ಕನ್ನಡ್ರಭ ವಾರ್ತೆ ಜಮಖಂಡಿ
ಯುವಜನರು ಮಾನಸಿಕ ಒತ್ತಡ ಹಾಗೂ ಖಿನ್ನತೆಯ ಸಮಸ್ಯೆ ಎದುರಿಸುತ್ತಿದ್ದಾರೆ. ಆತ್ಮವಿಶ್ವಾಸ, ಸಕಾರಾತ್ಮಕ ಚಿಂತನೆ, ಜೀವನ ಮೌಲ್ಯಗಳನ್ನು ಬೆಳೆಸುವ ಕೆಲಸ ಆಗಬೇಕು. ಯುವಶಕ್ತಿಯನ್ನು ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸುವುದು ಸಮಾಜದ ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಹಂಪಸಾಗರ ನವಲಿ ಹಿರೇಮಠದ ಅಭಿನವ ಶಿವಲಿಂಗ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಧಾರ್ಮಿಕ ಆದರ್ಶಗಳು ಮನುಷ್ಯನನ್ನು ಉತ್ತಮ ವ್ಯಕ್ತಿಯನ್ನಾಗಿ ರೂಪಿಸಿ ಸಮಾಜದಲ್ಲಿ ಶಾಂತಿ, ಸಾಮರಸ್ಯ ಮತ್ತು ಸಹಬಾಳ್ವೆ ಬೆಳೆಸುತ್ತವೆ ಎಂದು ಹೇಳಿದರು. ಗ್ರಾಮೀಣ ಪ್ರದೇಶಗಳಲ್ಲಿ ಭಕ್ತಿ ಮತ್ತು ಶ್ರದ್ಧೆ ಇಂದಿಗೂ ಉಳಿದುಕೊಂಡಿವೆ. ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಯುವಜನರಿಗೆ ಪ್ರತಿನಿತ್ಯ ಉಪಯುಕ್ತ ಸಂದೇಶಗಳನ್ನು ನೀಡುವುದರಿಂದ ಅವರು ಸಮಾಜಮುಖಿಯಾಗಿ ಬೆಳೆಯಲು ಸಾಧ್ಯ. ಧರ್ಮವು ಸಮಾಜದ ಜೀವನಕ್ರಮ, ಸಂಸ್ಕೃತಿ ಹಾಗೂ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಸಮಾಜವನ್ನು ಸಮಗ್ರವಾಗಿ ಗಮನಿಸಿದಾಗ ಧಾರ್ಮಿಕ ಪರಂಪರೆ ಮತ್ತು ಅದರ ಪ್ರಾತಿನಿಧ್ಯದ ಮಹತ್ವ ಎದ್ದು ಕಾಣುತ್ತದೆ ಎಂದು ವಿಧಾನ ಪರಿಷತ್ ಉಪ ಸಭಾಪತಿ ಉಮಾಶ್ರೀ ಹೇಳಿದರು.
ನೇತೃತ್ವ ವಹಿಸಿದ ಗುಳೇದಗುಡ್ಡ ಅಮರೇಶ್ವರ ಮಠದ ಡಾ. ನೀಲಕಂಠ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ಕಾಯಕ ಧರ್ಮಕ್ಕೆ ವೀರಶೈವ ಸಿದ್ಧಾಂತದಲ್ಲಿ ಮಹತ್ವದ ಸ್ಥಾನವಿದೆ. ಸತ್ಯ, ಪ್ರಾಮಾಣಿಕತೆ ಹಾಗೂ ಕರ್ತವ್ಯ ನಿಷ್ಠೆಯಿಂದ ಬದುಕಬೇಕು ಎಂದು ತಿಳಿಸಿದರು.ಶಾಸಕ ಜಗದೀಶ ಗುಡಗುಂಟಿ, ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಉಪಸ್ಥಿತರಿದ್ದರು. ಮುತ್ತಿಕಂತಿ ಹಿರೇಮಠದ ಶಿವಲಿಂಗ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ವಹಿಸಿದ್ದರು.