ಕನ್ನಡಪ್ರಭ ವಾರ್ತೆ ವಿರಾಜಪೇಟೆ
ಪುರಸಭೆ ಪೌರಕಾರ್ಮಿಕ ಸೇವಾ ಸಮಿತಿ ವಿರಾಜಪೇಟೆ ವತಿಯಿಂದ ವಿರಾಜಪೇಟೆ ನಗರದ ಪುರಭವನದಲ್ಲಿ ಪೌರಕಾರ್ಮಿಕ ದಿನಾಚರಣೆ ಅಂಗವಾಗಿ ಬುಧವಾರ ನಡೆದ ಪೌರಕಾರ್ಮಿಕರಿಗೆ ಸನ್ಮಾನ ಮತ್ತು ವಿವಿದ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ತವ್ಯದ ವೇಳೆಯಲ್ಲಿ ಸಾರ್ವಜನಿಕರೊಂದಿಗೆ ಗುರುತಿಸುವ ಕೆಲಸವಾಗಬೇಕು. ಸಾರ್ವಜನಿಕರಿಂದ ಯಾವುದೇ ದೂರು ಬಾರದ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವುದು ಸೂಕ್ತ ಎಂದರು.ಪುರಸಭೆ ಮುಖ್ಯಾಧಿಕಾರಿ ಚಂದ್ರಕುಮಾರ್ ಎ. ಪ್ರಾಸ್ತಾವಿಕ ಮಾತನಾಡಿ, ಪೌರಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅನುದಾನ ಮತ್ತು ಆರೋಗ್ಯ ವಿಮೆ ಹಾಗೂ ಇತರ ಸೌಲಭ್ಯಗಳನ್ನು ಪೌರಕಾರ್ಮಿಕರಿಗೆ ಒದಗಿಸಿಕೊಡುವಲ್ಲಿ ಪೂರಕವಾಗಿ ಸ್ಪಂದಿಸಲಾಗುತ್ತದೆ ಎಂದು ಭರವಸೆ ನೀಡಿದರು.
ಸೇವೆಯಿಂದ ನಿವೃತ್ತರಾದ ವಸಂತ್ ಮತ್ತು ವೇಲಾ ಹಾಗೂ ಮುಖ್ಯಾಧಿಕಾರಿ ಚಂದ್ರಕುಮಾರ್ ಎ. ಅವರನ್ನು ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
ಪೌರಕಾರ್ಮಿಕರ ಸೇವಾ ಸಮಿತಿ ಅಧ್ಯಕ್ಷ ಇರ್ಫಾನ್, ಉಪಾಧ್ಯಕ್ಷ ಎಚ್.ಕೆ. ಸುಂದರ, ಕಾರ್ಯದರ್ಶಿ ವೇಲು ಮುರುಗ, ಪುರಸಭೆ ಸದಸ್ಯರಾದ ಪಟ್ಟಡ ರಂಜಿ ಪೂಣಚ್ಚ, ಮೊಹಮ್ಮದ್ ರಾಫಿ, ಡಿ.ಪಿ. ರಾಜೇಶ್, ಆಗಸ್ಟೀನ್ ಬೆನ್ನಿ, ಎಸ್.ಎಚ್. ಮತೀನ್, ಅಬ್ದುಲ್ ಜಲೀಲ್, ಎಚ್.ಪೂರ್ಣಿಮಾ, ನಾಮ ನಿರ್ದೇಶಿತ ಸದಸ್ಯರಾದ ಮೋಹನ್ ಕುಮಾರ್ ಜಿ.ಜಿ, ದಿನೇಶ್ ನಂಬಿಯಾರ್ ಮತ್ತಿತರರಿದ್ದರು.