ಹವಾಮಾನ ವೈಪರೀತ್ಯ ಜನಜೀವನಕ್ಕೆ ಕಂಟಕ

KannadaprabhaNewsNetwork |  
Published : Jun 21, 2026, 02:30 AM IST
ಬಳ್ಳಾರಿಯ ಜಿಪಂ ಅಬ್ದುಲ್ ನಜೀರ್ ಸಭಾಂಗಣದಲ್ಲಿ “ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕುರಿತು ಕ್ರಿಯಾ ಯೋಜನೆ” ಕುರಿತು ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರಕ್ಕೆ ಜಿ.ಪಂ. ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ ಚಾಲನೆ ನೀಡಿದರು.  | Kannada Prabha

ಸಾರಾಂಶ

ನಿರಂತರವಾಗಿ ಬದಲಾಗುತ್ತಿರುವ ಹವಾಮಾನ ವೈಪರೀತ್ಯವು ಜನರ ಜೀವನಕ್ಕೆ ಬಹುದೊಡ್ಡ ಕಂಟಕವಾಗಿ ಪರಿಣಮಿಸಿದೆ.

ಬಳ್ಳಾರಿ: ನಗರದ ಜಿಪಂ ಅಬ್ದುಲ್ ನಜೀರ್ ಸಭಾಂಗಣದಲ್ಲಿ ಬುಧವಾರ “ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕುರಿತು ಕ್ರಿಯಾ ಯೋಜನೆ” ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ಚಾಲನೆ ನೀಡಿ ಮಾತನಾಡಿದ ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ ಅವರು, ನಿರಂತರವಾಗಿ ಬದಲಾಗುತ್ತಿರುವ ಹವಾಮಾನ ವೈಪರೀತ್ಯವು ಜನರ ಜೀವನಕ್ಕೆ ಬಹುದೊಡ್ಡ ಕಂಟಕವಾಗಿ ಪರಿಣಮಿಸಿದೆ. ನಮ್ಮ ರಾಜ್ಯದಲ್ಲೂ ಹವಾಮಾನ ಬದಲಾವಣೆಯ ಪರಿಣಾಮಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ. ಕೆಲವೆಡೆ ಅತಿವೃಷ್ಟಿ ಉಂಟಾಗುತ್ತಿದ್ದರೆ, ಇನ್ನು ಕೆಲವು ಕಡೆ ಮಳೆಯ ಕೊರತೆಯಿಂದಾಗಿ ಕೃಷಿ ಚಟುವಟಿಕೆ ತೀವ್ರ ಸಂಕಷ್ಟಕ್ಕೆ ಸಿಲುಕುತ್ತಿವೆ. ಇದು ನೇರವಾಗಿ ರೈತರ ಜೀವನೋಪಾಯ ಹಾಗೂ ಆಹಾರ ಭದ್ರತೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಹೇಳಿದರು. ಬಳ್ಳಾರಿ ಜಿಲ್ಲೆಯಲ್ಲಿ ಹವಾಮಾನ ಬದಲಾವಣೆ ಹೇಗಿದೆ? ಮುಂದಿನ ದಿನಗಳಲ್ಲಿ ಏನನ್ನು ನಿರೀಕ್ಷಿಸಬಹುದು? ಮತ್ತು ಯಾವ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು? ಎಂಬುದರ ಕುರಿತು ಈಗಾಗಲೇ ಒಂದು ಸಮಗ್ರ ಕ್ರಿಯಾ ಯೋಜನೆ ಸಿದ್ಧವಾಗಿದೆ ಎಂದು ಹೇಳಿದರು.

ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ ವಿಜ್ಞಾನಿ ಡಾ. ಶ್ರುತಿ ಬಿ.ವಿ. ಮಾತನಾಡಿ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ಕಳೆದ ವರ್ಷ 22 ಜಿಲ್ಲೆಗಳಲ್ಲಿ ತರಬೇತಿ ನೀಡಲಾಗಿತ್ತು. ಈ ಬಾರಿ (2026-27ನೇ ಸಾಲಿನಲ್ಲಿ) ರಾಜ್ಯದ ಎಲ್ಲ 31 ಜಿಲ್ಲೆಗಳಿಗೂ ಈ ಕಾರ್ಯಕ್ರಮ ವಿಸ್ತರಿಸಲಾಗಿದೆ ಎಂದು ತಿಳಿಸಿದರು.

‘ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆ’ಯ ಕಾರ್ಯನೀತಿ, ಕಾರ್ಯತಂತ್ರಗಳು, ವಿವಿಧ ಇಲಾಖೆಗಳ ಪಾತ್ರ, ಅಲ್ಪಾವಧಿಯ ಹವಾಮಾನ ಮಾಲಿನ್ಯಕಾರಕಗಳ ಪರಿಣಾಮಗಳು ಹಾಗೂ ಜಿಲ್ಲಾಮಟ್ಟದ ದತ್ತಾಂಶಗಳ ಕುರಿತು ಸಮಗ್ರ ಉಪನ್ಯಾಸ ನೀಡಿದರು.

ಸಂಶೋಧನಾ ವಿಜ್ಞಾನಿ ದೀಪಾ ರಾಣಿ ಮಾತನಾಡಿದರು. ಜಿಪಂನ ಎನ್‌ಆರ್‌ಡಿಎಂಎಸ್ ಅಧಿಕಾರಿ ರಾಮಚಂದ್ರ ರೆಡ್ಡಿ ಅವರು ತಮ್ಮ ವಿಭಾಗದ ಕಾರ್ಯಚಟುವಟಿಕೆ ಬಗ್ಗೆ ವಿವರಿಸಿದರು. ರುಚಿತಾ ಹಾಗೂ ಎನ್. ರಾಘವೇಂದ್ರ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಾಗಾರದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿ-ಸಿಬ್ಬಂದಿ, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಶಿಕ್ಷಣ ಸಂಸ್ಥೆಗಳ ಸದಸ್ಯರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಪಯೋಗ ಮಾಡದೆ ಪಾಳಬಿದ್ದ ಶೌಚಾಲಯಗಳು
ಭಟ್ಕಳ ಜಲದುರಂತದ ಸಂತ್ರಸ್ತ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ