ದುಬಾರೆ ಪ್ರವಾಸಿ ತಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

KannadaprabhaNewsNetwork |  
Published : Mar 18, 2026, 02:45 AM IST
ಚಿತ್ರ :  16ಎಂಡಿಕೆ2 : ದುಬಾರೆ ರಿವರ್ ರಾಫ್ಟಿಂಗ್ ಗೈಡ್ಸ್ ಅಂಡ್ ಓನರ್ಸ್ ಅಸೋಸಿಯೇಷನ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.  | Kannada Prabha

ಸಾರಾಂಶ

ಶುಚಿತ್ವಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಮುಂಜಾನೆ ದುಬಾರೆಯ ರಿವರ್ ರಾಫ್ಟಿಂಗ್ ಅಸೋಸಿಯೇಷನ್ ವತಿಯಿಂದ ದುಬಾರೆ ಪ್ರವಾಸಿ ತಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕನ್ನಡಪ್ರಭ ವಾರ್ತೆ ಗುಡ್ಡೆಹೊಸೂರು

ಶುಚಿತ್ವಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಮುಂಜಾನೆ ದುಬಾರೆಯ ರಿವರ್ ರಾಫ್ಟಿಂಗ್ ಅಸೋಸಿಯೇಷನ್ ವತಿಯಿಂದ ದುಬಾರೆ ಪ್ರವಾಸಿ ತಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ದುಬಾರೆಯ ರಿವರ್ ರಾಫ್ಟಿಂಗ್ ಗೈಡ್ಸ್ ಅಂಡ್ ಓನರ್ಸ್ ಅಸೋಸಿಯೇಷನ್, ನಂಜರಾಯಪಟ್ಟಣ ಗ್ರಾಮ ಪಂಚಾಯತಿ ಸಿಬ್ಬಂದಿ, ಸ್ಥಳೀಯ ವರ್ತಕರು ಹಾಗೂ ಸಾರ್ವಜನಿಕರ ಸಹಯೋಗದಲ್ಲಿ ಪ್ರವಾಸಿ ತಾಣದ ಸುತ್ತಮುತ್ತಲಿನ ಪರಿಸರದಲ್ಲಿ ಎಸೆಯಲಾಗಿದ್ದ ಕಸ ತ್ಯಾಜ್ಯವನ್ನು ಶ್ರಮದಾನದ ಮೂಲಕ ಆಯ್ದು ಶೇಖರಿಸಿ ಟ್ರ್ಯಾಕ್ಟರ್ ಗಳಲ್ಲಿ ಕಸ ಸಂಸ್ಕರಣ ಘಟಕಕ್ಕೆ ಸಾಗಿಸಲಾಯಿತು.

ಶುಚಿತ್ವಕ್ಕೆ ಒತ್ತು ನೀಡವ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ಪ್ರವಾಸಿ ಸ್ಥಳಗಳು ಹಾಗೂ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಪ್ರವಾಸೋದ್ಯಮ ಇಲಾಖೆ, ಕೊಡಗು. ರೋಟರಿ, ಲಯನ್ಸ್, ರೆಡ್ ಕ್ರಾಸ್, ಚೇಂಬರ್ ಆಫ್ ಕಾಮರ್ಸ್, ಹೋಟೆಲ್ ಅಸೊಸಿಯೇಷನ್, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸ್ವಚ್ಛತಾ ಆಂದೋಲನ ನಡೆಯುತ್ತಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೂಡುಬಿದಿರೆ: ಗೌರಿಕೆರೆ ಶ್ರೀ ರಾಮ ಮಂದಿರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
ಎಸ್ಸೆಸ್ಸೆಲ್ಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 14151 ವಿದ್ಯಾರ್ಥಿಗಳು ಹಾಜರು