ರಾಮನಗರ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ 15ನೇ ಹಣಕಾಸು ಯೋಜನೆಯಡಿ ಚರಂಡಿ ಸ್ವಚ್ಛತೆ ಹಾಗೂ ಕುಡಿಯುವ ನೀರಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.
ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗಲಿದೆಯೋ ಅಂತಹ ಸ್ಥಳದಲ್ಲಿ ಟ್ಯಾಂಕರ್ ನೀರು ವ್ಯವಸ್ಥೆ ಮಾಡಭೆಕು. ಮಂಚನಬೆಲೆ ಎಡ ಹಾಗೂ ಬಲ ದಂಡೆಗಳಲ್ಲಿ ಜನವರಿ ಅಂತ್ಯದೊಳಗೆ ನೀರು ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಅಂದು ಕೇವಲ 10 ಕಿಲೋ ಮೀಟರ್ ಮಾತ್ರ ಇತ್ತು. ಆದರೆ ಪ್ರಸ್ತುತ ಯೋಜನೆಯು 20 ಕಿಲೋ ಮೀಟರ್ ವಿಸ್ತೀರ್ಣವಾಗಿದೆ. ಈ 20 ಕಿಲೋಮೀಟರ್ ಕಾಮಗಾರಿ ಶೇ.90ರಷ್ಟು ಪೂರ್ಣವಾಗಿದ್ದು, ಶೀಘ್ರದಲ್ಲಿಯೇ ಚಾಲ್ತಿಗೆ ಬರಲಿದೆ ಎಂದರು.
ಮುಖ್ಯಮಂತ್ರಿಗಳ ವಿಶೇಷ ಅನುದಾನ 20 ಕೋಟಿಯಲ್ಲಿ ಕ್ಷೇತ್ರದ ಪ್ರತಿ ಪಂಚಾಯಿತಿಯಲ್ಲಿ ರಸ್ತೆ, ಚರಂಡಿ ಹಾಗೂ ಕುಡಿಯುವ ನೀರಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು.ಕಳೆದ ಸುಮಾರು ವರ್ಷಗಳಿಂದ ಅಭಿವೃದ್ಧಿ ಕೆಲಸಗಳು ನಿಂತ ನೀರಾಗಿತ್ತು. ಈ ಹಿಂದೆ ಅಧಿಕಾರದಲ್ಲಿದ್ದವರು ರಸ್ತೆ, ಚರಂಡಿ ಕೆಲಸಕ್ಕೆ ಯಾರು ಗಮನ ನೀಡಿರಲಿಲ್ಲ. ತಾಪಂ, ಜಿಪಂ ಅನುದಾನ ಸೇರಿದಂತೆ ವಿವಿಧ ಇಲಾಖೆಗಳ ಅನುದಾನ ಪಡೆದುಕೊಂಡು ವಿವಿಧ ಅಭಿವೃದ್ಧಿ ಕೆಲಸ ನಿರ್ವಹಿಸಲಾಗುತ್ತಿದೆ. ಕ್ಷೇತ್ರದಲ್ಲಿ ಕೆಲವು ಶುದ್ಧ ಕುಡಿಯುವ ನೀರಿನ ಘಟಕಗಳು ದುರಸ್ತಿಯಾಗಿದೆ. ಇನ್ನು ಕೆಲವೆಡೆ ಅವುಗಳನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ ಎಂಬ ಆರೋಪವಿದೆ. ಹಾಗಾಗಿ ಶಾಸಕರ ಅನುದಾನದಲ್ಲಿ ಅವುಗಳನ್ನು ರಿಪೇರಿ ಮಾಡಲಾಗುತ್ತದೆ ಎಂದು ಹೇಳಿದರು.
5ಕೆಆರ್ ಎಂಎನ್ 6.ಜೆಪಿಜಿ