ್ಲಮ ಖಾದಿಮ, ಸದಾಶಿವ ನಿಂಬಾಳಕರ, ಲಕ್ಷ್ಮಿಪುತ್ರ ಸೋಮನಾಯಕ, ಅಜರ ಶೇಖ, ಕಸಾಬ, ನಾರಾಯಣಕರ, ತಸ್ಲಿಮ ಮುಜಾವರ, ಮುತ್ತು ಮುರಾಳ, ಗುರು ವಾಲಿ ಮೊದಲಾದವರು ಪಾಲ್ಗೊಂಡಿದ್ದರು.

PREV

Recommended Stories

ಪಾಲಿಕೆಗಳ ಚುನಾವಣೆ ಮುಗಿವವರೆಗೆ ಬೆಂಗಳೂರಲ್ಲಿ ಮತಪಟ್ಟಿ ಪರಿಷ್ಕರಣೆ ಮುಂದೂಡಿ : ಕೇಂದ್ರ ಆಯುಕ್ತರಿಗೆ ಪತ್ರ
ಡ್ರಾಪ್‌ ನೆಪದಲ್ಲಿ ಗುತ್ತಿಗೆದಾರನ ದರೋಡೆ ಮಾಡಿದ್ದ ನಾಲ್ವರ ಬಂಧನ