ಕನ್ನಡಪ್ರಭ ವಾರ್ತೆ ಚಾಮರಾಜನಗರ
ಚಾಮರಾಜನಗರ ತಾಲೂಕಿನ ಹರದನಹಳ್ಳಿಯ ವಾಲ್ಮೀಕಿ ಭವನದಲ್ಲಿ ಬುಧವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಅವರು ಮಾತನಾಡಿದರು.
ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕ ರಸ್ತೆ, ಬಂಡಿದಾರಿಯಂತಹ ಸ್ಥಳಗಳನ್ನು ಒತ್ತುವರಿ ಮಾಡಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಭೂ ದಾಖಲೆ, ಕಂದಾಯ ಇಲಾಖೆಯ ಅಧಿಕಾರಿಗಳು ಸರ್ವೆ ಕಾರ್ಯ ನಡೆಸಿ ಒತ್ತುವರಿ ತೆರವುಗೊಳಿಸಬೇಕು. ಸಮರೋಪಾದಿಯಲ್ಲಿ ಒತ್ತುವರಿ ಸಮಸ್ಯೆಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಬೇಕು. ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ನಿರ್ದೇಶನ ನೀಡಿದರು.ಮುನ್ನೆಚ್ಚರಿಕೆ ವಹಿಸಿ:
ಜನತೆ ತಮ್ಮ ಸಮಸ್ಯೆ ಅಹವಾಲು ಪರಿಹರಿಸಿಕೊಳ್ಳಲು ಕಚೇರಿಗೆ ಬರುವ ಬದಲು, ಜನರ ಬಳಿಗೆ ಅಧಿಕಾರಿಗಳೊಂದಿಗೆ ತೆರಳಿ ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇಂತಹ ಕಾರ್ಯಕ್ರಮಗಳಲ್ಲಿ ಜನರಿಂದ ಸಲ್ಲಿಕೆಯಾದ ಅಹವಾಲುಗಳಿಗೆ ಶೀಘ್ರ ಪರಿಹಾರ ಸಿಗಬೇಕು. ಮುಂದಿನ ಕಾರ್ಯಕ್ರಮದ ವೇಳೆಗೆ ಅಧಿಕಾರಿಗಳು ಸಮಸ್ಯೆಗಳನ್ನು ಇತ್ಯರ್ಥಗೊಳಿಸಿರಬೇಕು ಎಂದು ತಿಳಿಸಿದರು.
ಸಭೆ ಆರಂಭವಾಗುತ್ತಿದ್ದಂತೆಯೇ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಪ್ರತಿಯೊಬ್ಬರಿಂದ ಅಹವಾಲು ಆಲಿಸಿದರು. ಗ್ರಾಮದ ವಾಲ್ಮೀಕಿ ಸಮುದಾಯ ಭವನ ಕಾಮಗಾರಿ ಅಪೂರ್ಣಗೊಂಡಿದೆ. ಮೊದಲನೆ ಅಂತಸ್ತು ಪೂರ್ಣಗೊಳ್ಳಬೇಕಿದ್ದು, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕೆಂದು ಸ್ಥಳೀಯ ಗ್ರಾಮಸ್ಥರು ಮನವಿ ಮಾಡಿದರು. ಸಭೆಯಲ್ಲಿಯೇ ಇದ್ದ ಅಧಿಕಾರಿಗಳಿಗೆ ತ್ವರಿತವಾಗಿ ಕಾಮಗಾರಿ ಆರಂಭಿಸಬೇಕು. ಹೆಚ್ಚುವರಿ ಅನುದಾನ ಪಡೆಯಲು ಮುಂದಿನ ಕ್ರಮ ವಹಿಸಬೇಕೆಂದು ಸೂಚಿಸಿದರು.
ಸಭೆಯಲ್ಲಿ ಸ್ಥಳೀಯರು ದಾರಿ, ಸಾರ್ವಜನಿಕ ರಸ್ತೆ, ಕೆರೆ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಗಮನಸೆಳೆದರು. ಈ ಬಗ್ಗೆ ಸ್ಪಂದಿಸಿದ ಜಿಲ್ಲಾಧಿಕಾರಿಯವರು ಒಂದು ತಿಂಗಳೊಳಗೆ ಈ ಬಗ್ಗೆ ತಹಶೀಲ್ದಾರರು, ಭೂ ದಾಖಲೆಗಳ ಇಲಾಖೆ ಅಧಿಕಾರಿಗಳು ಸಮೀಕ್ಷೆ ನಡೆಸಿ ಒತ್ತುವರಿ ತೆರವಿಗೆ ಮುಂದಾಗಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಯಲು ರಂಗಮಂದಿರ ಪೂರ್ಣಗೊಳಿಸಿ:
ಪಶು ಆಸ್ಪತ್ರೆಗೆ ಒತ್ತು:
ಸ್ಥಳೀಯ ಆಸ್ಪತ್ರೆಗೆ ವೈದ್ಯರು, ನರ್ಸ್‌ಗಳ ನೇಮಕ, ದಿವ್ಯಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ, ಹೆದ್ದಾರಿ, ಇತರೆ ರಸ್ತೆಗಳ ದುರಸ್ತಿ, ಕೆಎಸ್‌ಆರ್‌ಟಿಸಿ ಬಸ್ಸುಗಳ ಸೇವೆ, ಕಾಲುವೆ ನಿರ್ಮಾಣ, ಅಕ್ರಮ ಮದ್ಯ ಮಾರಾಟ ತಡೆ, ಖಾತೆ, ಇ-ಸ್ವತ್ತು ವಿಳಂಬ ಸೇರಿ ಇನ್ನಿತರ ಸಮಸ್ಯೆಗಳ ಕುರಿತು ಜನರಿಂದ ಅಹವಾಲುಗಳು ಸಲ್ಲಿಕೆಯಾದವು.
ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಎಸ್ಪಿ ಪದ್ಮಿನಿ ಸಾಹು, ಎಸಿ ಮಹೇಶ್, ತಹಶೀಲ್ದಾರ್ ಬಸವರಾಜು, ತಾಪಂ ಇಒ ಪೂರ್ಣಿಮಾ ಸೇರಿ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.