ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಆರೋಗ್ಯವಂತನಾಗಿರಲು ಶುದ್ಧ ಕುಡಿಯುವ ನೀರು ಮನುಷ್ಯನಿಗೆ ಅತಿ ಅವಶ್ಯಕ. ಚಿಕ್ಕಂದಿನಿಂದಲೇ ಮಕ್ಕಳು ಒಳ್ಳೆಯ ಆರೋಗ್ಯ ಕಾಪಾಡಿಕೊಂಡು ಬಂದಲ್ಲಿ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಲಿದ್ದಾರೆ ಎಂದು ಎಐಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ, ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾಗಿರುವ ಡಾ.ಪ್ರಭುಗೌಡ ಲಿಂಗದಳ್ಳಿ (ಚಬನೂರ) ಹೇಳಿದರು.

ತಾಲೂಕಿನ ಹುಣಶ್ಯಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿ ಗುರುವಾರ ಶುದ್ಧ ಕುಡಿಯುವ ನೀರಿನ ಘಟಕ ಶಾಲೆಗೆ ಹಸ್ತಾಂತರಿಸಿ ಮಾತನಾಡಿದರು. ಉತ್ತಮ ಆರೋಗ್ಯಕ್ಕೆ ಶುದ್ಧ ಕುಡಿಯುವ ನೀರು ಅವಶ್ಯಕವಾಗಿದೆ. ಮನುಷ್ಯನ ಮೂಲಭೂತ ಅವಶ್ಯಕತೆಯೂ ಇದಾಗಿದೆ. ಶಾಲಾ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಸುರಕ್ಷಿತ ಕುಡಿಯುವ ನೀರನ್ನು ಒದಗಿಸುವುದು ನಮ್ಮೆಲ್ಲರ ಪ್ರಾಥಮಿಕ ಆದ್ಯತೆ ಹಾಗೂ ಗುರಿಗಳಲ್ಲಿ ಒಂದಾಗಬೇಕು ಎಂದು ತಿಳಿಸಿದರು.ಗ್ರಾಮದ ಮುಖಂಡ ಶಂಕ್ರಪ್ಪ ಬಂಗಾರಗುಂಡ, ಶಾಲೆಯ ಮುಖ್ಯ ಗುರುಗಳಾದ ಬಾಪುಗೌಡ ಕೋಟಿಖಾನಿ ಹಾಗೂ ಎಸ್‌ಡಿಎಂಸಿ ಅಧ್ಯಕ್ಷರಾದ ಸೋಮನಗೌಡ ಕೋಟಿಖಾನಿ ಮಾತನಾಡಿ, ಶಾಲೆಯ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಅನುವು ಮಾಡಿಕೊಟ್ಟ ಡಾ.ಪ್ರಭುಗೌಡ ಅವರಿಗೆ ಗ್ರಾಮಸ್ಥರು ಸನ್ಮಾನಿಸಿ ಧನ್ಯವಾದಗಳು ತಿಳಿಸಿದರು.ಇದೇ ಸಂದರ್ಭದಲ್ಲಿ ಗ್ರಾಮದ ಪ್ರಮುಖರು, ಗಣ್ಯರು, ಯುವ ಮುಖಂಡರು, ಎಸ್ಡಿಎಂಸಿ ಪದಾಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.