ರಾಜರ ಕಾಲದಲ್ಲಿಯೇ ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ: ಕಳಲೆ ಕೇಶವಮೂರ್ತಿ

KannadaprabhaNewsNetwork |  
Published : May 06, 2026, 01:15 AM IST
54 | Kannada Prabha

ಸಾರಾಂಶ

ಪ್ರಾಂತೀಯ ಭಾಷೆಗಳಲ್ಲಿ ಕನ್ನಡಕ್ಕೆ ತನ್ನದೇ ಆದ ಪ್ರಾಮುಖ್ಯತೆಯನ್ನು ತಂದುಕೊಡಬೇಕು ಎಂಬ ಸದುದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪಿಸಿ, ಆ ಮೂಲಕ ನಾಡಿನ ಸಾಹಿತ್ಯ ಮತ್ತು ಸಂಸ್ಕೃತಿ ಉಳಿಸಿ ಬೆಳೆಸಲು ಶ್ರಮಿಸುತ್ತಿದೆ, ನಾಲ್ವಡಿ ಅವರ ಪರಿಶ್ರಮದಿಂದಾಗಿ ಇಂದು ಕನ್ನಡ ಭಾಷೆ ಶಾಸ್ತ್ರೀಯ ಸ್ಥಾನಮಾನ ಲಭಿಸಿದೆ.

ಕನ್ನಡಪ್ರಭ ವಾರ್ತೆ ನಂಜನಗೂಡು

ಕನ್ನಡ ಭಾಷೆಯನ್ನು ಶ್ರೀಮಂತ ಗೊಳಿಸುವ ಉದ್ದೇಶದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 1915 ರಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪಿಸಿದರು, ಕನ್ನಡ ಸಾಹಿತ್ಯ ಪರಿಷತ್ ಕೇವಲ ಸಾಹಿತ್ಯದ ವೇದಿಕೆಯಲ್ಲ ಬದಲಾಗಿ ನಮ್ಮ ಕನ್ನಡ ಭಾಷೆಯ ಅಸ್ಮಿತೆಯಾಗಿದೆ ಎಂದು ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಹೇಳಿದರು.

ಪಟ್ಟಣದ ಭಾರತಿ ತೀರ್ಥ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ 112ನೇ ಸಂಸ್ಥಾಪನಾ ದಿನಾಚರಣೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಾಂತೀಯ ಭಾಷೆಗಳಲ್ಲಿ ಕನ್ನಡಕ್ಕೆ ತನ್ನದೇ ಆದ ಪ್ರಾಮುಖ್ಯತೆಯನ್ನು ತಂದುಕೊಡಬೇಕು ಎಂಬ ಸದುದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪಿಸಿ, ಆ ಮೂಲಕ ನಾಡಿನ ಸಾಹಿತ್ಯ ಮತ್ತು ಸಂಸ್ಕೃತಿ ಉಳಿಸಿ ಬೆಳೆಸಲು ಶ್ರಮಿಸುತ್ತಿದೆ, ನಾಲ್ವಡಿ ಅವರ ಪರಿಶ್ರಮದಿಂದಾಗಿ ಇಂದು ಕನ್ನಡ ಭಾಷೆ ಶಾಸ್ತ್ರೀಯ ಸ್ಥಾನಮಾನ ಲಭಿಸಿದೆ, ಜೊತೆಗೆ ವಿವಿಧ ರಾಜ್ಯಗಳ ಪೈಪೋಟಿಯ ನಡುವೆ ನಮ್ಮ ನಾಡಿನ ಕವಿಗಳು ಕನ್ನಡ ಭಾಷೆಗೆ 9 ಜ್ಞಾನಪೀಠ ಪ್ರಶಸ್ತಿಗಳನ್ನು ತಂದು ಕೊಡುವ ಮೂಲಕ ಕನ್ನಡ ಭಾಷೆಯ ಹಿರಿಮೆಯನ್ನು ದೇಶ ವಿದೇಶಗಳಲ್ಲಿ ಸಾರುವ ಮೂಲಕ ಕನ್ನಡ ಭಾಷೆಗೆ ತನ್ನದೇ ಆದ ಶಕ್ತಿ ಇದೆ ಎಂಬುದನ್ನು ಸಾಬೀತು ಮಾಡಿದ್ದಾರೆ ಎಂದರು.

ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದಿನೇಶ್ ಮಾತನಾಡಿ, ಮಾತೃಭಾಷೆಯಿಂದ ಮಾತ್ರ ಜೀವನದಲ್ಲಿ ಸಾಧನೆ ಸಾಧ್ಯ, ಆದ್ದರಿಂದ ವಿದ್ಯಾರ್ಥಿಗಳು ಇಂಗ್ಲೀಷ್ ವ್ಯಾಮೋಹ ಹಾಗೂ ಕೀಳರಿಮೆಯನ್ನು ಬಿಟ್ಟು, ಶ್ರದ್ಧೆ ಪರಿಶ್ರಮದಿಂದ ಕನ್ನಡ ಭಾಷೆಯನ್ನು ಬರೆದು ಓದುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು, ಆ ಮೂಲಕ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕಿದೆ ಎಂದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 125 ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಕಸಾಪ ತಾಲೂಕು ಅಧ್ಯಕ್ಷ ಲತಾ ಮುದ್ದು ಮೋಹನ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಬಿ.ವಿ. ರಾಘವೇಂದ್ರ, ಅನಿತಾ, ಸತೀಶ್ ದಳವಾಯಿ, ರಂಗಸ್ವಾಮಿ, ಶೋಭಾ ನಾಗಶಯನ, ಮಂಜುಳಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇಂದ್ರ ಸರ್ಕಾರದ ಸೌಲಭ್ಯ ಸಮರ್ಥ ಬಳಕೆ ಅಗತ್ಯ
ಸಾಮೂಹಿಕ ವಿವಾಹಗಳು ಸಾಮಾಜಿಕ ಬದಲಾವಣೆ ಅಸ್ಮಿತೆ