ಕನ್ನಡಪ್ರಭ ವಾರ್ತೆ ಬ್ರಹ್ಮಾವರ
ಉಡುಪಿಯ ಪೋದಾರ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಪ್ರಾಂಶುಪಾಲ ಉದಯ್ ಕುಮಾರ್ ಎ. ಎನ್., ನಿಟ್ಟೆಯ ಎನ್.ಎಸ್.ಎ.ಎಮ್. ಆಂಗ್ಲಮಾಧ್ಯಮ ಶಾಲೆಯ ಪ್ರಾಂಶುಪಾಲೆ ರಾಧಾ ಪ್ರಭು ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.
ಜಿ.ಎಂ.ಶಾಲೆಯ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ, ಮಕ್ಕಳು ಇಂದು ಚತುರರಾಗಿದ್ದಾರೆ. ಆಧುನಿಕತೆಗೆ ತಕ್ಕಂತೆ ನಮ್ಮ ಜ್ಞಾನ ನವೀಕರಣಗೊಂಡಾಗ ಮಾತ್ರ ಮಕ್ಕಳ ಮನಸ್ಸನ್ನು ಗೆಲ್ಲಲು ಸಾಧ್ಯ ಎಂದರು.ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಜಿ. ಎಂ.ನ ಧ್ಯೇಯ ಮಕ್ಕಳ ಸರ್ವತೋಮುಖ ಅಭಿವೃದ್ಧಿಯಾಗಿದೆ. ಇದಕ್ಕೆ ಸಾಕಷ್ಟು ಪೂರ್ವಸಿದ್ಧತೆ, ಯೋಜನೆಗಳು ಮುಖ್ಯ. ಈ ನಿಟ್ಟಿನಲ್ಲಿ ಶಾಲಾ ಪ್ರಾರಂಭದ ಮೊದಲೇ ಶಿಕ್ಷಕರಿಗೆ ಮತ್ತು ಪೋಷಕರಿಗೆ ಹಲವಾರು ಕಾರ್ಯಾಗಾರಗಳನ್ನು ಆಯೋಜಿಸಲಾಗಿದೆ. ಇದನ್ನು ಎಲ್ಲಾ ಶಿಕ್ಷಕರು ಹಾಗೂ ಪೋಷಕರು ಸದುಪಯೋಗಪಡಿಸಿಕೊಳ್ಳಬೇಕೆಂದರು.
ಎರಡು ದಿನಗಳ ಕಾರ್ಯಾಗಾರದಲ್ಲಿ ಪರಿಣಾಮಕಾರಿ ತರಗತಿ ನಿರ್ವಹಣೆಯ ಕೌಶಲ್ಯ, ಸಮಯ ಪಾಲನೆ, ಶಿಸ್ತು, ಮಾನಸಿಕ ಸ್ವಾಸ್ಥ್ಯ, ಪರಿಣಾಮಕಾರಿ ಬೋಧನೆ ಮತ್ತು ಕಲಿಕೆ, ಪಾಠ ಯೋಜನೆ ಮತ್ತು ಅನ್ವಯ ಮುಂತಾದ ವಿಷಯಗಳ ಕುರಿತು ಪ್ರಾತ್ಯಕ್ಷಿಕ ತರಬೇತಿ ನೀಡಲಾಯಿತು.