ಮೋಡ ಕವಿದ ವಾತಾವರಣ, ಸಾಧಾರಣ ಮಳೆ

KannadaprabhaNewsNetwork |  
Published : Jun 11, 2026, 01:15 AM IST
ಮಳೆ | Kannada Prabha

ಸಾರಾಂಶ

ಜೂನ್ ತಿಂಗಳ ಆರಂಭದಲ್ಲೇ ಮಂಕಾದ ಮುಂಗಾರು ಮಳೆ ಇದೀಗ ಚುರುಕುಗೊಳ್ಳುತ್ತಿದೆ. ಜಿಲ್ಲೆಯಾದ್ಯಂತ ಬುಧವಾರ ಮಳೆ ಪ್ರಮಾಣದಲ್ಲಿ ಕೊಂಚ ಚೇತರಿಕೆ ಕಂಡಿದ್ದು, ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಜೂನ್ ತಿಂಗಳ ಆರಂಭದಲ್ಲೇ ಮಂಕಾದ ಮುಂಗಾರು ಮಳೆ ಇದೀಗ ಚುರುಕುಗೊಳ್ಳುತ್ತಿದೆ. ಜಿಲ್ಲೆಯಾದ್ಯಂತ ಬುಧವಾರ ಮಳೆ ಪ್ರಮಾಣದಲ್ಲಿ ಕೊಂಚ ಚೇತರಿಕೆ ಕಂಡಿದ್ದು, ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ.

ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 6.20 ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ 7.47 ಮಿ.ಮೀ, ವಿರಾಜಪೇಟೆ ತಾಲೂಕಿನಲ್ಲಿ 9.65 ಮಿ.ಮೀ, ಪೊನ್ನಂಪೇಟೆ ತಾಲೂಕಿನಲ್ಲಿ 4.04 ಮಿ.ಮೀ, ಸೋಮವಾರಪೇಟೆ ತಾಲೂಕಿನಲ್ಲಿ 9.85 ಮಿ.ಮೀ ಮಳೆಯಾಗಿದೆ. ಹೋಬಳಿ ವಿವರ: ಮಡಿಕೇರಿ ಕಸಬಾ 4.50, ನಾಪೋಕ್ಲು 5.80, ಸಂಪಾಜೆ 7, ಭಾಗಮಂಡಲ 12.60, ವಿರಾಜಪೇಟೆ 10.80, ಅಮ್ಮತ್ತಿ 8.50, ಹುದಿಕೇರಿ 2.50, ಶ್ರೀಮಂಗಲ 3.60, ಪೊನ್ನಂಪೇಟೆ 3, ಬಾಳೆಲೆ 7.04, ಸೋಮವಾರಪೇಟೆ 5.20, ಶನಿವಾರಸಂತೆ 9, ಶಾಂತಳ್ಳಿ 7, ಕೊಡ್ಲಿಪೇಟೆ 18.20 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2823.68 ಅಡಿಗಳು. ಕಳೆದ ವರ್ಷ ಇದೇ ದಿನ 2851.80 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 2.40 ಮಿ.ಮೀ., ಇಂದಿನ ನೀರಿನ ಒಳಹರಿವು 329 ಕ್ಯುಸೆಕ್, ಕಳೆದ ವರ್ಷ ಇದೇ ದಿನ 2231 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 180 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 1975 ಕ್ಯುಸೆಕ್.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಶಾಲನಗರ: ನದಿಗೆ ಈಜಲು ತೆರಳಿದ ಇಬ್ಬರು ಯುವಕರು ನೀರುಪಾಲು
ಗೋಣಿಕೊಪ್ಪ: ಬಿಜೆಪಿ ವಿರಾಜಪೇಟೆ ಮಂಡಲ ಕಚೇರಿ ಲೋಕಾರ್ಪಣೆ