ಮೈಕ್ರೋ ಫೈನಾನ್ಸ್‌ ನಿಯಂತ್ರಣಕ್ಕೆ ಸ್ಪಷ್ಟ ಕಾನೂನು: ಡಾ.ಪ್ರಕಾಶ್‌ ಒತ್ತಾಯ

KannadaprabhaNewsNetwork |  
Published : Jan 25, 2025, 01:00 AM IST
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಸಿಪಿಎಂ ರಾಜ್ಯ ಕಾರ್ಯದರ್ಶಿ ಡಾ.ಪ್ರಕಾಶ್‌ ಕೆ. | Kannada Prabha

ಸಾರಾಂಶ

ಮಂಗಳೂರಿಗೆ ಆಗಮಿಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈಕ್ರೋ ಫೈನಾನ್ಸ್‌ಗಳ ಸಾಲ ನೀಡಿಕೆ, ಬಡ್ಡಿದರ ನಿಗದಿ, ಕಂತು ಪಾವತಿ ಸೇರಿದಂತೆ ಒಟ್ಟು ವ್ಯವಹಾರ ನಿಯಂತ್ರಿಸಲು ಕಾನೂನು ಜಾರಿ ಮಾಡುವುದು ಅತ್ಯಗತ್ಯ. ಮೈಕ್ರೋ ಫೈನಾನ್ಸ್‌ಗಳು ಬಲವಂತದ ಸಾಲ ವಸೂಲಿಯನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ದುಷ್ಟಜಾಲದ ಕಿರುಕುಳ, ದುಬಾರಿ ಬಡ್ಡಿಯ ಸಾಲದಿಂದಾಗಿ ದೊಡ್ಡ ಸಂಖ್ಯೆಯಲ್ಲಿ ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಅತ್ಯಂತ ಗಂಭೀರ ವಿಚಾರ. ಸರ್ಕಾರ ಕೂಡಲೆ ಇಂತಹ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸುವ ಸ್ಪಷ್ಟ ಕಾನೂನು ರೂಪಿಸಬೇಕು ಎಂದು ಸಿಪಿಎಂನ ನೂತನ ರಾಜ್ಯ ಕಾರ್ಯದರ್ಶಿ ಡಾ.ಪ್ರಕಾಶ್‌ ಕೆ. ಆಗ್ರಹಿಸಿದ್ದಾರೆ.

ಮಂಗಳೂರಿಗೆ ಆಗಮಿಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈಕ್ರೋ ಫೈನಾನ್ಸ್‌ಗಳ ಸಾಲ ನೀಡಿಕೆ, ಬಡ್ಡಿದರ ನಿಗದಿ, ಕಂತು ಪಾವತಿ ಸೇರಿದಂತೆ ಒಟ್ಟು ವ್ಯವಹಾರ ನಿಯಂತ್ರಿಸಲು ಕಾನೂನು ಜಾರಿ ಮಾಡುವುದು ಅತ್ಯಗತ್ಯ. ಮೈಕ್ರೋ ಫೈನಾನ್ಸ್‌ಗಳು ಬಲವಂತದ ಸಾಲ ವಸೂಲಿಯನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿದರು.

ಕೃಷಿ ವಿರೋಧಿ ತಿದ್ದುಪಡಿ ವಾಪಸ್‌ಗೆ ಆಗ್ರಹ: ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ರೈತ ಮತ್ತು ಕೃಷಿ ವಿರೋಧಿ ತಿದ್ದುಪಡಿಗಳನ್ನು ವಾಪಸ್‌ ಮಾಡುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರ ಇದುವರೆಗೂ ತಿದ್ದುಪಡಿ ವಾಪಸ್‌ ಮಾಡಿಲ್ಲ. ಇದನ್ನು ವಿರೋಧಿಸಿ ಫೆ.10ರಿಂದ ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಯುತ್ತಿದ್ದು, ಸಿಪಿಎಂ ಇದಕ್ಕೆ ಬೆಂಬಲ ಘೋಷಿಸಿರುವುದಾಗಿ ಹೇಳಿದರು.

ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಸೈಯದ್‌ ಮುಜೀಪ್‌, ದ.ಕ. ಜಿಲ್ಲಾ ಕಾರ್ಯದರ್ಶಿ ಮುನೀರ್‌ ಕಾಟಿಪಳ್ಳ, ರಾಜ್ಯ ಸಮಿತಿ ಸದಸ್ಯ ಸುನಿಲ್‌ ಕುಮಾರ್‌ ಬಜಾಲ್‌, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಬಿ.ಎಂ. ಭಟ್‌ ಇದ್ದರು.ಕಾಂಗ್ರೆಸ್‌ ಉತ್ತಮ ಪಕ್ಷ ಅಂತ ಬೆಂಬಲ ನೀಡಿದ್ದಲ್ಲ: ಡಾ.ಪ್ರಕಾಶ್‌

ಕಾಂಗ್ರೆಸ್‌ ಉತ್ತಮ ಪಕ್ಷ ಎಂಬ ಕಾರಣಕ್ಕೆ ಕಳೆದ ಚುನಾವಣೆಯಲ್ಲಿ ಸಿಪಿಎಂ ಬೆಂಬಲ ಕೊಟ್ಟದ್ದಲ್ಲ. ಅಪಾಯಕಾರಿಯಾದ ಪಕ್ಷವನ್ನು ಸೋಲಿಸಲು ಬೆಂಬಲ ನೀಡಿದ್ದಷ್ಟೇ ಎಂದು ಸ್ಪಷ್ಟಪಡಿಸಿದ ಡಾ.ಪ್ರಕಾಶ್‌, ಚುನಾವಣೆ ವೇಳೆ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದೇವೆ ಎಂಬ ಮಾತ್ರಕ್ಕೆ ಅದರ ಜನ ವಿರೋಧಿ ನೀತಿಗಳನ್ನು ವಿರೋಧಿಸಲು ಮುಲಾಜಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌, ಬಿಜೆಪಿ ಹೊರತಾದ ಮೂರನೇ ಪಕ್ಷ ಕಟ್ಟುವ ಪ್ರಯತ್ನ ನಡೆಯುತ್ತಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ