ಆರೋಗ್ಯ ಕಾಪಾಡುವ ಪೌರಕಾರ್ಮಿಕ ಸೇವೆ ಅನನ್ಯ

KannadaprabhaNewsNetwork | Published : Sep 25, 2024 12:52 AM

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಸ್ವಚ್ಛತೆ, ನೈರ್ಮಲ್ಯ, ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ ಎಂದು ನಾಗಠಾಣದ ಶಾಸಕ ವಿಠ್ಠಲ ಕಟಕದೊಂಡ ಹೇಳಿದರು. ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳ ಸದುಪಯೋಗಪಡಿಸಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ವಿಜಯಪುರ

ನಗರದ ಸ್ವಚ್ಛತೆ, ನೈರ್ಮಲ್ಯ, ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ ಎಂದು ನಾಗಠಾಣದ ಶಾಸಕ ವಿಠ್ಠಲ ಕಟಕದೊಂಡ ಹೇಳಿದರು.

ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳ ಸದುಪಯೋಗಪಡಿಸಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳಬೇಕು. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕೆ ಒತ್ತು ನೀಡಿ ಉನ್ನತ ಶಿಕ್ಷಣ ಒದಗಿಸುವುದರ ಮೂಲಕ ಅವರ ಬದುಕು ಮತ್ತು ಭವಿಷ್ಯವನ್ನು ಅತ್ಯುತ್ತಮವಾಗಿ ರೂಪಿಸಬೇಕು ಎಂದು ಕಿವಿಮಾತು ಹೇಳಿದರು.

ಮಹಾನಗರ ಪಾಲಿಕೆ ಉಪಮಹಾಪೌರ ದಿನೇಶ ಹಳ್ಳಿ ಮಾತನಾಡಿ, ಪೌರಕಾರ್ಮಿಕರು ತಮ್ಮ ಕರ್ತವ್ಯದ ಜೊತೆಗೆ ಸುರಕ್ಷಾ ಪರಿಕರಗಳನ್ನು ಉಪಯೋಗಿಸಿ ಮುಂಜಾಗ್ರತೆಯಿಂದ ಕಾರ್ಯನಿರ್ವಹಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳುವಂತೆ ತಿಳಿಸಿದರು.

ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ಮಾತನಾಡಿ, ನಗರವನ್ನು ಸ್ವಚ್ಛತೆಯಿಂದ ಇಡುವ ಮೂಲಕ ನಮ್ಮ ಹೆಸರು ಬರಲು ಪೌರ ಕಾರ್ಮಿಕರು ಕಾರಣ. ಪೌರಕಾರ್ಮಿಕರು ನಸುಕಿನಲ್ಲಿ ಎದ್ದು ಶ್ರಮದಾನ ಮಾಡುವ ಮೂಲಕ ನಗರವನ್ನು ಸ್ವಚ್ಛಗೊಳಿಸುತ್ತಾರೆ. ಈ ಮೂಲಕ ಜನರ ಆರೋಗ್ಯ ಕಾಪಾಡುತ್ತಾರೆ. ಅಂತಹವರನ್ನು ಒಂದು ದಿನಕ್ಕೆ ನೆನೆಯುವುದು ಹಾಗೂ ಕೇವಲ ಒಂದು ದಿನಕ್ಕೆ ಪೌರ ಕರ್ಮಿಕರ ದಿನಾಚರಣೆಗೆ ಸೀಮಿತ ಆಗಬಾರದು. ನಾವೆಲ್ಲರೂ ನಿಮ್ಮ ಜೊತೆಗೆ ಇರುತ್ತೇವೆ. ಸರ್ಕಾರದ ಸೌಲಭ್ಯಗಳನ್ನು ಒದಗಿಸುವಲ್ಲಿ ನಾವೆಲ್ಲ ಇದ್ಧೇವೆ. ಕೋವಿಡ್ ಸಂದರ್ಭದಲ್ಲಿ ನಾವು ಬದುಕುಳಿಯುವುದು ಕಷ್ಟವಾಗಿದ್ದಾಗ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆಯ ಜೊತೆಗೂಡಿ ನೀವು ಸ್ವಚ್ಛತೆ ಕಾಪಾಡುವ ಮೂಲಕ ಜನರ ಆರೋಗ್ಯ ಕಾಪಾಡಿದಿರಿ. ಇಡಿ ದೇಶದಲ್ಲೇ ನಮ್ಮ ವಿಜಯಪುರ ಸ್ವಚ್ಛತೆಗೆ ಮತ್ತು ಶುದ್ಧ ಗಾಳಿಗೆ 6ನೇ ಸ್ಥಾನ ಬಂದಿರುವುದು. ಹೆಮ್ಮೆ. ಸ್ವಚ್ಛತೆಗೆ, ಶುದ್ಧತೆಗೆ ನಂಬರ್ ಒನ್ ಮಾಡಲು ನಾವು ನೀವೆಲ್ಲರೂ ಶ್ರಮಿಸೋಣ ಎಂದರು.

ಸದಸ್ಯ ರಾಹುಲ‌ ಜಾಧವ್ ಮಾತನಾಡಿ, ನಿತ್ಯ ಸೂರ್ಯೋದಯವಾದಂತೆ ಪೌರ ಕಾರ್ಮಿಕರ ಕೆಲಸ ಶುರು ಆಗುತ್ತದೆ. ಯಾವುದೇ ಬಿಡುವಿಲ್ಲದ ಕೆಲಸ ಮಾಡುವ ಕಾಯಕ ಜೀವಿಗಳು ನಮ್ಮ ಪೌರಕಾರ್ಮಿಕರು. ಹೀಗಾಗಿ ಪಾಲಿಕೆಗೆ ಬರುವ ಅನುದಾನದಲ್ಲಿ ಪೌರಕಾರ್ಮಿಕರ ಸಹಾಯಕ್ಕೆ ಒಂದಿಷ್ಟು ಭಾಗ ಇದ್ದೇ ಇದೆ. ತಾವೆಲ್ಲರೂ ಸರ್ಕಾರದ ಸೌಲಭ್ಯಗಳನ್ನು ಪಡೆಯಬೇಕು. ನಿಮ್ಮೆಲ್ಲರ ಸಹಕಾರದಿಂದ ವಿಜಯಪುರ ನಗರವನ್ನು ಮತ್ತಷ್ಟು ಸುಂದರಗೊಳಿಸೋಣ ಎಂದು ಹೇಳಿದರು.

ಮನೋವೈದ್ಯ ಡಾ.ಮಂಜುನಾಥ ಮಸಳಿ ಉಪನ್ಯಾಸ ನೀಡಿದರು. ಪೌರಕಾರ್ಮಿಕರಿಗಾಗಿ ಆಯೋಜಿಸಲಾದ ವಿವಿಧ ಕ್ರೀಡಾಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಮಹಾನಗರ ಪಾಲಿಕೆ ಮೇಯರ್‌ ಮಹೇಜಬಿನ್ ಹೊರ್ತಿ, ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕ ಬದ್ರುದ್ದಿನ ಸೌದಾಗರ, ಉಪ ಆಯುಕ್ತ ಮಹಾವೀರ ಬೋರಣ್ಣವರ, ಪಾಲಿಕೆ ಸದಸ್ಯರಾದ ರಾಜು ಕುರಿಯವರ, ರಾಜು ಚವ್ಹಾಣ ಸೇರಿ ಪಾಲಿಕೆ ಸದಸ್ಯರು, ಪೌರಕಾರ್ಮಿಕರು, ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.ಕೋಟ್‌

ಪೌರ ಕಾರ್ಮಿಕರ ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಹಲವಾರು ಯೋಜನೆಗಳಿವೆ. ಈಗಾಗಲೇ ಪಾಲಿಕೆ ವತಿಯಿಂದ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಟ್ಯಾಬ್‌ಗಳನ್ನು ವಿತರಿಸಲಾಗಿದೆ. ಆರೋಗ್ಯದ ದೃಷ್ಟಿಯಿಂದ ಹಾಗೂ ಮಕ್ಕಳ ಶೈಕ್ಷಣಿಕ ಉನ್ನತಿಗಾಗಿ ಈಗಾಗಲೇ ಮಾಹಿತಿ ಕಾರ್ಯಗಾರ ಹಮ್ಮಿಕೊಂಡಿದ್ದು, ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ಸೌಲಭ್ಯಗಳನ್ನು ಬಳಸಿಕೊಕೊಳ್ಳಬೇಕು.

ವಿಜಯಕುಮಾರ ಮೆಕ್ಕಳಕಿ, ಮಹಾನಗರ ಪಾಲಿಕೆ ಆಯುಕ್ತ

Share this article