ಹಾವೇರಿ: ಕಳೆದ ಎರಡು ವರ್ಷಗಳ ಹಿಂದೆ ನಮ್ಮ ಸರ್ಕಾರ ಆರಂಭಿಸಿದ ಹಾವೇರಿ ವಿಶ್ವವಿದ್ಯಾಲಯವನ್ನು ಮುಚ್ಚಲು ಬಿಡುವುದಿಲ್ಲ. ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಅನುಕೂಲವಾಗಿರುವ ಈ ವಿಶ್ವವಿದ್ಯಾಲಯವನ್ನು ಉಳಿಸಿಕೊಳ್ಳಲು ಎಲ್ಲ ಪ್ರಯತ್ನ ಮಾಡಲಾಗುವುದು ಎಂದು ಸಂಸದ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.ಜಿಲ್ಲಾ ಪಂಚಾಯಿತಿ ಸಭಾಭವನಲ್ಲಿ ವಿವಿ ಉಳಿಸಿ ಹೋರಾಟ ಸಮಿತಿ ಮುಖಂಡರ ನಿಯೋಗವು ನೀಡಿದ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದರು. ನಾವು ಹಿಂದುಳಿದ ಜಿಲ್ಲೆಯನ್ನು ಗಮನದಲ್ಲಿಟ್ಟುಕೊಂಡು ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಬಡ, ಮಧ್ಯಮ ವರ್ಗದ ಹಾಗೂ ಗ್ರಾಮೀಣ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಅನುಕೂಲ ಆಗಲಿ ಎಂದು ವಿಶ್ವವಿದ್ಯಾಲಯ ಮಾಡಿದ್ದೇವೆ.
ಹಾವೇರಿ ಜಿಲ್ಲೆಗೆ ವಿಶ್ವದ್ಯಾಲಯ ಅವಶ್ಯವಾಗಿ ಬೇಕಿದೆ. ಈಗಾಗಲೇ 42 ಪದವಿ ಕಾಲೇಜುಗಳು ವಿವಿ ವ್ಯಾಪ್ತಿಯಲ್ಲಿದ್ದು, ಇದನ್ನು ಮುಚ್ಚಿದರೆ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅತಂತ್ರವಾಗಿದೆ. ಇದರ ಬದಲಾಗಿ ಅಗತ್ಯ ಮೂಲ ಸೌಲಭ್ಯ ಕಲ್ಪಿಸಿ ವಿವಿ ಅಭಿವೃದ್ಧಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಬೇಕು. ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ಹಾವೇರಿ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿ ನಿಯೋಗದಲ್ಲಿ ಮುಖಂಡರಾದ ಬಸವರಾಜ ಪೂಜಾರ, ಲಿಂಗಯ್ಯ ಹಿರೇಮಠ, ಪರಿಮಳ ಜೈನ, ಉಡಚಪ್ಪ ಮಾಳಗಿ, ಬಸವರಾಜ ಎಸ್., ಹೊನ್ನಪ್ಪ ಮರೆಮ್ಮನವರ ಇತರರು ಇದ್ದರು.ಸರ್ವಜ್ಞ ನಾಡು ಕಂಡ ಶ್ರೇಷ್ಠ ವಚನಕಾರ: ಡಾ. ನಾಗರಾಜಹಾವೇರಿ: ತ್ರಿಪದಿಕವಿ ಸರ್ವಜ್ಞ ನಾಡು ಕಂಡ ಶ್ರೇಷ್ಠ ವಚನಕಾರ. ಮೂಢನಂಬಿಕೆ ಹಾಗೂ ಶೋಷಣೆಗಳನ್ನು ತಮ್ಮ ವಚನಗಳ ಮೂಲಕ ಕಟುವಾಗಿ ಟೀಕಿಸಿದ ನೇರ ನಿಷ್ಠುರವಾದಿ ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ಬಣ್ಣಿಸಿದರು.ನಗರದ ಗಾಂಧಿ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸರ್ವಜ್ಞ ಅಭಿವೃದ್ಧಿ ಪ್ರಾಧಿಕಾರ ಹಾಗೂ ಜಿಲ್ಲಾ ಕುಂಬಾರ ಸಂಘದ ಸಹಯೋಗದಲ್ಲಿ ಜರುಗಿದ ತ್ರಿಪದಿ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಸರ್ವಜ್ಞ ಅವರು ತಮ್ಮ ತ್ರಿಪದಿಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದಲು ಶ್ರಮಿಸಿದ ಮಹಾನ್ ಚೇತನ. ಅವರ ತ್ರಿಪದಿಗಳು ಸಾರ್ವಕಾಲಿಕವಾಗಿವೆ ಎಂದರು.
ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ ಕಾರ್ಯಕ್ರಮ ಉದ್ಘಾಟಿಸಿದರು. ಭಗತ್ ಸಮೂಹ ಸಂಸ್ಥೆ ಅಧ್ಯಕ್ಷ ಎಂ.ಬಿ. ಸತೀಶ ಅವರು ಸರ್ವಜ್ಞನ ಅವರ ಕುರಿತು ಉಪನ್ಯಾಸ ನೀಡಿದರು.ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ. ಹಿರೇಮಠ, ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ. ಮೈದೂರ, ಉಪವಿಭಾಗಾಧಿಕಾರಿ ಚೆನ್ನಪ್ಪ, ತಹಸೀಲ್ದಾರ್ ಶರಣಮ್ಮ, ಕುಂಬಾರ ಸಂಘದ ಜಿಲ್ಲಾಧ್ಯಕ್ಷ ರೇವಣಪ್ಪ ಬಸವಣ್ಣೆಪ್ಪ ಚಕ್ರಸಾಲಿ, ತಾಲೂಕಾಧ್ಯಕ್ಷ ಎಸ್.ಎನ್. ಕುಂಬಾರ, ಮಲ್ಲೇಶಪ್ಪ, ಬಸವರಾಜ, ಎಂ.ಪಿ. ಕುಂಬಾರ, ಶೇಕಪ್ಪ ಚಕ್ರಸಾಲಿ, ಶಿವಪ್ಪ ಚಕ್ರಸಾಲಿ, ಕೊಟ್ರೇಶಪ್ಪ, ಚನ್ನಪ್ಪ, ಮುತ್ತಪ್ಪ, ದ್ಯಾಮಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಆರ್.ವಿ. ಚಿನ್ನಿಕಟ್ಟಿ ಇತರರು ಉಪಸ್ಥಿತರಿದ್ದರು.