ಸಿಎಂ ಉದ್ದೇಶಪೂರ್ವಕವಾಗಿ ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿಲ್ಲ: ಸುರೇಶ್

KannadaprabhaNewsNetwork |  
Published : Apr 30, 2025, 12:31 AM IST
29ಕೆಎಂಎನ್ ಡಿ25 | Kannada Prabha

ಸಾರಾಂಶ

ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ಮಾಡಿರುವುದನ್ನು ತಡೆಯಲು ಪೊಲೀಸರು ವಿಫಲರಾಗಿದ್ದರಿಂದ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿದ ಘಟನೆ ಕುರಿತು ಪ್ರತಿಕ್ರಿಯೆ.

ಕನ್ನಡಪ್ರಭ ವಾರ್ತೆ ಮದ್ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ವಯೋಸಹಜ ಕೋಪದಿಂದ ಪೊಲೀಸ್ ಅಧಿಕಾರಿ ಮೇಲೆ ಕೈ ಎತಿದ್ದಾರೆ ಹೊರತು ಉದ್ದೇಶ ಪೂರ್ವಕವಾಗಲ್ಲ ಎಂದು ಕುರುಬರ ಸಂಘದ ಜಿಲ್ಲಾಧ್ಯಕ್ಷ ಎಂ.ಎಲ್.ಸುರೇಶ್ ಮಂಗಳವಾರ ಹೇಳಿದರು.

ಪಟ್ಟಣದ ತಾಲೂಕು ಕುರುಬರ ಸಂಘದಲ್ಲಿ ನಡೆದ ತಾಲೂಕು ಕರುಬರ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ಮಾಡಿರುವುದನ್ನು ತಡೆಯಲು ಪೊಲೀಸರು ವಿಫಲರಾಗಿದ್ದರಿಂದ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿದ ಘಟನೆ ಕುರಿತು ಪ್ರತಿಕ್ರಿಯೆ ನೀಡಿದರು.

ಸಿಎಂ ಉದ್ದೇಶಪೂರವಾಗಿ ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿಲ್ಲ. ಅದನ್ನು ಮಾಧ್ಯಮಗಳು ಅತಿರಂಜಿತವಾಗಿ ಬಿಂಬಿಸುವ ಮೂಲಕ ಸಿದ್ದರಾಮಯ್ಯ ಅವರಿಗೆ ಮಸಿ ಬಳಿಯವುದಕ್ಕೆ ಯತ್ನ ಮಾಡಿದ್ದಾರೆ ಎಂದು ಕಿಡಿಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಿವಾರ್ಯವಾದರೆ ಮಾತ್ರ ಪಾಕ್ ವಿರುದ್ಧ ಭಾರತ ಯದ್ಧ ಮಾಡಬೇಕೋ ಹೊರತು ವಿನಾಕಾರಣ ಮಾಡಬಾರದು ಎಂದು ಹೇಳಿದ್ದಾರೆ. ಅದಕ್ಕೆ ವಿರೋಧ ಪಕ್ಷದವರು ವಿಶೇಷ ಅರ್ಥ ಕಲ್ಪಿಸಲಾಗುವುದು ಬೇಡ ಎಂದರು.

ಮೇ 8 ರಂದು ಸಿಎಂ ಮಂಡ್ಯಕ್ಕೆ:

ಮುಖ್ಯಮಂತ್ರಿ ಸಿದ್ದರಾಮಯ್ಯ ಮೇ 8ರಂದು ಮಂಡ್ಯದ ಕುರುಬರ ಸಂಘದ ಬಾಲಕರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಶಂಕುಸ್ಥಾಪನೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕುರುಬ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಕೋರಿದರು.

ಸಿಎಂ ಮಂಡ್ಯ ಭೇಟಿ ಹಿನ್ನೆಲೆಯಲ್ಲಿ ಅಂದು ನಿಡಘಟ್ಟದಿಂದ ಮಂಡ್ಯದವರೆಗೆ ಬೃಹತ್ ಬೈಕ್ ರ್ಯಾಲಿ ಅಂಗವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಮದ್ದೂರು ಹಾಗೂ ಮಂಡ್ಯದ ವಿಧಾನ ಸಭಾ ಕ್ಷೇತ್ರಗಳಿಂದ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಸಭೆಯಲ್ಲಿ ತಾಲೂಕು ಕುರುಬರ ಸಂಘದ ಅಧ್ಯಕ್ಷ ಎಲ್.ಆರ್.ಅಶ್ವಿನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಗೌರವಾಧ್ಯಕ್ಷ ಎಂ.ಮರಿಹೆಗ್ಗಡೆ, ನಿರ್ದೇಶಕರಾದ ಎಚ್.ಎನ್.ರಾಜು, ಮೀನಾಕ್ಷಮ್ಮ, ಚಿಕ್ಕಮ್ಮ, ಮಾಲತಿ, ಮಹೇಶ, ಬೀರೇಶ, ಅಹಿಂದ ಮುಖಂಡರಾದ ಶಿವಲಿಂಗಯ್ಯ, ಕೆ.ಟಿ.ಶಿವಕುಮಾರ್, ಪಿ.ಶಶಿಕುಮಾರ್, ಗ್ಯಾರಂಟಿ ಯೋಜನೆ ಉಪಾಧ್ಯಕ್ಷ ರಾಜೇಂದ್ರ ಇದ್ದರು.

PREV

Recommended Stories

ಇಂದಿನಿಂದ ಪ್ರೊ ಕಬಡ್ಡಿ ಲೀಗ್‌ ಶುರು : 12ನೇ ಆವೃತ್ತಿ । 12 ತಂಡ, ಒಟ್ಟು 117 ಪಂದ್ಯ
‘ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವವರು ಕಷ್ಟಕ್ಕೆ ಸಿಲುಕ್ತಾರೆ’