ಕಡಸೂರಿನಲ್ಲಿ ಅರಣ್ಯ ಒತ್ತವರಿ ತೆರವು

KannadaprabhaNewsNetwork |  
Published : Aug 10, 2024, 01:31 AM ISTUpdated : Aug 10, 2024, 01:32 AM IST
ಪೊಟೋ: 9ಎಚ್ಒಎಸ್‌01ಹೊಸನಗರ ತಾಲೂಕಿನ ಕಸಬಾ ಹೋಬಳಿಯ ದೊಂಬೆಕೊಪ್ಪ ಗ್ರಾಮದಲ್ಲಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಇಲಾಖೆಯ ಸಿಬ್ಬಂದಿ ಅರಣ್ಯ ಪ್ರದೇಶದ ಒತ್ತುವರಿ ತೆರವುಗೊಳಿಸಿದರು. | Kannada Prabha

ಸಾರಾಂಶ

ಹೊಸನಗರ ತಾಲೂಕಿನ ಕಸಬಾ ಹೋಬಳಿಯ ದೊಂಬೆಕೊಪ್ಪ ಗ್ರಾಮದಲ್ಲಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಇಲಾಖೆಯ ಸಿಬ್ಬಂದಿ ಅರಣ್ಯ ಪ್ರದೇಶದ ಒತ್ತುವರಿ ತೆರವುಗೊಳಿಸಿದರು.

ಕನ್ನಡಪ್ರಭ ವಾರ್ತೆ ಹೊಸನಗರ

2021-22ರ ಅರಣ್ಯ ಪ್ರದೇಶ ಒತ್ತುವರಿ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ತಾಲೂಕಿನ ಕಸಬಾ ಹೋಬಳಿಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಶುಕ್ರವಾರ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಇಲಾಖೆಯ ಸಿಬ್ಬಂದಿ ಸುಮಾರು 4 ಎಕರೆ ಅರಣ್ಯ ಪ್ರದೇಶದ ಒತ್ತುವರಿ ತೆರವುಗೊಳಿಸಿದ್ದಾರೆ.

ತಾಲೂಕಿನ ಕಸಬಾ ಹೋಬಳಿ ಹರಿದ್ರಾವತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದ ಸ.ನಂ.39, ಶುಂಠಿಕೊಪ್ಪ ಗ್ರಾಮದ ಸ.ನಂ.33ರ ಅಲಗೇರಿಮಂಡ್ರಿ ಮೀಸಲು ಅರಣ್ಯದಲ್ಲಿ ಎರಡು ಎಕರೆ ಹಾಗೂ ಹಿರೇಮೈಥಿ ಗ್ರಾಮದ ಸ.ನಂ.1ರ ಹರಿದ್ರಾವತಿ ರಾಜ್ಯ ಅರಣ್ಯ ಪ್ರದೇಶದ ಎರಡು ಎಕರೆ ಅರಣ್ಯ ಭೂ ಪ್ರದೇಶದ ಒತ್ತುವರಿ ತೆರವುಗೊಳಿಸಿ ಸಸಿ ನೆಟ್ಟ ಸಿಬ್ಬಂದಿ ಈ ಮೂಲಕ ಹಸಿರೀಕರಣ ಮಾಡಿದ್ದಾರೆ.

ಒಟ್ಟಾರೆ 4 ಎಕರೆ ಅರಣ್ಯ ಪ್ರದೇಶ ಒತ್ತುವರಿ ತೆರವುಗೊಳಿಸಲಾಗಿದೆ. ರಾಜ್ಯ ಸರ್ಕಾರ ಅರಣ್ಯ ಭೂಮಿ ಅಕ್ರಮ ಒತ್ತುವರಿ ತೆರವುಗೊಳಿಸಲು ಸೂಚಿಸಿದ ಬೆನ್ನಲ್ಲೆ ತೆರವು ಕಾರ್ಯವನ್ನು ಇಲಾಖೆ ಚುರುಕುಗೊಳಿಸಿದೆ.

ಈ ತೆರವು ಕಾರ್ಯವು ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಹೊಸನಗರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅವರ ಮಾರ್ಗದರ್ಶನದಲ್ಲಿ ನಡೆದಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆ್ಯಸಿಡ್‌ ದಾಳಿ ಸಂತ್ರಸ್ತರಿಗೆ ಮಾಸಿಕ 50 ಸಾವಿರ ಪಿಂಚಣಿ : ಪರಂ ಭರವಸೆ
5 ಪಾಲಿಕೆಗೆ ಜಿಎಸ್‌ಟಿಯಲ್ಲಿ ಪಾಲು ಕೊಡಲು ಆಯೋಗ ಶಿಫಾರಸು