
ಕನ್ನಡಪ್ರಭ ವಾರ್ತೆ ರಾಮನಗರ
ನಗರಸಭೆ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರಸಭೆಯ ಆಡಳಿತಾವಧಿಯಲ್ಲಿ ನಗರದ ಅಭಿವೃದ್ಧಿ ಜತೆಗೆ ಎಲ್ಲ ಸಮುದಾಯಗಳಿಗೂ, ಅದರಲ್ಲೂ ಶ್ರಮಿಕ ವರ್ಗಕ್ಕೆ ಅನುಕೂಲವಾಗುವ ಹಲವು ಜನಪರ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಕಾರ್ಯಗಳಿಗೆ ಸಾರ್ವಜನಿಕರ ಸಹಕಾರವೂ ಕಾರಣವಾಗಿದೆ ಎಂದರು.
ಕೆಂಪೇಗೌಡರ ಪ್ರತಿಮೆ ಅನಾವರಣ: ಬೆಂಗಳೂರು ನಗರದ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಆದರ್ಶಗಳು ಎಲ್ಲರಿಗೂ ಮಾದರಿಯಾಗಲಿ ಎಂಬ ಉದ್ದೇಶದಿಂದ ನಗರಸಭೆ ಆವರಣದಲ್ಲಿ ಅವರ ಪ್ರತಿಮೆ ಅನಾವರಣಗೊಳಿಸಲಾಗುವುದು. ಜಿಲ್ಲೆಯ ಮಾಗಡಿ ಮೂಲದ ಕೆಂಪೇಗೌಡರ ಪ್ರತಿಮೆ ನಗರದ ಹೆಮ್ಮೆಯ ಸಂಕೇತವಾಗಲಿದೆ. ಇದೇ ಆವರಣದಲ್ಲಿ ಈಗಾಗಲೇ ಡಾ. ಬಿ.ಆರ್. ಅಂಬೇಡ್ಕರ್, ಸಂವಿಧಾನ ಪೀಠಿಕೆ ಹಾಗೂ ಬಸವಣ್ಣನವರ ಪುತ್ಥಳಿಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.ಅರಸು ಸಭಾಂಗಣ ಲೋಕಾರ್ಪಣೆ:
ಇದಲ್ಲದೆ, ರೋಟರಿ ವೃತ್ತದಲ್ಲಿರುವ ಸ್ವಾಮಿ ವಿವೇಕಾನಂದರ ಪುತ್ಥಳಿ ಸೌಂದರ್ಯೀಕರಣ ಹಾಗೂ ರೈಲು ನಿಲ್ದಾಣದ ಬಳಿಯ ಟಿಪ್ಪು ಸರ್ಕಲ್ ಅಭಿವೃದ್ಧಿ ಕಾಮಗಾರಿಗಳಿಗೂ ಆದ್ಯತೆ ನೀಡಲಾಗಿದೆ. 11 ಸಾವಿರ ಅಸಂಘಟಿತ ಕಾರ್ಮಿಕರಿಗೆ ವಿಮೆ
ವಿವಿಧ ವೃತ್ತಿಗಳಲ್ಲಿ ತೊಡಗಿರುವ ಶ್ರಮಿಕರಿಗೆ ನೆರವಾಗುವ ನಿಟ್ಟಿನಲ್ಲಿ ಬಡಗಿಗಳು, ಬಾರ್ ಬೆಂಡಿಂಗ್ ಕಾರ್ಮಿಕರು ಹಾಗೂ ಇತರ ಅರ್ಹ ವೃತ್ತಿಪರರಿಗೆ ಟೂಲ್ ಕಿಟ್‌ಗಳನ್ನು ವಿತರಿಸಲಾಗುವುದು. 250 ಮಹಿಳಾ ಸ್ವಸಹಾಯ ಸಂಘಗಳಿಗೆ ಅಗತ್ಯ ಸಲಕರಣೆಗಳನ್ನು ನೀಡಲಾಗುವುದು. ಟೀ ಅಂಗಡಿಗಳಲ್ಲಿ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ಟೀ ಲೋಟ ತೊಳೆಯಲು ಸ್ಟೀಮರ್‌ಗಳನ್ನು ವಿತರಿಸಲಾಗುವುದು ಎಂದು ಹೇಳಿದರು.
ಎರಡು ವಾರ್ಡ್‌ಗಳಲ್ಲಿ ಯುಜಿಡಿ ಕಾಮಗಾರಿ:
ರಾಮನಗರ ಅಭಿವೃದ್ಧಿಗೆ ಇನ್ನೂ ಸಾಕಷ್ಟು ಕೆಲಸಗಳು ಬಾಕಿ ಇವೆ. ನಗರದ ಸಮಗ್ರ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳಿಗೆ ₹750 ಕೋಟಿ ವಿಶೇಷ ಅನುದಾನ ನೀಡುವಂತೆ ಮನವಿ ಸಲ್ಲಿಸಲಾಗಿತ್ತು. ಈ ಸಂಬಂಧ ವಿವರವಾದ ಯೋಜನಾ ವರದಿ (ಡಿಪಿಆರ್) ತರಿಸಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಅಗತ್ಯ ಅನುದಾನ ಬಿಡುಗಡೆಯಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ಸಿಗಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ದೌಲತ್ ಷರೀಪ್, ಮುತ್ತುರಾಜ್, ಪಾರ್ವತಮ್ಮ, ಪವಿತ್ರ ಲಕ್ಷ್ಮೀಕಾಂತ್, ಸೋಮಶೇಖರ್ ಮಣಿ, ನಿಜಾಮುದ್ದೀನ್, ಗ್ಯಾಬ್ರಿಯಲ್, ಅಜ್ಮತ್, ಸಮದ್, ನಗರಸಭಾ ಸಿಬ್ಬಂದಿ ನಟರಾಜ್ ಗೌಡ, ನಾಗರಾಜು ಸೇರಿದಂತೆ ಹಲವರು ಇದ್ದರು.