ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾರಾಮಾರಿ

KannadaprabhaNewsNetwork |  
Published : Apr 28, 2024, 01:17 AM IST
ಫೋಟೋ : 27 ಹೆಚ್‌ಎಸ್‌ಕೆ 4 ಹೊಸಕೋಟೆ ತಾಲೂಕಿನ  ಮಲಿಯಪ್ಪನಹಳ್ಳಿ ಗ್ರಾಮದಲ್ಲಿ ಕ್ಷÄಲ್ಲಕ ಕಾರಣಕ್ಕೆ  ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದು  ಚಿಕಿತ್ಸೆ ಪಡೆಯುತ್ತಿರುವ  ಕಾರ್ಯಕರ್ತನನ್ನ ಮಾಜಿ ಸಚಿವ ಎಂಟಿಬಿ ನಾಗರಾಜ್ ಭೇಟಿ ನೀಡಿ  ಯೋಗ ಕ್ಷೇಮ ವಿಚಾರಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ತಾಲೂಕಿನ ನಂದಗುಡಿಯ ಹೋಬಳಿಯ ಮಲಿಯಪ್ಪನಹಳ್ಳಿಯಲ್ಲಿ ಚುನಾವಣೆ ದಿನವಾದ ಏ.26ರಂದು ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಬಿಜೆಪಿ ಹಾಗು ಕಾಂಗ್ರೆಸ್ ತಲಾ ಒಬ್ಬ ಕಾರ್ಯಕರ್ತರಿಗೆ ಗಾಯಗಳಾಗಿದ್ದು ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಾಗಿದೆ.

ಹೊಸಕೋಟೆ: ತಾಲೂಕಿನ ನಂದಗುಡಿಯ ಹೋಬಳಿಯ ಮಲಿಯಪ್ಪನಹಳ್ಳಿಯಲ್ಲಿ ಚುನಾವಣೆ ದಿನವಾದ ಏ.26ರಂದು ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಬಿಜೆಪಿ ಹಾಗು ಕಾಂಗ್ರೆಸ್ ತಲಾ ಒಬ್ಬ ಕಾರ್ಯಕರ್ತರಿಗೆ ಗಾಯಗಳಾಗಿದ್ದು ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಾಗಿದೆ.

ಏ.26ರ ಮತದಾನದ ದಿನದಂದು ಮಲಿಯಪ್ಪನಹಳ್ಳಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು ಗಲಾಟೆ ವೇಳೆ ಬಿಜೆಪಿ ಕಾರ್ಯಕರ್ತ ಮುನಿರತ್ನಪ್ಪನ ತಲೆಗೆ ಪೆಟ್ಟಾಗಿ ಹೊಸಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರಾದ ಮೌನಿಕ್, ಅರುಣ್, ವೆಂಕಟರಾಜು, ವೆಂಕಟೇಶ್, ಪ್ರಮೋದ್, ಮೌನೇಶ್ ಅವರ ಮೇಲೆ ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಜಿ ಸಚಿವ ಎಂಟಿಬಿ ನಾಗರಾಜ್ ಭೇಟಿ:

ಗಾಯಗೊಂಡಿರುವ ಬಿಜೆಪಿ ಕಾರ್ಯಕರ್ತ ಮುನಿರತ್ನಪ್ಪನನ್ನು ಮಾಜಿ ಸಚಿವ ಎಂಟಿಬಿ ನಾಗರಾಜ್ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿ ಮಾತನಾಡಿ, ಹೊಸಕೋಟೆ ತಾಲೂಕಿನಲ್ಲಿ ಈ ಹಿಂದೆ ಈ ರೀತಿಯ ಹಲ್ಲೆಗಳು ನಡೆಯುತ್ತಿದ್ದವು. ನಾನು ಅಧಿಕಾರಕ್ಕೆ ಬಂದ ನಂತರ ಇವೆಲ್ಲಕ್ಕೆ ಕಡಿವಾಣ ಹಾಕಿದ್ದೆ. ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿದ್ದು ನಾನು ಚುನಾವಣೆಯಲ್ಲಿ ಸೋತಿದ್ದೇನೆ. ಈಗ ಹೊಸಕೋಟೆಯಲ್ಲಿ ಮತ್ತೆ ಹಳೆಯ ಚಾಳಿ ಮುಂದುವರೆಯುತ್ತಿದೆ. ನಮ್ಮ ಕಾರ್ಯಕರ್ತರಿಗೆ ಯಾವುದೇ ರೀತಿಯ ತೊಂದರೆ ಆದರೆ ನಾನು ಸುಮ್ಮನಿರಲ್ಲ. ಈ ವಿಚಾರವಾಗಿ ಎಸ್ಪಿ ಅವರ ಬಳಿ ಮಾತನಾಡಿದ್ದು ಕೂಲಂಕುಶವಾಗಿ ಪ್ರಕರಣದ ತನಿಖೆ ಮಾಡಬೇಕು. ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಫೋಟೋ : 27 ಹೆಚ್‌ಎಸ್‌ಕೆ 4ಹೊಸಕೋಟೆ ತಾಲೂಕಿನ ಮಲಿಯಪ್ಪನಹಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದು ಚಿಕಿತ್ಸೆ ಪಡೆಯುತ್ತಿರುವ ಕಾರ್ಯಕರ್ತನನ್ನ ಮಾಜಿ ಸಚಿವ ಎಂಟಿಬಿ ನಾಗರಾಜ್‌ ಯೋಗಕ್ಷೇಮ ವಿಚಾರಿಸಿದರು.

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ