ಸಾರ್ಜಜನಿಕವಾಗಿ ತ್ಯಾಜ್ಯ ಎಸೆಯುವವರಿಗೆ ಲಕ್ಷ ರು. ದಂಡ ಅವಕಾಶ: ಶೀನ ಶೆಟ್ಟಿ

KannadaprabhaNewsNetwork |  
Published : Mar 15, 2026, 03:00 AM IST
ಸಂವಾದ ಸಂಕಲ್ಪ ಕಾರ್ಯಕ್ರಮ | Kannada Prabha

ಸಾರಾಂಶ

ರಾಷ್ಟ್ರೀಯ ನಿರ್ಮಲ ಗ್ರಾಮ ಪುರಸ್ಕೃತ ಜನಶಿಕ್ಷಣ ಟ್ರಸ್ಟ್ ಆಶ್ರಯದಲ್ಲಿ ಬುಧವಾರ ಸಮುದಾಯ ಆರೋಗ್ಯ ಅರಿವು ಅಭಿಯಾನ, ಕಸ ಮುಕ್ತ ಗ್ರಾಮ-ಕ್ಯಾನ್ಸರ್ ಮುಕ್ತ ಗ್ರಾಮ, ಸ್ವಚ್ಛ ಮನೆ ಸ್ವಯಂ ಘೋಷಣೆ, ಸಂವಾದ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿದರು.

ಉಳ್ಳಾಲ: ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವವರ ವಿರುದ್ಧ ಒಂದು ಲಕ್ಷ ರು.ವರೆಗೆ ದಂಡ ವಿಧಿಸುವ ಕಾನೂನು ಇದ್ದರೂ ಅದರ ಸಮರ್ಪಕ ಜಾರಿಯ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧಿಸಲು ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲಾ ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ ಹೇಳಿದರು.ಮಾದರಿ ಗ್ರಾಮ ಅಭಿಯಾನ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಉಳ್ಳಾಲ ತಾಲೂಕು,ರಾಷ್ಟ್ರೀಯ ನಿರ್ಮಲ ಗ್ರಾಮ ಪುರಸ್ಕೃತ ಜನಶಿಕ್ಷಣ ಟ್ರಸ್ಟ್ ಆಶ್ರಯದಲ್ಲಿ ಬುಧವಾರ ಸಮುದಾಯ ಆರೋಗ್ಯ ಅರಿವು ಅಭಿಯಾನ, ಕಸ ಮುಕ್ತ ಗ್ರಾಮ-ಕ್ಯಾನ್ಸರ್ ಮುಕ್ತ ಗ್ರಾಮ, ಸ್ವಚ್ಛ ಮನೆ ಸ್ವಯಂ ಘೋಷಣೆ, ಸಂವಾದ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿದರು.ಮುಡಿಪು ಬೆಟ್ಟದಲ್ಲಿ ಮುಂದಿನ ತಿಂಗಳು ಉತ್ಸವ ನಡೆಸುವ ಯೋಜನೆ ಹಮ್ಮಿ ಕೊಳ್ಳಲಾಗಿದೆ. ಈ ಉತ್ಸವ ಪ್ಲಾಸ್ಟಿಕ್ ಮುಕ್ತ ಸಂಪೂರ್ಣ ಸ್ವಚ್ಛತೆ ಆಗುವ ನಿಟ್ಟಿನಲ್ಲಿ ಇಂದು ನಡೆಯುವ ಸಂವಾದ ಪೂರಕವಾಗಬೇಕಿದೆ ಎಂದರು.ಪರಿಸರ ಪ್ರೇಮಿ ಮಾಧವ ಉಳ್ಳಾಲ್ ಮಾತನಾಡಿ ಪರಿಸರ ಸಂರಕ್ಷಣೆಗೆ ಕೇವಲ ಗಿಡ ನೆಡುವುದಷ್ಟೇ ಸಾಕಾಗುವುದಿಲ್ಲ; ನೆಟ್ಟ ಗಿಡವನ್ನು ಕನಿಷ್ಠ ಮೂರುವರೆ ವರ್ಷಗಳವರೆಗೆ ಪೋಷಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರದ್ದಾಗಿದೆ. ಮಂಗಳೂರನ್ನು ಹಣ್ಣುಗಳ ನಗರವನ್ನಾಗಿ ರೂಪಿಸುವ ಉದ್ದೇಶದಿಂದ ಬೃಹತ್ ಯೋಜನೆಯನ್ನು ಕೈಗೊಳ್ಳಲಾಗಿದೆ. ಜೈಪುರವು ತನ್ನ ವಿಶೇಷತೆಯಿಂದ ಗುರುತಿಸಿಕೊಂಡಿರುವಂತೆ, ಮಂಗಳೂರು ಮುಂದಿನ ದಿನಗಳಲ್ಲಿ ಹಣ್ಣುಗಳ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗುವ ಗುರಿ ಹೊಂದಿದೆ ಎಂದರು.ಕಾರ್ಯನಿರತ ಪತ್ರಕರ್ತ ಸಂಘ ಜಿಲ್ಲಾಧ್ಯಕ್ಷ ಪುಷ್ಪರಾಜ್ ಬಿ.ಎನ್. ಅಧ್ಯಕ್ಷತೆ ವಹಿಸಿದ್ದರು. ಪರಿಸರ ಪ್ರೇಮಿ ಮಾಧವ ಉಳ್ಳಾಲ್, ಜನಶಿಕ್ಷಣ ಟ್ರಸ್ಟ್ ನಿರ್ದೇಶಕ ಕೃಷ್ಣ ಮೂಲ್ಯ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ, ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಶಶಿಧರ್ ಪೊಯ್ಯತ್ತಬೈಲ್, ರಾಜ್ಯ ಸದಸ್ಯ ಶ್ರೀನಿವಾಸ ನಾಯಕ್, ನಿಟ್ಟೆ ವಿವಿ ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥೆ ಮೌಲ್ಯ ಡಿ. ಮತ್ತಿತರರಿದ್ದರು. ಸಂಘ ಕಾರ್ಯದರ್ಶಿ ದಿನೇಶ್ ನಾಯಕ್ ಸ್ವಾಗತಿಸಿದರು. ಉಪಾಧ್ಯಕ್ಷ ಸತೀಶ್‌ ಪುಂಡಿಕೈ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವೃದ್ಧೆಗೆ ಸಂಕೀರ್ಣ ಸೊಂಟದ ಪುನರ್ನಿರ್ಮಾಣ ಶಸ್ತ್ರಚಿಕಿತ್ಸೆ: ವೃದ್ಧೆ ಚೇತರಿಕೆ
ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಸ್ನಾತಕೋತ್ತರ ವಿದ್ಯಾರ್ಥಿ ಸಾವು