ಕನ್ನಡಪ್ರಭ ವಾರ್ತೆ ಹನೂರು
ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಪಬ್ಲಿಕ್ ಶಾಲೆಯಲ್ಲಿ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯಿಂದ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಎಂಬ ಘೋಷವಾಕ್ಯದಡಿ ಆಯೋಜಿಸಲಾಗಿದ್ದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕಂದಾಯ, ಪಿಂಚಣಿ, ಪಡಿತರ ಚೀಟಿ, ರಸ್ತೆ, ಚರಂಡಿ, ಕುಡಿಯುವ ನೀರು ಸೇರಿ ಇನ್ನಿತರೆ ಸಮಸ್ಯೆಗಳಿಗೆ ಒಂದೇ ಸೂರಿನಡಿ ಪರಿಹಾರ ಒದಗಿಸಲು ಹಾಗೂ ಈಗಾಗಲೇ ಬಂದಿರುವ ಅರ್ಜಿಗಳನ್ನು ವಿಲೇವಾರಿ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.
ಜೆಜೆಎಂ ಯೋಜನೆಯಡಿ ಕುಡಿಯುವ ನೀರು ಒದಗಿಸಲು ಪೈಪ್ ಲೈನ್ ಕಾಮಗಾರಿಗೆ ಅರಣ್ಯ ಇಲಾಖೆಯಿಂದ ಅನುಮತಿ ಕ್ಲಿಯರೆನ್ಸ್ ಆಗಿರಲಿಲ್ಲ. ಇದೀಗ ಫಾರೆಸ್ಟ್ ವೈಲ್ಡ್ ಲೈಫ್ ಕ್ಲಿಯರ್ ಆಗಿದೆ. ರಿಸರ್ವ್ ಫಾರೆಸ್ಟ್ ನಿಂದ ಅನುಮತಿ ಆಗಿಲ್ಲ. ಕೇಂದ್ರಕ್ಕೆ ಮಾಹಿತಿ ಕಳುಹಿಸಲಾಗಿದೆ. ಮದ್ಯದಂಗಡಿ ಮಾಲೀಕರ ಕರೆದು ಅಬಕಾರಿ ಮತ್ತು ಪೊಲೀಸ್ ಇಲಾಖೆ ಜಂಟಿ ಸಭೆ ನಡೆಸಬೇಕು. ಕಿರಾಣಿ ಅಂಗಡಿಯಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಇಲ್ಲವಾದರೂ ತಾಲೂಕಲ್ಲಿ ಇನ್ನೂ ಮಾರಾಟವಿದೆ. ಇದಕ್ಕೆ ಕಡಿವಾಣ ಯಾಕಿಲ್ಲ ಎಂದು ಪ್ರಶ್ನಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.ರೈತರು ಬೆಳೆ ವಿಮೆ ಮಾಡಿಸಿಕೊಳ್ಳಬೇಕು. ಹನೂರಲ್ಲಿ 50 ಹಾಸಿಗೆಯುಳ್ಳ ಆಸ್ಪತ್ರೆ ಕಾಮಗಾರಿ ನಡೆಯುತ್ತಿದೆ. 100 ಹಾಸಿಗೆಯುಳ್ಳ ಆಸ್ಪತ್ರೆ ಆಗಲೇಬೇಕು, ಇದಕ್ಕೆ ಹೋರಾಟ ಮಾಡುತ್ತಿದ್ದೇನೆ. ದೊಡ್ಡಕೆರೆ ಒತ್ತುವರಿ ತೆರವು ಮಾಡಿಸಬೇಕು. ಬಸ್ ಡಿಪೋ ಆಗಲಿದ್ದು, ಸಾರಿಗೆ ವ್ಯವಸ್ಥೆ ಸರಿಯಾಗಲಿದೆ ಎಂದರಲ್ಲದೆ, ಪಾಳ್ಯ, ಪಿಜಿ ಪಾಳ್ಯ, ಒಡೆಯರ್ ಪಾಳ್ಯ ಭಾಗಕ್ಕೆ ಅಗತ್ಯ ಸಮಯಕ್ಕೆ ಸಾರಿಗೆ ವ್ಯವಸ್ಥೆ ಮಾಡಲು ಸೂಚನೆ ನೀಡಿದರು.
ಹನೂರು ತಾಲೂಕು ತಹಸೀಲ್ದಾರ್ ಚೈತ್ರ, ಬಿಇಒ ಪ್ರತಿಭಾ, ಇಒ ಉಮೇಶ್, ಇನ್ಸ್ಪೆಕ್ಟರ್ ಆನಂದ್ ಮೂರ್ತಿ ಸೇರಿ ವಿವಿಧ ಇಲಾಖೆ ಅಧಿಕಾರಿಗಳು, ರೈತ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.