ಕನ್ನಡಪ್ರಭ ವಾರ್ತೆ ನವದೆಹಲಿ:
ಎರಡು ಹೆಚ್ಚುವರಿ ಇಂಡಿಯಾ ರಿಸರ್ವ್ ಬೆಟಾಲಿಯನ್ಸ್ (ಐಆರ್‌ಬಿಎಸ್) ಸೃಷ್ಟಿ, ಪೊಲೀಸ್ ಇಲಾಖೆಯ ಚಟುವಟಿಕೆಗಳಿಗೆ ಸಿಎಸ್ಆರ್ ನಿಧಿ ಬಳಕೆ, ಪೊಲೀಸ್ ತರಬೇತಿ ಸಂಸ್ಥೆಗಳಲ್ಲಿ ಮೂಲಸೌಕರ್ಯ ಮೇಲ್ದರ್ಜೀಕರಣ, ಕಾರಾಗೃಹಗಳ ಆಧುನೀಕರಣ ಸೇರಿದಂತೆ ರಾಜ್ಯದ ಭದ್ರತಾ ಮೂಲಸೌಕರ್ಯ ಮತ್ತು ಪೊಲೀಸ್ ಸಾಮರ್ಥ್ಯ ಸುಧಾರಣೆಗೆ ನೆರವಾಗಲು ಮನವಿ ಸಲ್ಲಿಸಿದರು.
ಮನವಿಯ ಪ್ರಮುಖ ಅಂಶಗಳು:1.‘ಪ್ರೆಸಿಡೆಂಟ್ಸ್ ಕಲರ್’ ಪ್ರಶಸ್ತಿ:
2.ಎರಡು ಹೆಚ್ಚುವರಿ ಮೀಸಲು ಪಡೆ:
3.ಪೊಲೀಸ್ ಆಧುನೀಕರಣಕ್ಕೆ ನೆರವು:
4.ಸಿಎಸ್ಆರ್ ನಿಧಿ ಬಳಕೆ:
5.ಪೊಲೀಸ್ ತರಬೇತಿಗೆ ಮೂಲಸೌಕರ್ಯ:
6.ಕಾರಾಗೃಹಗಳ ಆಧುನೀಕರಣ:
7.ಮೋಟಾರು ನಿಯಮಗಳ ಗಡುವು ವಿಸ್ತರಣೆ:
ಕರ್ನಾಟಕದಲ್ಲಿ ‘ನಿಯಮ 52-ಎ’ಅನ್ನು ಅನುಷ್ಠಾನಗೊಳಿಸಲು ಗಡುವು ವಿಸ್ತರಿಸುವಂತೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಪತ್ರ ಬರೆಯಲಾಗಿದೆ. ಈ ವಿಷಯವನ್ನು ಸಂಬಂಧಪಟ್ಟ ಸಚಿವಾಲಯದೊಂದಿಗೆ ಚರ್ಚಿಸಿ, ಆದಷ್ಟು ಬೇಗ ಅನುಮೋದನೆ ಕೊಡಿಸಿ.8.ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾ:
ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಮೇಲ್ದರ್ಜೆಗೆ ಏರಿಸಲು (ಎಎಸ್‌ಯುಎಂಪಿ) ಅಡಿಯಲ್ಲಿ ₹278.26 ಕೋಟಿಗಳ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದನ್ನು ಸಕಾರಾತ್ಮಕವಾಗಿ ಪರಿಗಣಿಸಿ.9.ಸೈಬರ್ ಕ್ರೈಮ್:
ಸೈಬರ್ ಅಪರಾಧಗಳು ಸಮಾಜ, ಆರ್ಥಿಕತೆ ಮತ್ತು ರಾಷ್ಟ್ರೀಯ ಭದ್ರತೆಗೆ ಗಂಭೀರ ಹಾಗೂ ನಿರಂತರ ಸವಾಲನ್ನು ಒಡ್ಡುತ್ತಿವೆ. ಇವುಗಳನ್ನು ನಿಗ್ರಹಿಸಲು ಅತ್ಯಾಧುನಿಕ ಸೈಬರ್ ಭದ್ರತಾ ವ್ಯವಸ್ಥೆಯ ಅಗತ್ಯವಿದ್ದು, ಕರ್ನಾಟಕ ಸರ್ಕಾರ ಅಂದಾಜು ₹360 ಕೋಟಿಗಳ ವೆಚ್ಚದಲ್ಲಿ ‘ಕರ್ನಾಟಕ ಸೈಬರ್ ಕ್ರೈಮ್ ಕಂಟ್ರೋಲ್ ಆ್ಯಂಡ್ ಕೋ-ಆರ್ಡಿನೇಷನ್ ಯುನಿಟ್’ (ಕೆ4ಸಿ) ಯನ್ನು ಸ್ಥಾಪಿಸಲು ಉದ್ದೇಶಿಸಿದೆ. ಇದರ ವಿವರವಾದ ಯೋಜನಾ ಪ್ರಸ್ತಾವನೆಯನ್ನು ಶೀಘ್ರದಲ್ಲೇ ಸಲ್ಲಿಸಲಾಗುವುದು. ಈ ಯೋಜನೆಗೆ ಅನುಮೋದನೆ ನೀಡಬೇಕು ಎಂದು ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು.ರಾಜ್ಯ ಜಲ ಯೋಜನೆಗೆ ಬೆಂಬಲ ಕೊಡಿ:ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಹಾಗೂ ಮಹದಾಯಿ ಯೋಜನೆಗಳಿಗೆ ಅನುಮತಿ/ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಗುರುವಾರ ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ವಿಷಯಗಳ ಕುರಿತು ಚರ್ಚಿಸಿದ್ದ ಡಿಕೆಶಿ, ಶುಕ್ರವಾರ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ, ರಾಜ್ಯ ಪ್ರಮುಖ ನೀರಾವರಿ ಯೋಜನೆಗಳ ಜಾರಿಗೆ ಸಹಕಾರ ಕೋರಿದರು. ರಾಜ್ಯ ಜಲ ಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ, ಸಿಎಂ ಅವರ ಆರ್ಥಿಕ ಸಲಹೆಗಾರ ಎಲ್.ಕೆ.ಅತೀಕ್, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕಾರ್ಯದರ್ಶಿ ರಾಜೇಂದ್ರ ಚೋಳನ್ ಉಪಸ್ಥಿತರಿದ್ದರು.ಸಿಎಂ ಪ್ರಸ್ತಾವನೆಗಳು:ಮೇಕೆದಾಟು ಯೋಜನೆಗೆ ಅನುಮತಿ ನೀಡುವ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಮತ್ತು ಕೇಂದ್ರ ಜಲ ಆಯೋಗ (ಸಿಡಬ್ಲ್ಯುಸಿ) ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಪ್ರಾಧಿಕಾರ ಈಗಾಗಲೇ ಯೋಜನೆಯನ್ನು ಮೌಲ್ಯಮಾಪನ ಮಾಡಲು ಆಯೋಗಕ್ಕೆ ಸೂಚಿಸಿದ್ದು, ಈ ಯೋಜನೆಗೆ ಶೀಘ್ರ ಅನುಮತಿ ಸಿಗುವಂತೆ ನೋಡಿಕೊಳ್ಳಬೇಕು.2.ಕರ್ನಾಟಕ ಸರ್ಕಾರ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅನುಷ್ಠಾನಕ್ಕಾಗಿ ಭಾರಿ ಹೂಡಿಕೆ ಮಾಡಿದೆ. ಆದರೆ, ನಮ್ಮ ಯೋಜನೆಯನ್ನು ಮುಂದುವರಿಸಲು ಹಾಗೂ ನಮ್ಮ ಪಾಲಿನ ನೀರನ್ನು ಬಳಸಿಕೊಳ್ಳಲು ಕೇಂದ್ರದ ಬೆಂಬಲದ ಅಗತ್ಯವಿದೆ. 3.ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ₹5,300 ಕೋಟಿ ನೆರವು ಘೋಷಿಸಿದ್ದು, ಈ ಯೋಜನೆಗೆ ಕೇಂದ್ರ ಸರ್ಕಾರ ಶೀಘ್ರವೇ ಹಣವನ್ನು ಬಿಡುಗಡೆ ಮಾಡಬೇಕು.4.ಹುಬ್ಬಳ್ಳಿ-ಧಾರವಾಡ ನಗರಕ್ಕೆ ಕುಡಿಯುವ ನೀರು ಪೂರೈಸಲು ಮಹದಾಯಿ ಕಣಿವೆಯಡಿ ಬರುವ ಕಳಸಾ ಮತ್ತು ಬಂಡೂರಿ ನಾಲಾ ಯೋಜನೆಗಳ ಜಾರಿ ಅಗತ್ಯವಿದೆ. ಹೀಗಾಗಿ, ಆದಷ್ಟು ಬೇಗ ಈ ಯೋಜನೆಗಳಿಗೆ ಅನುಮತಿ ಕೊಡಿಸಿ.5.ಸೊಂತಿ ಏತ ನೀರಾವರಿ, ಇಂಡಿ ಶಾಖಾ ಕಾಲುವೆ, ಮಲಪ್ರಭಾ ಕಾಲುವೆ ಬಾಕಿ ಕಾಮಗಾರಿ, ಘಟಪ್ರಭಾ ಬಲದಂಡೆ ಕಾಲುವೆ ಮತ್ತು ಚಿಕ್ಕೋಡಿ ಶಾಖಾ ಕಾಲುವೆ, ತುಂಗಭದ್ರಾ ಎಡದಂಡೆ ಕಾಲುವೆ ಬಾಕಿ ಕಾಮಗಾರಿ, ಬೆಣ್ಣೆಹಳ್ಳ ನದಿಯ ಪ್ರವಾಹ ನಿಯಂತ್ರಣ ಮತ್ತು ಪ್ರವಾಹ ನಿರ್ವಹಣೆ ಯೋಜನೆಗಳಿಗೆ ಕೇಂದ್ರ ಸರ್ಕಾರ ನೆರವು ನೀಡಬೇಕು.6.ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಲಿರುವ ನದಿ ಜೋಡಣೆ ಯೋಜನೆಗಳಡಿ ‘ಸಮತೆ ಮತ್ತು ಸಮಾನ ಹಂಚಿಕೆ’ ತತ್ವದ ಮೇಲೆ ರಾಜ್ಯಕ್ಕೆ ನ್ಯಾಯಸಮ್ಮತವಾದ ಪಾಲನ್ನು ಹಂಚಿಕೆ ಮಾಡಬೇಕು.ತುಂಗಭದ್ರಾ ಅಣೆಕಟ್ಟು ಹೊಸ ಗೇಟ್ ಚಾಲನೆಗೆ ಕೇಂದ್ರ ಸಚಿವರಿಗೆ ಆಹ್ವಾನ:
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ, ತುಂಗಭದ್ರಾ ಅಣೆಕಟ್ಟಿನ ನೂತನ ಗೇಟ್‌ಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, ತುಂಗಭದ್ರಾ ಅಣೆಕಟ್ಟಿನ ನೂತನ ಗೇಟ್ ಗಳ ಉದ್ಘಾಟನೆಗೆ ಕೇಂದ್ರ ಜಲಶಕ್ತಿ ಸಚಿವರು ಆಗಮಿಸುತ್ತಿದ್ದಾರೆ. ನೆರೆ ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ನ್ಯಾಯ ನೀಡುವ ಸ್ಥಾನದಲ್ಲಿ ಕುಳಿತು ಅವರು ಅನ್ಯಾಯ ಮಾಡುವುದಿಲ್ಲ ಎಂಬ ವಿಶ್ವಾಸ ನಮಗಿದೆ ಎಂದರು.ರಾಜ್ಯದ ನೀರಾವರಿ ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ರಾಮಲಿಂಗಾ ರೆಡ್ಡಿ ಹಾಗೂ ಟಿ.ಬಿ. ಜಯಚಂದ್ರ ಜೊತೆಗೂಡಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ. ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು, ಕೃಷ್ಣಾ ನೀರು ವಿವಾದ ನ್ಯಾಯಾಧೀಕರಣ ತೀರ್ಪಿನನ್ವಯ ಅಧಿಸೂಚನೆ, ಮಹದಾಯಿ ನೀರು, ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದ ₹5,300 ಕೋಟಿ ಅನುದಾನ ವಿಚಾರವಾಗಿ ಪ್ರಸ್ತಾಪಿಸಿದ್ದೇವೆ ಎಂದು ತಿಳಿಸಿದರು.ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೃಷಿ, ನೀರಾವರಿ, ನಗರಾಭಿವೃದ್ಧಿ, ಸಂಚಾರ ವಿಚಾರಗಳಿಗೆ ಸಂಬಂಧಿಸಿದಂತೆ ಪ್ರಧಾನಿಗೆ ಮನವಿ ಮಾಡಲಾಗಿದೆ. ಅವರು ನಮ್ಮ ಮನವಿಯನ್ನು ಪರಿಶೀಲಿಸಿ, ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.