ಸ್ವಚ್ಛತಾ ಕಾರ್ಯ ನಿರಂತರ ಕಾರ್ಯಕ್ರಮವಾಗಬೇಕು

KannadaprabhaNewsNetwork |  
Published : Sep 29, 2024, 01:36 AM IST
28ಜಿಯುಡಿ1 | Kannada Prabha

ಸಾರಾಂಶ

ಸಾರ್ವಜನಿಕರು ತಮ್ಮ ಮನೆಯ ಆವರಣ, ಸುತ್ತ ಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಕಡ್ಡಾಯವಾಗಿ ಪ್ಲಾಸ್ಟಿಕ್ ಬಳಕೆ ತ್ಯಜಿಸಬೇಕು, ಪಟ್ಟಣ ವ್ಯಾಪ್ತಿಯಲ್ಲಿ ಸ್ವಚ್ಛತೆ ಕುರಿತು ಇನ್ನೂ ಹೆಚ್ಚಿನ ಮಟ್ಟದಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ

ಕನ್ನಡಪ್ರಭ ವಾರ್ತೆ ಗುಡಿಬಂಡೆ

ಸ್ವಚ್ಛತೆ ಎಂಬುದು ಒಂದು ದಿನಕ್ಕೆ ಸೀಮಿತವಾಗಬಾರದು, ಬದಲಿಗೆ ಪ್ರತಿನಿತ್ಯ ಅದು ನಡೆಯುತ್ತಿರಬೇಕು ಆಗ ಮಾತ್ರ ನಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಚವಾಗಿಟ್ಟುಕೊಳ್ಳಬಹುದು, ಜೊತೆಗೆ ನಾವೂ ಸಹ ಆರೋಗ್ಯಕರವಾದ ಜೀವನ ಸಾಗಿಸಬಹುದು ಎಂದು ಸಿವಿಲ್ ಮತ್ತು ಜೆಎಂಎಫ್.ಸಿ ನ್ಯಾಯಾಧೀಶರಾದ ಕೆ.ಎಂ.ಹರೀಶ್ ಸಲಹೆ ನೀಡಿದರು.

ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಆಡಳಿತ, ವಕೀಲರ ಸಂಘ ಹಾಗೂ ಪಟ್ಟಣ ಪಂಚಾಯತಿ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಹಿ ಸೇವಾ ಅಭಿಯಾನ ನಿಮಿತ್ತ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪೌರಕಾರ್ಮಿಕರ ಸೇವೆ ಶ್ಲಾಘನೀಯ

ತಮ್ಮ ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳು ವುದು ಎಲ್ಲರ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದ್ದು, ಸ್ವಚ್ಛತೆ ಎಂಬುದು ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತವಾಗಬಾರದು. ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವಲ್ಲಿ, ತ್ಯಾಜ್ಯವನ್ನು ಸಂಗ್ರಹಿಸಿ ವಿಲೇವಾರಿ ಮಾಡುವಲ್ಲಿ ಪೌರ ಕಾರ್ಮಿಕರ ಕಾರ್ಯ ಮೆಚ್ಚುವಂಥದ್ದು. ಹಸಿ ಕಸ, ಒಣ ಕಸ ಹಾಗೂ ಇತರೆ ತ್ಯಾಜ್ಯವನ್ನು ಬೆರ್ಪಡಿಸುವ ಮೂಲಕ, ಸ್ಥಳೀಯ ಕಸ ಸಂಗ್ರಹ ವಾಹನಗಳಿಗೆ ನೀಡುವ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಅವರ ಸೇವೆಯನ್ನು ಯಾರೂ ಮರೆಯಬಾರದು ಅವರನ್ನು ನಿರ್ಲಕ್ಷ್ಯ ಮಾಡದೇ ಅವರ ಕಾರ್ಯಕ್ಕೆ ಸಾಥ್ ನೀಡಬೇಕೆಂದು ಮನವಿ ಮಾಡಿದರು.

ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿ

ಬಳಿಕ ವಕೀಲರ ಸಂಘದ ಅಧ್ಯಕ್ಷ ಎ. ರಾಮನಾಥ್ ರೆಡ್ಡಿ ಮಾತನಾಡಿ, ಸಾರ್ವಜನಿಕರು ತಮ್ಮ ಮನೆಯ ಆವರಣ, ಸುತ್ತ ಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಕಡ್ಡಾಯವಾಗಿ ಪ್ಲಾಸ್ಟಿಕ್ ಬಳಕೆ ತ್ಯಜಿಸಬೇಕು, ಗ್ರಾಮೀಣ ಭಾಗಗಳಿಗಿಂತ ಪಟ್ಟಣ ವ್ಯಾಪ್ತಿಯಲ್ಲಿ ಸ್ವಚ್ಛತೆ ಕುರಿತು ಇನ್ನೂ ಹೆಚ್ಚಿನ ಮಟ್ಟದಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದರು.

ಈ ವೇಳೆ ಪ.ಪಂ. ಮುಖ್ಯಾಧಿಕಾರಿ ಶ್ರೀನಿವಾಸ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎ.ರವೀಂದ್ರ, ವಕೀಲರ ಸಂಘದ ಉಪಾಧ್ಯಕ್ಷ ನಂದೀಶ್ವರ ರೆಡ್ಡಿ, ವಕೀಲ ಬಾಬಾಜಾನ್, ವಕೀಲರಾದ ಟಿ.ಸಿ.ಅಶ್ವತ್ಥರೆಡ್ಡಿ, ಬಾಬಾಜಾನ್, ನ್ಯಾಯಾಲಯದ ಶಿರಸ್ತೇದಾರ್ ನಟರಾಜ್, ಸತೀಶ್, ಹಿರಿಯ ಉಪನ್ಯಾಸಕ ಆರ್.ಜಿ.ಸೋಮಶೇಖರ್, ನ್ಯಾಯಾಲಯದ ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಪೌರಕಾರ್ಮಿಕರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''