ಸ್ವಚ್ಛ ಅಂಗನವಾಡಿ-ಬಾಲ ಸ್ನೇಹಿ ಅಂಗನವಾಡಿ ಅಭಿಯಾನ

KannadaprabhaNewsNetwork |  
Published : Apr 18, 2025, 12:36 AM IST
ಸ್ವಚ್ಛ ಅಂಗನವಾಡಿ-ಬಾಲ ಸ್ನೇಹಿ ಅಂಗನವಾಡಿ ಅಭಿಯಾನ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿಯ ಎರಡು ಅಂಗನವಾಡಿ ಕೇಂದ್ರಗಳ ಆವರಣದಲ್ಲಿ ಸ್ವಚ್ಛ ಅಂಗನವಾಡಿ-ಬಾಲಸ್ನೇಹಿ ಅಂಗನವಾಡಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಸಿಇಒ ರಿಷಿ ಆನಂದ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿಯ ಎರಡು ಅಂಗನವಾಡಿ ಕೇಂದ್ರಗಳ ಆವರಣದಲ್ಲಿ ಸ್ವಚ್ಛ ಅಂಗನವಾಡಿ-ಬಾಲಸ್ನೇಹಿ ಅಂಗನವಾಡಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಸಿಇಒ ರಿಷಿ ಆನಂದ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿದ ಅವರು, ಪ್ರಸ್ತುತ ಆರಂಭಿಸಲಾಗಿರುವ ಈ ಅಭಿಯಾನದಡಿ ಪ್ರತಿವಾರ ಎಲ್ಲ ಗ್ರಾಮ ಪಂಚಾಯತಿ ವ್ಯಾಪ್ತಿಯಡಿ ಬರುವ ಮೂರು ಅಂಗನವಾಡಿ ಕೇಂದ್ರಗಳ ಸಂಪೂರ್ಣ ಸ್ವಚ್ಛತೆಗ ಆದ್ಯತೆ ನೀಡಲಾಗುತ್ತದೆ. ಸಂತೋಷದಿಂದ ಮಕ್ಕಳು ಅಂಗನವಾಡಿಗಳತ್ತ ಹೆಜ್ಜೆ ಹಾಕುವ ವಾತಾವರಣ ನಿರ್ಮಾಣಕ್ಕಾಗಿ ಉತ್ತಮ ಪರಿಸರ ನಿರ್ಮಾಣ ಮಾಡಲಾಗುತ್ತಿದೆ. ಮತ್ತು ಮಕ್ಕಳ ಕಲಿಕೆಗೆ ಪ್ರೇರಣೆ ಒದಗಿಸಲಾಗುತ್ತಿದೆ. ಅಂಗನವಾಡಿಗಳು ಮಕ್ಕಳ ಶೈಕ್ಷಣಿಕ ಜೀವನದ ಬುನಾದಿ ಹಂತವಾಗಿದೆ. ಈ ಹಂತದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ, ಆರೋಗ್ಯ, ಪೌಷ್ಟಿಕ ಆಹಾರ, ಅವರ ಸುರಕ್ಷತೆ ಅಗತ್ಯವಾಗಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸ್ವಚ್ಛತೆಯೊಂದಿಗೆ ಮಕ್ಕಳ ಸುರಕ್ಷತೆಗೂ ಗಮನ ವಹಿಸುವ ನಿಟ್ಟಿನಲ್ಲಿ ಕೇಂದ್ರದ ಸುತ್ತಮುತ್ತ ಅಪಾಯಕಾರಿ ವಸ್ತುಗಳ ಇಲ್ಲದೇ ಇರುವಂತೆ ಖಾತ್ರಿಪಡಿಸಿಕೊಳ್ಳಬೇಕು. ಮಕ್ಕಳ ಸ್ನೇಹಿ ಅಂಗನವಾಡಿಗಳನ್ನಾಗಿಸಿ, ಹೈಟೆಕ್ ಸ್ಪರ್ಶ ನೀಡುವ ಕಾರ್ಯ ಕೈಗೊಳ್ಳಲಾಗುತ್ತಿದೆ. ಅಗತ್ಯ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಶುದ್ಧ ಗಾಳಿ, ಶೌಚಾಲಯ ವ್ಯವಸ್ಥೆ, ಪೌಷ್ಟಿಕ ಆಹಾರ, ವಿದ್ಯುತ್ ವ್ಯವಸ್ಥೆ, ಪೀಠೋಪಕರಣಗಳು, ವಿನೂತನ ಕಲಿಕಾ ಸಾಮಗ್ರಿಗಳು, ಆಟಿಕೆ ಸಾಮಗ್ರಿಗಳ ವ್ಯವಸ್ಥೆಗೆ ಕ್ರಮ ವಹಿಸಲಾಗಿದೆ. ಗ್ರಾಮ ಪಂಚಾಯತಿಯ ಲಭ್ಯ ಅನುದಾನ ಬಳಸಿ, ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಆಕರ್ಷಣೀಯ ಚಿತ್ರಗಳನ್ನು ಬಿಡಿಸುವುದು, ಸಣ್ಣ-ಪುಟ್ಟ ದುರಸ್ತಿ ಕಾರ್ಯಗಳನ್ನು ಕೈಗೊಳ್ಳುವುದು, ಕೇಂದ್ರಗಳಲ್ಲಿ ಸ್ಥಳಾವಕಾಶ ಇದ್ದಲ್ಲಿ ಬಯೋ ಫೆನ್ಸಿಂಗ್ ಕ್ರಮ ಕೈಗೊಳ್ಳುವುದು. ಅಡುಗೆ ಮತ್ತು ದಾಸ್ತಾನು ಕೊಠಡಿ ವ್ಯವಸ್ಥಿತವಾಗಿಡುವುದು. ಕೇಂದ್ರದ ಕಿಟಕಿಗಳಿಗೆ ಸೊಳ್ಳೆ ಪರದೆ ಅಳವಡಿಸುವುದು, ಆವರಣದಲ್ಲಿ ಪೌಷ್ಟಿಕ ತೋಟ ನಿರ್ಮಿಸುವುದು ಎಂದರು.

ತಿಂಗಳ ಮೊದಲನೇ ಶನಿವಾರ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ