ಸ್ವಚ್ಛತೆ ಕೇವಲ ಪೌರ ಕಾರ್ಮಿಕರ ಜವಾಬ್ದಾರಿಯಲ್ಲ: ಸಂಸದ ರಾಘವೇಂದ್ರ

KannadaprabhaNewsNetwork |  
Published : Oct 03, 2026, 01:45 AM IST
ಸಂಸದ ರಾಘವೇಂದ್ರ ನೇತೃತ್ವದಲ್ಲಿ ಸ್ವಚ್ಚತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. | Kannada Prabha

ಸಾರಾಂಶ

ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹಾದ್ದೂರ್ ಶಾಸ್ತ್ರೀಜಿರವರ ಜನ್ಮದಿನಾಚರಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿರವರು ನೀಡಿದ ತಿಂಗಳ ಸೇವಾ ಸಂಕಲ್ಪ ಅಭಿಯಾನದ ಕರೆ ಅಂಗವಾಗಿ ಶುಕ್ರವಾರ ಪಟ್ಟಣದ ಐತಿಹಾಸಿಕ ಪ್ರಸಿದ್ಧ ಶ್ರೀ ಹುಚ್ಚುರಾಯಸ್ವಾಮಿ ದೇವಾಲಯದ ಬಳಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಪಾಲ್ಗೊಂಡಿದ್ದರು.

ಕನ್ನಡಪ್ರಭ ವಾರ್ತೆ ಶಿಕಾರಿಪುರ

ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹಾದ್ದೂರ್ ಶಾಸ್ತ್ರೀಜಿರವರ ಜನ್ಮದಿನಾಚರಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿರವರು ನೀಡಿದ ತಿಂಗಳ ಸೇವಾ ಸಂಕಲ್ಪ ಅಭಿಯಾನದ ಕರೆ ಅಂಗವಾಗಿ ಶುಕ್ರವಾರ ಪಟ್ಟಣದ ಐತಿಹಾಸಿಕ ಪ್ರಸಿದ್ಧ ಶ್ರೀ ಹುಚ್ಚುರಾಯಸ್ವಾಮಿ ದೇವಾಲಯದ ಬಳಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಪಾಲ್ಗೊಂಡಿದ್ದರು.

ಪೌರ ಕಾರ್ಮಿಕರ ಜತೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು, ಸ್ವಚ್ಛತಾ ಕಾರ್ಯದ ಮಹತ್ವವನ್ನು ಸಾರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಚ್ಛತೆ ಎಂಬುದು ಕೇವಲ ಪೌರ ಕಾರ್ಮಿಕರ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ಜವಾಬ್ದಾರಿಯುತ ನಾಗರಿಕನ ಕರ್ತವ್ಯವಾಗಿದೆ. ನಮ್ಮ ಮನೆ, ರಸ್ತೆ, ಸಾರ್ವಜನಿಕ ಸ್ಥಳಗಳು ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಆರೋಗ್ಯಕರ ಮತ್ತು ಸುಂದರ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಪೌರ ಕಾರ್ಮಿಕರು ಪ್ರತಿನಿತ್ಯ ಸಾರ್ವಜನಿಕ ಆರೋಗ್ಯ ಮತ್ತು ಸ್ವಚ್ಛ ಪರಿಸರಕ್ಕಾಗಿ ಶ್ರಮಿಸುತ್ತಿದ್ದು, ಸುಂದರ ಹಾಗೂ ಸದೃಡ ಸಮಾಜ ನಿರ್ಮಾಣದಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದೆ ಎಂದ ಅವರು, ಸಾರ್ವಜನಿಕರು ಪೌರ ಕಾರ್ಮಿಕರೊಂದಿಗೆ ಸಹಕರಿಸುವುದರ ಜತೆಗೆ ಕಸವನ್ನು ಬೇಕಾಬಿಟ್ಟಿಯಾಗಿ ಎಸೆಯದೆ, ನಿಗದಿತ ಸ್ಥಳಗಳಲ್ಲಿ ವಿಲೇವಾರಿ ಮಾಡಬೇಕು. ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ನಿತ್ಯ ಬೆಳಿಗ್ಗೆ ಧಾವಿಸುವ ಪುರಸಭೆಯ ವಾಹನಗಳಿಗೆ ನೀಡುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಜಿರವರ ನೇತೃತ್ವದಲ್ಲಿ ದೇಶದಾದ್ಯಂತ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಸ್ವಚ್ಛ ಭಾರತ ಅಭಿಯಾನದ ಮೂಲಕ ಸ್ವಚ್ಛತೆ ಜನಾಂದೋಲನವಾಗಿ ರೂಪುಗೊಂಡಿದೆ. ಸ್ವಚ್ಛತೆ, ಶೌಚಾಲಯ ನಿರ್ಮಾಣ, ತ್ಯಾಜ್ಯ ನಿರ್ವಹಣೆ ಹಾಗೂ ಸ್ವಚ್ಛ ಪರಿಸರದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಪ್ರಯತ್ನಗಳನ್ನು ಮತ್ತಷ್ಟು ಯಶಸ್ವಿಗೊಳಿಸಲು ಜನಸಾಮಾನ್ಯರ ಸಕ್ರಿಯ ಸಹಭಾಗಿತ್ವ ಅಗತ್ಯವಾಗಿದೆ ಎಂದು ತಿಳಿಸಿದರು.

ಮಹಾತ್ಮ ಗಾಂಧೀಜಿರವರು ಸ್ವಚ್ಛತೆಗೆ ನೀಡಿದ ಮಹತ್ವ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿರವರ ಸರಳತೆ, ಶಿಸ್ತು ಮತ್ತು ದೇಶಸೇವೆಯ ಆದರ್ಶಗಳನ್ನು ಸ್ಮರಿಸಿ, ಅವರ ಆಶಯಗಳನ್ನು ನಮ್ಮ ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

“ಸ್ವಚ್ಛ ಶಿಕಾರಿಪುರ-ಸುಂದರ ಶಿಕಾರಿಪುರ” ನಿರ್ಮಾಣಕ್ಕೆ ಪ್ರತಿಯೊಬ್ಬ ನಾಗರಿಕರೂ ಸಂಕಲ್ಪ ಕೈಗೊಳ್ಳಬೇಕು. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಆರೋಗ್ಯಕರ ಸಮಾಜ ನಿರ್ಮಿಸುವ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ನಿರ್ದೇಶಕ ಸುಧೀರ ಮಾರವಳ್ಳಿ, ರಾಘವೇಂದ್ರ, ವೀರನಗೌಡ, ಫಕೀರಪ್ಪ, ಪ್ರಶಾಂತ ಸಹಿತ ಬಿಜೆಪಿ ಮುಖಂಡರು, ಪೌರ ಕಾರ್ಮಿಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳಗಾವೀಲಿ 100 ಕೋಟಿ ವೆಚ್ಚದಲ್ಲಿ ಗಾಂಧಿ ಸ್ಮಾರಕ: ಡಿಕೆ
ಇಂದು ಶೋಭಾಯಾತ್ರೆ: ಗಣಪತಿ ವಿಸರ್ಜನೆಗೆ ಲಕ್ಷಾಂತರ ಜನರ ನಿರೀಕ್ಷೆ