ಪೌರಕಾರ್ಮಿಕರು ಸರ್ಕಾರಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಿ

KannadaprabhaNewsNetwork |  
Published : Feb 29, 2024, 02:02 AM IST
28ಸಿಎಚ್ಎನ್‌57ಚಾಮರಾಜನಗರದ ವಾಲ್ಮೀಕಿ ಭವನದಲ್ಲಿ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘ(ರಿ) ಜಿಲ್ಲಾ ಘಟಕ ಚಾಮರಾಜನಗರದ ವತಿಯಿಂದ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ನಾರಾಯಣ್ ಅವರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಪೌರಕಾರ್ಮಿಕರು ತಮ್ಮ ಮೂಲಭೂತ ಹಕ್ಕುಗಳನ್ನು ಪಡೆದುಕೊಳ್ಳುವ ಮೂಲಕ ಸರ್ಕಾರದ ಎಲ್ಲಾ ರೀತಿಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ರಾಮದಾಸ್ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ ಪೌರಕಾರ್ಮಿಕರು ತಮ್ಮ ಮೂಲಭೂತ ಹಕ್ಕುಗಳನ್ನು ಪಡೆದುಕೊಳ್ಳುವ ಮೂಲಕ ಸರ್ಕಾರದ ಎಲ್ಲಾ ರೀತಿಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ರಾಮದಾಸ್ ಕರೆ ನೀಡಿದರು.

ನಗರದ ವಾಲ್ಮೀಕಿ ಭವನದಲ್ಲಿ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘ(ರಿ) ಜಿಲ್ಲಾ ಘಟಕ ಚಾಮರಾಜನಗರದ ವತಿಯಿಂದ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಪೌರಕಾರ್ಮಿಕರು ಸಾಕಷ್ಟು ಕಷ್ಟ ಪಟ್ಟು ಕೆಲಸ ನಿರ್ವಹಿಸುತ್ತಿದ್ದಾರೆ. ಅವರ ಕಷ್ಟ ಸುಖಗಳನ್ನು ಆಲಿಸಲು ಯಾರೂ ಕೂಡಾ ಮುಂದೆ ಬರುವುದಿಲ್ಲ. ಇವರ ಧ್ವನಿಯಾಗಿ ನಾರಾಯಣ್ ಅವರು, ಬಹಳ ಹಿಂದಿನಿಂದಲೂ ಹೋರಾಟದ ನಡೆಸುವ ಮೂಲಕ ಪೌರಕಾರ್ಮಿಕರನ್ನು ಕಾಯಂಗೊಳಿಸಲು ಸಾಕಷ್ಟು ಶ್ರಮವಹಿಸಿದ್ದಾರೆ ಎಂದರು.

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷರು, ಮಾಜಿ ಮೇಯರ್ ಹಾಗೂ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ನಾರಾಯಣ್ ಅವರ ಹೋರಾಟದ ಫಲವಾಗಿ ಸಾಕಷ್ಟು ಮಂದಿ ನೇರ ಪಾವತಿಯಡಿ, ಗುತ್ತಿಗೆ ಆಧಾರದ ಮೇಲೆ ಕೆಲಸ ಕಾರ್ಯನಿರ್ವಹಿಸುತ್ತಿದ್ದ ಪೌರಕಾರ್ಮಿಕರನ್ನು ಸರ್ಕಾರ ಕಾಯಂಗೊಳಿಸಿದೆ ಮುಂದಿನ ದಿನಗಳಲ್ಲಿ ಮತ್ತಷ್ಟು ಅನುಕೂಲವಾಗಲಿದೆ ಎಂದರು.

ನಗರಸಭಾ ಸದಸ್ಯ ಅಬ್ರಾರ್ ಅಹಮ್ಮದ್ ಮಾತನಾಡಿ, ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೂ ಕೂಡಾ ನ್ಯಾಯ ದೊರಕುವಂತಾಗಬೇಕು ಎಂಬ ಉದ್ದೇಶದಿಂದ ಶೋಷಿತ ಸಮುದಾಯಗಳ ಪರವಾಗಿ ಹೋರಾಟ ಮಾಡುತ್ತಿದ್ದಾರೆ. ಇವರನ್ನು ಗುರುತಿಸಿ ಈ ರೀತಿಯ ಕಾರ್ಯಕ್ರಮಗಳ ಮೂಲಕ ಅವರನ್ನು ಅಭಿನಂದಿಸುವಂತಹ ಕೆಲಸವಾಗಬೇಕಿದೆ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ನಾರಾಯಣ್ ಅವರು, ಪೌರಕಾರ್ಮಿಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ, ಅವರ ಭವಿಷ್ಯವನ್ನು ಉಜ್ವಲಗೊಳಿಸಲು ಪೋಷಕರು ಸಹಕಾರ ನೀಡಿ ಎಂದು ಕಿವಿಮಾತು ಹೇಳಿದರು.

ಮುಂದಿನ ತಲೆಮಾರಿನ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಿ, ಅವರನ್ನು ಉನ್ನತ ಅಧಿಕಾರಿಗಳನ್ನಾಗಿ ಮಾಡುವ ದೃಢ ನಿರ್ಧಾರ ಕೈಗೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದರು. ಬೇರೆ ರಾಜ್ಯಗಳಲ್ಲಿ ಪೌರಕಾರ್ಮಿಕರಿಗೆ ಬಹಳ ಕಡಿಮೆ ಸಂಬಳ ಇದೆ. ನಮ್ಮ ರಾಜ್ಯದಲ್ಲಿ ಹೆಚ್ಚಿನ ಸಂಬಳ ನೀಡಲಾಗುತ್ತಿದೆ. ಪೌರಕಾರ್ಮಿಕರಿಗೆ ಬೆಳಗಿನ ಉಪಹಾರ ನೀಡುವ ಯೋಜನೆ ಜೊತೆಗೆ ಕಾಯಂ ಗೊಳಿಸಿರುವುದಕ್ಕೆ ಕಾರಣರಾದ ಸಿಎಂ ಸಿದ್ದರಾಮಯ್ಯನವರನ್ನು ಸ್ಮರಿಸಿದರು.ಜಿಲ್ಲಾಧ್ಯಕ್ಷ ಸಿ.ಶಂಕರ್ ಅಂಕನಶೆಟ್ಟಿಪುರ ಮಾತನಾಡಿ, ಪೌರಕಾರ್ಮಿಕರ ಬಗ್ಗೆ ಅಪಾರ ಕಾಳಜಿ, ಬದ್ಧತೆ ಉಳ್ಳವರಾಗಿ ಉತ್ತಮ ಸಂಘಟಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಅವರ ಕೆಲಸವನ್ನು ಶ್ಲಾಘಿಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನಗರಸಭೆ, ಪುರಸಭೆ, ಪೌರಕಾರ್ಮಿಕರ ಮಹಾಸಂಘ ಜಿಲ್ಲಾಧ್ಯಕ್ಷ ಸಿ. ಶಂಕರ್ ಅಂಕನಶೆಟ್ಟಿಪುರ ಅವರನ್ನು ರಾಜ್ಯ ಸಫಾಯಿಕರ್ಮಚಾರಿ ಆಯೋಗದ ಸದಸ್ಯರನ್ನಾಗಿ ನೇಮಕ ಮಾಡುವಂತೆ ಕಾರ್ಯಕ್ರಮದಲ್ಲಿ ನೆರೆದಿದ್ದ ಪೌರಕರ್ಮಿಕರು ಒತ್ತಾಯಿಸಿದರು.ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಬಿ.ಎಸ್.ರಾಜು, ಆದಿ ಕರ್ನಾಟಕ ಆದಿ ಜಾಂಬವ ಹಾಗೂ ಆದಿ ದ್ರಾವಿಡ ಜನಾಂಗಗಳ ಐಕ್ಯತಾ ಸಮಿತಿ ಜಿಲ್ಲಾಧ್ಯಕ್ಷ ಪಿ.ಸಂಘಸೇನಾ, ಮಂಡ್ಯ ಜಿಲ್ಲೆಯ ಡಿಎಸ್‌ಎಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಸ್.ಕುಮಾರ್, ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಆರ್.ಶಿವಣ್ಣ, ಮೈಸೂರು ಜಿಲ್ಲಾಧ್ಯಕ್ಷ ನಾಗರಾಜು, ಗುಂಡ್ಲುಪೇಟೆ ಗಣೇಶ್ ಕೊಳ್ಳೇಗಾಲ ಪುಟ್ಟರಾಜು, ಯಳಂದೂರು ಸರಿತಾ, ಮಲೆ ಮಹದೇಶ್ವರ ಬೆಟ್ಟದ ಎಂ.ಪಿ.ಗೋಪಾಲ್, ಮೂರ್ತಿ ಚಿಕ್ಕಹೊಳೆ, ಮಹೇಶ್ ಅಂಕನಶೆಟ್ಟಿಪುರ, ಮೂಕಹಳ್ಳಿ ಮಲ್ಲೇಶ್, ಸುಬ್ರಹ್ಮಣ್ಯ, ಶಿವಶಂಕರ್ ಎನ್.ಚಿಟ್ಟು, ಕನ್ನಡ ಕೋಗಿಲೆ ಬಾಗಳಿ ಮಹದೇವಸ್ವಾಮಿ, ರಾಜೇಂದ್ರ .ಎಂ., ವಿಜಯಮ್ಮ, ಜಯಮ್ಮ, ರಾಕೇಶ್, ವಿಜಯ್ ಎಸ್., ಮುರುಗೇಶ್, ರಾಜು, ಪ್ರಶಾಂತ್.ಎಂ., ಎಸ್.ರಾಜೇಂದ್ರ, ಮಹೇಶ್, ಮಂಜು, ಎನ್.ನಾಗೇಶ್, ಈಶ್ವರ್, ಎನ್.ಮುರುಗೇಶ್, ಶಿವರಾಜ್, ರಾಕೇಶ್, ಮನೋಹರ್ ಮತ್ತಿತರರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ