ಸಿಎಂ ಸಾಹೇಬ್ರಿಗೆ ಕರೆದಿಲ್ಲ, ನಾವು ಶ್ರೀರಾಮನಿಗೆ ಇಲ್ಲಿಂದಲೇ ಕೈ ಮುಗಿತೀವಿ

KannadaprabhaNewsNetwork |  
Published : Jan 04, 2024, 01:45 AM IST

ಸಾರಾಂಶ

ಬಹುದೊಡ್ಡ ಸಂಘರ್ಷಗಳ ಇತಿಹಾಸ ಹೊಂದಿರುವ ಅಯೋಧ್ಯೆ ಶ್ರೀ ರಾಮಮಂದಿರ ಉದ್ಘಾಟನೆ, ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಮಂತ್ರಿಸಿಲ್ಲ. ಇದರಿಂದ ಕಾಂಗ್ರೆಸ್‌ ಜನನಾಯಕರಲ್ಲಿ ಮುನಿಸು ಇಲ್ಲದಿಲ್ಲ. ಏಕೆಂದರೆ, ಶಿವಮೊಗ್ಗದಲ್ಲಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, "ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಸಾಹೇಬ್ರಿಗೆ ಕರೆದಿಲ್ಲ ಎಂದರೆ ಬೇಡ. ನಾವು ಎಲ್ಲಿರುತ್ತೇವೆಯೋ, ಅಲ್ಲಿಂದಲೇ ಓ ರಾಮ ಕಾಪಾಡಪ್ಪ ಅಂತ ಕೈ ಮುಗಿತೀವಿ, ಅದರಲ್ಲಿ ತಪ್ಪೇನಿದೆ.. " ಎಂದು ಹೇಳಿರುವುದು ಈ ಮಾತು ಸಾಕ್ಷೀಕರಿಸುತ್ತಿದೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಸಾಹೇಬ್ರಿಗೆ ಕರೆದಿಲ್ಲ ಎಂದರೆ ಬೇಡ. ನಾವು ಎಲ್ಲಿರುತ್ತೇವೆಯೋ, ಅಲ್ಲಿಂದಲೇ ಓ ರಾಮ ಕಾಪಾಡಪ್ಪ ಅಂತ ಕೈ ಮುಗಿತೀವಿ, ಅದರಲ್ಲಿ ತಪ್ಪೇನಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಎಂದು ಹೇಳಿದರು.

ಶಿವಮೊಗ್ಗದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಾವ್ಯಾರು ವಿರೋಧ ಮಾಡಿಲ್ಲ. ರಾಮ ಮಂದಿರ ಉದ್ಘಾಟನೆಗೊಳ್ಳುತ್ತಿರುವುದು ಸಂತೋಷ. ನಾವು ಕೂಡ ರಾಮನ ಭಕ್ತರೇ. ಚುನಾವಣೆ ಸಮಯದಲ್ಲಿ ಮನೆ ಮನೆಗೆ ಮಂತ್ರಾಕ್ಷತೆ ಕೊಡುತ್ತಾರೆ, ಕೊಡಲಿ. ರಾಮ ಮಂದಿರ ನಿರ್ಮಾಣ ವಿಚಾರದಿಂದ ಚುನಾವಣೆಯಲ್ಲಿ ಯಾವ ವಾತಾವರಣ ಬದಲಾಗುವುದಿಲ್ಲ ಎಂದರು.

ನಿಗಮ ಮಂಡಳಿ ಕುರಿತು ಪ್ರತಿಕ್ರಿಯಿಸಿದ ಅವರು, ನಿಗಮ‌ ಮಂಡಳಿಗಳಿಗೆ ಶಾಸಕರು, ಮುಖಂಡರು, ಕಾರ್ಯಕರ್ತರಿಗೆ ಕೊಡುವ ಬಗ್ಗೆ ತೀರ್ಮಾನ ಆಗಿದೆ. ಕಾರ್ಯಕರ್ತರು ಮುಖಂಡರು ಶಾಸಕರು ಎಲ್ಲರಿಗೂ ಕೊಡಬೇಕು. ನಾನು ನನಗೆ ನಿಗಮ ಮಂಡಳಿ ಕೊಡಿ‌ ಅಂತಾ ಕೇಳಿಲ್ಲ. ಹಿರಿಯ ಶಾಸಕರಿಗೆ ಕೊಡಿ ಎಂದು ಕೇಳಿದ್ದೇವೆ ಎಂದರು.

ಲೋಕಸಭೆ ಸ್ಪರ್ಧೆ ವಿಚಾರ:

ಲೋಕಸಭೆ ಸ್ಥಾನಕ್ಕೆ ಸ್ಪರ್ಧಿಸಲು ಹಲವರು ಆಕಾಂಕ್ಷಿ‌ಗಳು ಇದ್ದಾರೆ. ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕ ಸಂಗಮೇಶ್ವರ ಹಾಗೂ ಬೇಳೂರು ಗೋಪಾಲಕೃಷ್ಣ ಮೂವರು ಕುಳಿತು ಚರ್ಚಿಸುವಂತೆ ಹೇಳಿದ್ದಾರೆ. ಮೂರೂ ಜನ ಕುಳಿತು ಚರ್ಚೆ ಮಾಡಿ, ಪಟ್ಟಿ ಕೊಡಿ ಅಂದಿದ್ದಾರೆ. ನಾನು ಕೂಡ ಆಕಾಂಕ್ಷಿಯೇ, ಸರ್ವೇ ಮಾಡಿ, ಕೊಡ್ತೇವೆ ಅಂತ ಹೈಕಮಾಂಡ್‌ ಹೇಳಿದೆ ಎಂದರು.

- - - ಕೋಟ್‌ ಹುಬ್ಬಳ್ಳಿ ಕರಸೇವಕನ ಬಂಧನ ವಿಚಾರವಾಗಿ ಬಿಜೆಪಿ ವಿಪಕ್ಷವಾಗಿ ಪ್ರತಿಭಟನೆ ಮಾಡುವುದರಲ್ಲಿ ತಪ್ಪಿಲ್ಲ. ಆದರೆ, ಅವರು ಎಲ್ಲದಕ್ಕೂ‌ ಪ್ರತಿಭಟನೆ ಮಾಡ್ತಾರೆ. ಮಧು ಬಂಗಾರಪ್ಪ ಚೆಕ್ ಬೌನ್ಸ್ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಈ ಬಗ್ಗೆ ನಾನು ಏನು ಮಾತನಾಡಲ್ಲ. ₹40 ಸಾವಿರ‌ ಕೋಟಿ ಹಗರಣ ಆಗಿದೆ ಅಂತಾ ಯತ್ನಾಳ್ ಹೇಳಿದ್ದಾರೆ. ಅದರ ಬಗ್ಗೆ ತನಿಖೆ ನಡೆಸಿ, ಪಿಎಸ್‌ಐ ಹಗರಣದಲ್ಲಿ‌ ವಿಜಯೇಂದ್ರ ಹೆಸರು ಕೇಳಿಬಂದಿದೆ. ಈ ಬಗ್ಗೆ ತನಿಖೆ ನಡೆಸಲಿ

- ಗೋಪಾಲಕೃಷ್ಣ ಬೇಳೂರು, ಶಾಸಕ, ಸಾಗರ ಕ್ಷೇತ್ರ

- - -

(-ಫೋಟೋ: ಗೋಪಾಲಕೃಷ್ಣ ಬೇಳೂರು)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ