ಸ್ವಚ್ಛ ರಾಜಕಾರಣ ಕೆಆರ್‌ಎಸ್‌ ಪಕ್ಷದ ಸಂಕಲ್ಪ

KannadaprabhaNewsNetwork |  
Published : Sep 22, 2024, 01:52 AM ISTUpdated : Sep 22, 2024, 01:53 AM IST
ದೊಡ್ಡಬಳ್ಳಾಪುರದಲ್ಲಿ ನಡೆದ ಕೆಆರ್‌ಎಸ್‌ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಶಿವಶಂಕರ್ ಮಾತನಾಡಿದರು. | Kannada Prabha

ಸಾರಾಂಶ

ಪದಾಧಿಕಾರಿಗಳು ಪಕ್ಷದ ತತ್ವ‌ ಸಿದ್ಧಾಂತಗಳಿಗೆ ಅನುಗುಣವಾಗಿ ತಾಲೂಕಿನಾದ್ಯಂತ ಪಕ್ಷವನ್ನು ಸದೃಢವಾಗಿ ಸಂಘಟಿಸಿ ಜನಪರ ಹೋರಾಟಗಳನ್ನು ಕೈಗೊಳ್ಳಬೇಕು ಎಂದು ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವಶಂಕರ್ ತಿಳಿಸಿದರು. ದೊಡ್ಡಬಳ್ಳಾಪುರದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.

-ತಾಲೂಕು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಕರ್ನಾಟಕ ರಾಷ್ಟ್ರ ಸಮಿತಿ -ಕೆಆರ್‌ಎಸ್ ಪಕ್ಷದ ತಾಲೂಕು ಘಟಕದ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ಪಕ್ಷದ ತತ್ವ‌ ಸಿದ್ಧಾಂತಗಳಿಗೆ ಅನುಗುಣವಾಗಿ ತಾಲೂಕಿನಾದ್ಯಂತ ಪಕ್ಷವನ್ನು ಸದೃಢವಾಗಿ ಸಂಘಟಿಸಿ ಜನಪರ ಹೋರಾಟಗಳನ್ನು ಕೈಗೊಳ್ಳಬೇಕು ಎಂದು ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವಶಂಕರ್ ತಿಳಿಸಿದರು.

ನಗರದ ಪಕ್ಷದ ಕಚೇರಿಯಲ್ಲಿ ನಡೆದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪಕ್ಷದ ಉದ್ದೇಶ ಸ್ವಚ್ಛ, ಪ್ರಾಮಾಣಿಕ, ಭ್ರಷ್ಟಾಚಾರ ರಹಿತವಾದ ಆಡಳಿತ ನೀಡುವಂತಹದ್ದು, ಲೂಟಿಕೋರ ರಾಜಕಾರಣಿಗಳನ್ನು ಸಮಾಜದಿಂದ ಹೊರ ಹಾಕಿ, ಸಾಮಾಜಿಕ ಕಳಕಳಿ ಇರುವಂತಹ ಜನ ಸ್ನೇಹಿ ರಾಜಕಾರಣಿಗಳು ನಮ್ಮ ಪಕ್ಷಕ್ಕೆ ಹಾಗೂ ಸಮಾಜಕ್ಕೆ ಬೇಕು. ಈ ನಿಟ್ಟಿನಲ್ಲಿ ನಾವೆಲ್ಲಾ ಕೆಲಸ ಮಾಡಬೇಕು ಎಂದರು.

ಪ್ರಸ್ತುತ ರಾಜ್ಯ ರಾಜಕೀಯ ತುಂಬಾ ಹದಗೆಟ್ಟಿದೆ. ಅದು ರಾಜಕಾರಣ ಎಂದು ಹೇಳಿಕೊಳ್ಳುವುದಕ್ಕೆ ನಾಚಿಕೆ ಆಗುತ್ತದೆ. ಜನರ ಹಣವನ್ನು ಲೂಟಿ ಹೊಡೆದು ರಾಜ್ಯದ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದ್ದಾರೆ ಎಂದು ದೂರಿದರು.

ಕೆಆರ್ ಎಸ್ ಪಕ್ಷದ ತಾಲೂಕು ಘಟಕದ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ವಿ.ನಾಗರಾಜು ಮಾತನಾಡಿ, ತಾಲೂಕಿನಲ್ಲಿ ಎಲ್ಲಾ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೂತ್ ಮಟ್ಟದಿಂದ ಪಕ್ಷವನ್ನು ಸದೃಢಗೊಳಿಸಲು ಶ್ರಮಿಸುವುದಾಗಿ ತಿಳಿಸಿದರು.

ಈ ವೇಳೆ ಜಿಲ್ಲೆ ಹಾಗೂ ತಾಲೂಕು ಮಟ್ಟದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ನೂತನ ಪದಾಧಿಕಾರಿಗಳು:

ಕೆ.ವಿ.ನಾಗರಾಜ್-ಅಧ್ಯಕ್ಷ, ಡಿ.ಎಂ.ಶ್ರೀನಿವಾಸ್ ಉಪಾಧ್ಯಕ್ಷ, .ಡಿ.ಪಿ.ಮುರಹರಿ-ಪ್ರಧಾನ ಕಾರ್ಯದರ್ಶಿ, ಮಂಜುನಾಥ್-ಕಾರ್ಯದರ್ಶಿ, ಪಾಪಣ್ಣ-ಕಾರ್ಯದರ್ಶಿ, .ಗೌತಮ್ ಗಂಗಪ್ಪ-ಜಂಟಿ ಕಾರ್ಯದರ್ಶಿ, ಎಸ್.ಬಾಲಕೃಷ್ಣ- ಸಂಘಟನಾ ಕಾರ್ಯದರ್ಶಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು