ಸ್ವಚ್ಛತೆಯೇ ಸೇವೆ ಆಂದೋಲನ: ಹಿರೇಹಳ್ಳಿ ಸ್ಟೇಟ್ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ವಾದಿರಾಜ್‌

KannadaprabhaNewsNetwork |  
Published : Oct 02, 2024, 01:15 AM IST
ಸ್ವಚ್ಛತೆಯೇ ಸೇವೆ ಆಂದೋಲನ | Kannada Prabha

ಸಾರಾಂಶ

ಗಾಂಧೀಜಿಯವರ ಸ್ವಚ್ಛ ಭಾರತ ಕನಸನ್ನು ಸಾಕಾರಗೊಳಿಸಲು ಸ್ವಚ್ಛತೆಯೇ ಸೇವೆ ಆಂದೋಲನ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ ಎಂದು ಹಿರೇಹಳ್ಳಿ ಸ್ಟೇಟ್ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ನಿರ್ದೇಶಕ ವಾದಿರಾಜ್ ತಿಳಿಸಿದರು. ತುಮಕೂರಿನಲ್ಲಿ ಚ್ಛತೆಯೇ ಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ತುಮಕೂರುಗಾಂಧೀಜಿಯವರ ಸ್ವಚ್ಛ ಭಾರತ ಕನಸನ್ನು ಸಾಕಾರಗೊಳಿಸಲು ಸ್ವಚ್ಛತೆಯೇ ಸೇವೆ ಆಂದೋಲನ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ ಎಂದು ಹಿರೇಹಳ್ಳಿ ಸ್ಟೇಟ್ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ನಿರ್ದೇಶಕ ವಾದಿರಾಜ್ ತಿಳಿಸಿದರು.ನಗರದ ಹೊರವಲಯದ ಹಿರೇಹಳ್ಳಿಯಲ್ಲಿರುವ ಸ್ಟೇಟ್ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಆವರಣದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತೆಯೇ ಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸ್ವಚ್ಛತೆ ಜೀವನದ ಬಹುಮುಖ್ಯ ಅಂಶವಾಗಿದೆ. ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಬಹುದಾಗಿದೆ ಎಂದು ಕರೆ ನೀಡಿದರು.ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ಚೈತನ್ಯ ಕಂಚಿಬೈಲ್ ಮಾತನಾಡಿ, ಸ್ವಚ್ಛತೆಯೇ ಸೇವೆ ಆಂದೋಲನದ ಅಂಗವಾಗಿ ದೇಶವನ್ನು ಸ್ವಚ್ಛವಾಗಿಡಲು ಪ್ರತಿಯೊಬ್ಬ ನಾಗರಿಕನು ವರ್ಷದಲ್ಲಿ 100 ಗಂಟೆ ಮೀಸಲಿಡಬೇಕು. ಸುತ್ತಮುತ್ತಲಿನ ವಾತಾವರಣ ಸ್ವಚ್ಛವಾಗಿದ್ದಾಗ ಮನಸ್ಸು ಸ್ವಚ್ಛವಾಗಿರಲು ಸಾಧ್ಯ ಎಂದು ತಿಳಿಸಿದರು.ಸ್ವಚ್ಛತೆಯೇ ಸೇವೆ ಆಂದೋಲನದ ಅಂಗವಾಗಿ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಆವರಣವನ್ನು ಸ್ವಚ್ಛಗೊಳಿಸಿ, ಗಿಡ ನೆಟ್ಟು ನೀರೆರೆಯಲಾಯಿತು. ಈ ಸಂದರ್ಭದಲ್ಲಿ ಕೆಸರುಮಡು, ಹಿರೇಹಳ್ಳಿ ಮತ್ತು ಹರಳೂರು ಗ್ರಾಮದ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಟೇಟ್ ಬ್ಯಾಂಕ್ ಪ್ರಾದೇಶಿಕ ವ್ಯವಹಾರ ಕಚೇರಿ ಸಹಾಯಕ ವ್ಯವಸ್ಥಾಪಕ ಟಿ.ಕೆ.ಸುಧೀಂದ್ರ, ಬೊಮ್‌ಶಂಕರ್ ಮಿಶ್ರ, ಮುಖ್ಯ ವ್ಯವಸ್ಥಾಪಕ ಆರ್. ಶಂಕರಪ್ಪ, ಮಾರ್ಗದರ್ಶಿ ಬ್ಯಾಂಕ್ ಸಹಾಯಕ ಕೇಶವ್, ತರಬೇತಿ ಸಂಸ್ಥೆಯ ಹಿರಿಯ ತರಬೇತುದಾರರಾದ ರಮ್ಯ, ಶಿಬಿರಾರ್ಥಿಗಳು, ತರಬೇತುದಾರರು ಸೇರಿದಂತೆ ಸ್ಟೇಟ್ ಬ್ಯಾಂಕ್ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ