ಕನ್ನಡಪ್ರಭ ವಾರ್ತೆ ನಾಪೋಕ್ಲು
ಮೂರ್ನಾಡು ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ವೇಣು ಅಪ್ಪಣ್ಣ ಆವರು ಅಧ್ಯಕ್ಷತೆ ವಹಿಸಿ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜಾಗೃತಿ, ದೇಶಪ್ರೇಮ, ಜವಾಬ್ದಾರಿಯನ್ನು ಬೆಳೆಸುತ್ತದೆ ಎಂದು ಕಿವಿ ಮಾತನ್ನು ಹೇಳಿದರು.
ಸಮಾರೋಪ ಭಾಷಣಕಾರರಾಗಿ ಆಗಮಿಸಿದ ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಮುಕ್ಕಾಟಿರ ರವಿ ಚಿಯಣ್ಣನವರು ಶಿಬಿರವು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜಾಗೃತಿ, ಸೇವಾ ಮನೋಭಾವ, ನೈತಿಕ ಕೌಶಲ್ಯಗಳನ್ನು ಬೆಳೆಸುತ್ತದೆ ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿ ಮಾತನಾಡಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಮ್ಯಾನೇಜರ್ ಕುಟ್ಟಂಡ ಗಣಪತಿಯವರು ಶಿಬಿರವು ವಿದ್ಯಾರ್ಥಿಗಳಲ್ಲಿ ಸ್ವಯಂಶಿಸ್ತು ಹಾಗೂ ಗ್ರಾಮೀಣ ಭಾಗದ ಜನತೆ ಒಟ್ಟಿಗೆ ಬೆರೆಯುವುದರಿಂದ ಏಕತೆಯ ಮನೋಭಾವ ಬೆಳೆಸುತ್ತದೆ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ದೇವಕಿಯವರು ಸ್ವಾಗತಿಸಿ ಕಾರ್ಯಕ್ರಮದಲ್ಲಿ ಏಳು ದಿನದ ವಿಶೇಷ ವಾರ್ಷಿಕ ಶಿಬಿರದ ಕಾರ್ಯ ಚಟುವಟಿಕೆಗಳನ್ನು ಕುರಿತು ಕಾರ್ಯಕ್ರಮ ಅಧಿಕಾರಿಗಳಾದ ದಮಯಂತಿ ಅವರು ವರದಿಯನ್ನು ಮಂಡಿಸಿ ಉಪನ್ಯಾಸಕಿ ಸರೋಜಿನಿ ವಂದಿಸಿದರು.