ಎಸ್‌ಎಸ್‌ ಹುಟ್ಟುಹಬ್ಬಕ್ಕೆ ಸಿಎಂ, ಡಿಸಿಎಂ ಭಾಗಿ

KannadaprabhaNewsNetwork |  
Published : Jun 08, 2025, 03:03 AM IST
ಹೊನ್ನಾಳಿ ಫೋಟೋ 6ಎಚ್.ಎಲ್.ಐ3.  ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ 95ನೇ ಹುಟ್ಟು ಹಬ್ಬ ಹಾಗೂ  ಮುಖ್ಯಮಂತ್ರಿಗಳಿಂದ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ  ಹಿನ್ನಲೆಯಲ್ಲಿ ಹೊನ್ನಾಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ  ಸಂಜೆ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯನ್ನುದ್ದೇಶಿಸಿ ದೂಡಾ ಅಧ್ಯಕ್ಷ ಕೆ.ದಿನೇಶ್‌ಶೆಟ್ಟಿ ಮಾತನಾಡಿದರು.  | Kannada Prabha

ಸಾರಾಂಶ

ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ 95ನೇ ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಹಾಗೂ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಹಾಗೂ 1000 ಕೋಟಿ ರು. ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಶಾಸಕ ಡಿ.ಜಿ.ಶಾಂತನಗೌಡ ತಿಳಿಸಿದರು.

ಹೊನ್ನಾಳಿ: ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ 95ನೇ ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಹಾಗೂ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಹಾಗೂ 1000 ಕೋಟಿ ರು. ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಶಾಸಕ ಡಿ.ಜಿ.ಶಾಂತನಗೌಡ ತಿಳಿಸಿದರು.

ಈ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜೂ.16ರಂದು ಡಾ.ಶಾಮನೂರು ಶಿವಶಂಕರಪ್ಪ ಅವರ ಹುಟ್ಟುಹಬ್ಬ, 101 ಜೋಡಿಗಳ ಸಾಮೂಹಿಕ ವಿವಾಹ ಹಾಗೂ ಇದೇ ವೇಳೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ದಾವಣಗೆರೆ ಜಿಲ್ಲೆಯಲ್ಲಿ ಸುಮಾರು 1 ಸಾವಿರ ಕೋಟಿ ರು. ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮ ಜೂ.16ರಂದು ನೆರವೇರಲಿದ್ದು, ಈ ಕಾರ್ಯಕ್ರಮ ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವರು ಸೇರದಂತೆ ಅನೇಕ ಸಚಿವರುಗಳು, ಜಿಲ್ಲೆಯ ಎಲ್ಲಾ ಶಾಸಕರು, ಅಧಿಕಾರಿಗಳು ಹಾಗೂ ಬಹುಮುಖ್ಯವಾಗಿ ಹಟ್ಟಿ, ಹಾಡಿ ಹಾಗೂ ತಾಂಡಗಳ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ಮುಖ್ಯಮಂತ್ರಿಗಳು ವಿತರಿಸಲಿದ್ದಾರೆ ಎಂದು ಹೇಳಿದರು.

ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನಿಂದಲ್ಲೂ ಅರ್ಹ ಫಲಾನುಭವಿಗಳನ್ನು ಕರೆದುಕೊಂಡು ಹೋಗಲು ಈಗಾಗಲೇ ತಾಲೂಕು ಆಡಳಿತದಿಂದ ಸಿದ್ಧತೆ ನಡೆಸಲಾಗಿದೆ. ಅರ್ಹ ಫಲಾನುಭವಿಗಳನ್ನು ದಾವಣಗೆರೆಗೆ ಕರೆದುಕೊಂಡು ಹೋಗಲು ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ದೂಡಾ ಅಧ್ಯಕ್ಷ ದಿನೇಶ್‌ ಕೆ. ಶೇಟ್ಟಿ ಮಾತನಾಡಿ, ಸರ್ಕಾರದ ಕಾರ್ಯಕ್ರಮದ ಜೊತೆಯಲ್ಲೇ ದಾವಣಗೆರೆ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ 95 ನೇ ಹುಟ್ಟುಹಬ್ಬದ ಆಚರಣೆಯನ್ನೂ ಹಮ್ಮಿಕೊಂಡಿದ್ದು, ಈ ಹಿನ್ನೆಲೆಯಲೆಯಲ್ಲಿ 101 ಜೋಡಿ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲಾ ವಧು- ವರರಿಗೆ ಬಟ್ಟೆ, ತಾಳಿ, ಕಾಲುಂಗುರ ಹಾಗೂ ಇತರ ಉಡುಗೊರೆಯನ್ನು ನೀಡಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಹೊನ್ನಾಳಿಗೆ ಪ್ರಥಮ ಬಾರಿಗೆ ಆಗಮಿಸಿದ ದೂಡ ಅಧ್ಯಕ್ಷ ದಿನೇಶ್‌ ಕೆ.ಶೆಟ್ಟಿ ಅವರನ್ನು ತಾಲೂಕು ಕಾಂಗ್ರೆಸ್‌ನಿಂದ ಸನ್ಮಾನಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ, ಪುರಸಭೆ ಅಧ್ಯಕ್ಷ ಮೈಲಪ್ಪ, ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎ.ಗದ್ದಿಗೇಶ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಣ್ಣಕ್ಕಿ ಬಸವನಗೌಡ.ಆರ್, ನಾಗಪ್ಪ, ತಾಲೂಕು ಉಸ್ತುವಾರಿ ಕಾಡಜ್ಜಿ ಚಂದ್ರು, ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಎಚ್.ಎ.ಉಮಾಪತಿ, ಪುಷ್ಪಾರವೀಶ್, ಮನುವಾಲಜ್ಜಿ, ಎಚ್.ಬಿ.ಅಣ್ಣಪ್ಪ, ವಿಜೇಂದ್ರಪ್ಪ, ನರಸಿಂಹಪ್ಪ ಮತ್ತಿತರರಿದ್ದರು.

PREV

Recommended Stories

ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ