ಜಿಲ್ಲಾ ಮಟ್ಟದ ಬಂಟರ ಕ್ರೀಡೋತ್ಸವದ ಸಮಾರೋಪ ಸಮಾರಂಭ

KannadaprabhaNewsNetwork |  
Published : Jan 09, 2024, 02:00 AM IST
 ಜಿಲ್ಲಾ ಮಟ್ಟದ ಬಂಟರ ಕ್ರೀಡೋತ್ಸವದ ಸಮಾರೋಪ ಸಮಾರಂಭ | Kannada Prabha

ಸಾರಾಂಶ

ತುಂಬೆ ವಳವೂರಿನಲ್ಲಿರುವ ಬಂಟವಾಳದ ಬಂಟರ ಭವನದ ವಠಾರದಲ್ಲಿ ನಡೆದ ಜಿಲ್ಲಾ ಮಟ್ಟದ ಬಂಟರ ಕ್ರೀಡೋತ್ಸವದ ಸಮಾರೋಪ ಸಮಾರಂಭದಲ್ಲಿ ಸಮಾಜದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಬಂಟ್ವಾಳ ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ ಎಲ್ಲಾ ವಲಯ ಬಂಟರ ಸಂಘಗಳ ಸಹಯೋಗದಿಂದ ತುಂಬೆ ವಳವೂರಿನಲ್ಲಿರುವ ಬಂಟವಾಳದ ಬಂಟರ ಭವನದ ವಠಾರದಲ್ಲಿ ನಡೆದ ಜಿಲ್ಲಾ ಮಟ್ಟದ ಬಂಟರ ಕ್ರೀಡೋತ್ಸವದ ಸಮಾರೋಪ ಸಮಾರಂಭದಲ್ಲಿ ಸಮಾಜದ ಸಾಧಕರಿಗೆ ಗೌರವಾರ್ಪಣೆ ಮಾಡಲಾಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಒಡಿಯೂರು ಶ್ರೀ ವಿ. ಸೌ. ಸಂಘದ ಅಧ್ಯಕ್ಷ ಸುರೇಶ್ ರೈ, ದ.ಕ.ಶಾಮಿಯಾನ ಮಾಲೀಕರ ಸಂಘದ ಉಪಾಧ್ಯಕ್ಷ ಶಿವಪ್ರಸಾದ್ ಹೆಗ್ಡೆ ಅವರನ್ನು ಗೌರವಿಸಲಾಯಿತು. ಉಮೇಶ್ ಶೆಟ್ಟಿ ಸಾಗು ಹೊಸಮನೆ, ಆಸ್ನಾ ರೈ, ಚಂದ್ರಶೇಖರ ರೈ ಹಾಗೂ ಕ್ರೀಡಾ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.ಮುಖ್ಯಅತಿಥಿಗಳಾದ ಮಾಜಿ ಸಚಿವ ಬಿ. ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ಶುಭಹಾರೈಸಿದರು. ಬಂಟ್ವಾಳ ಬಂಟರ ಸಂಘದ ಮಾಜಿ ಅಧ್ಯಕ್ಷ ವಿವೇಕ್ ಶೆಟ್ಟಿ ನಗ್ರಿಗುತ್ತು, ಉದ್ಯಮಿ ಉಲ್ಲಾಸ್ ರೈ, ವಿವಿಧ ತಾಲೂಕು ಸಂಘಗಳ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ರತ್ನಾಕರ ಶೆಟ್ಟಿ, ಸುರೇಶ್ ಚೌಟ, ಜಯರಾಮ್ ಶೆಟ್ಟಿ, ಬಾಬು ಶೆಟ್ಟಿ ಪೆರಾರ, ಸಂತೋಷ್ ಶೆಟ್ಟಿ, ಆನಂದ ಶೆಟ್ಟಿ, ಲೋಕಯ್ಯ ಶೆಟ್ಟಿ, ಶೋಭಾ ಹೆಗ್ಡೆ, ಕ್ರೀಡೋತ್ಸವ ಸಮಿತಿ ಸಂಚಾಲಕ ಗಂಗಾಧರ ರೈ ತುಂಗೆರೆಕೋಡಿ, ಜತೆ ಕಾರ್ಯದರ್ಶಿ ರಂಜನ್‌ಕುಮಾರ್ ಶೆಟ್ಟಿ ಅರಳ, ಜತೆ ಕೋಶಾಧಿಕಾರಿ ಪ್ರತಿಭಾ ಎ. ರೈ, ಎಲ್ಲ ವಲಯಗಳ ಅಧ್ಯಕ್ಷರು ಉಪಸ್ಥಿತರಿದ್ದರು.ತಾಲೂಕು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಡಿ.ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ ವಂದಿಸಿದರು. ಮಹಿಳಾ ವಿಭಾಗದ ಅಧ್ಯಕ್ಷೆ ರಮಾ ಎಸ್. ಭಂಡಾರಿ, ಯುವ ವಿಭಾಗದ ಅಧ್ಯಕ್ಷ ನಿಶಾನ್ ಆಳ್ವ, ರಶ್ಮಾ ಎ. ಆಳ್ವ, ಭಾಸ್ಕರ್ ಶೆಟ್ಟಿ, ಚಂದ್ರಕಲಾ ಚೌಟ ಸಮ್ಮಾನ ಪತ್ರ ವಾಚಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಬಾಲಕೃಷ್ಣ ಆಳ್ವ ಕೊಡಾಜೆ ಹಾಗೂ ವಿಂಧ್ಯಾ ಎಸ್.ರೈ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...