ಮಹಾತ್ಮಾ ಗಾಂಧಿ ವಸತಿ ಶಾಲೆಯಲ್ಲಿ ಊಟ ಸವಿದ ಮುಖ್ಯಮಂತ್ರಿ

KannadaprabhaNewsNetwork |  
Published : Feb 26, 2026, 03:00 AM IST
ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಸೇರಿದಂತೆ ಗಣ್ಯರು ಮುಖ್ಯಮಂತ್ರಿಯನ್ನು ಸ್ವಾಗತಿಸಿದರು. | Kannada Prabha

ಸಾರಾಂಶ

ಬುಧವಾರ ಮಧ್ಯಾಹ್ನ 1.15 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಕಳಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದರು. ಅವರ ಜೊತೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ , ಸಮಾಜಕಲ್ಯಾಣ ಇಲಾಖೆ ಸಚಿವ ಮಹದೆವಪ್ಪ ಸಾಥ್ ನೀಡಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಜಿಲ್ಲಾ ಪಂಚಾಯತ್ ಸಿಇಒ ಪ್ರತಿಕ್ ಬಾಯಲ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಕಳ: ಬುಧವಾರ ಮಧ್ಯಾಹ್ನ 1.15 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಕಳಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದರು. ಅವರ ಜೊತೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ , ಸಮಾಜಕಲ್ಯಾಣ ಇಲಾಖೆ ಸಚಿವ ಮಹದೆವಪ್ಪ ಸಾಥ್ ನೀಡಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಜಿಲ್ಲಾ ಪಂಚಾಯತ್ ಸಿಇಒ ಪ್ರತಿಕ್ ಬಾಯಲ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಂಗ್ರೆಸ್ ಮುಖಂಡರಾದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಪ್ರಸಾದ್ ಕಾಂಚನ್, ಐವನ್ ಡಿಸೋಜಾ, ರಮಾನಾಥ ರೈ, ಸಹಕಾರಿ ಧುರೀಣ ರಾಜೇಂದ್ರ ಕುಮಾರ್, ಗಫೂರ್ ಹಾಗೂ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಸೇರಿದಂತೆ ಗಣ್ಯರು ಮುಖ್ಯಮಂತ್ರಿಯನ್ನು ಸ್ವಾಗತಿಸಿದರು.

ಬಳಿಕ ಮುಖ್ಯಮಂತ್ರಿ ಕಾರ್ಕಳ ನಗರದ ಕಾಬೆಟ್ಟು ಪ್ರದೇಶಕ್ಕೆ ತೆರಳಿ ಸುಮಾರು ಆರು ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾದ ಅಂಬೇಡ್ಕರ್ ಭವನ ಉದ್ಘಾಟಿಸಿದರು. ನಂತರ ಬಂಡಿಮಠದ ಬಳಿ ನಿರ್ಮಿಸಲಾದ ಕಿಸಾನ್ ಸಭಾ ಟ್ರಸ್ಟ್ ವತಿಯಿಂದ ನಿರ್ಮಿತ ಕಿಸಾನ್ ಸಭಾ ಸಭಾಂಗಣವನ್ನು ಉದ್ಘಾಟಿಸಿದರು. ಮಧು ಬಂಗಾರಪ್ಪ, ಶಾಸಕರಾದ ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜ, ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ರಾಜೇಂದ್ರ ಕುಮಾರ್, ಮಾಜಿ ಸಚಿವರಾದ ರಮಾನಾಥ್ ರೈ, ವಿನಯ್ ಕುಮಾರ್ ಸೊರಕೆ, ಜಯಪ್ರಕಾಶ್ ಹೆಗ್ಡೆ, ಮುಖಂಡರಾದ ಉದಯ್ ಶೆಟ್ಟಿ ಮುನಿಯಾಲು, ಮಾಜಿ ಶಾಸಕ ಗೋಪಾಲ್ ಪೂಜಾರಿ, ಮುಖಂಡರಾದ ಮಂಜುನಾಥ್ ಪೂಜಾರಿ, ಎಂ.ಎ.ಗಫೂರ್, ಅಶೋಕ್ ಕುಮಾರ್ ಕೊಡವೂರು, ಕಿಸಾನ್ ಸಭಾದ ಅಧ್ಯಕ್ಷರಾದ ಹರ್ಷ ಮೊಯ್ಲಿ ಇದ್ದರು.ಮುಖ್ಯಮಂತ್ರಿ ಮಹಾತ್ಮ ಗಾಂಧಿ ವಸತಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಮಧ್ಯಾಹ್ನದ ಊಟ ಸವಿದರು. ವಿದ್ಯಾರ್ಥಿಗಳ ಜೊತೆ ಕುಳಿತು ಊಟ ಮಾಡಿರುವುದು ವಿಶೇಷ ಗಮನ ಸೆಳೆಯಿತು. ಊಟದಲ್ಲಿ ಉಪ್ಪಿನಕಾಯಿ, ನೀರುದೋಸೆ, ಗೋಡಂಬಿ-ಬೀನ್ಸ್ ಸುಕ್ಕ, ಬದನೆಕಾಯಿ ಚಟ್ನಿ, ರಾಗಿ ಮುದ್ದೆ, ಸಾರು, ಹಪ್ಪಳ-ಸಂಡಿಗೆ, ಕುಚ್ಚಲಕ್ಕಿ ಅನ್ನ, ಹೋಳಿಗೆ ತುಪ್ಪದೊಂದಿಗೆ, ಕಡಲೆಬೇಳೆ ಪಾಯಸ ಹಾಗೂ ಮೊಸರು ಸೇರಿದಂತೆ ವಿವಿಧ ಸಾಂಪ್ರದಾಯಿಕ ಭಕ್ಷ್ಯಗಳನ್ನು ಸವಿದರು.ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ, ಸಚಿವರಾದ ಎಚ್.ಸಿ.ಮಹದೇವಪ್ಪ, ಮಧು ಬಂಗಾರಪ್ಪ, ಶಾಸಕರಾದ ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜ, ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ರಾಜೇಂದ್ರ ಕುಮಾರ್, ಮಾಜಿ ಸಚಿವರಾದ ರಮಾನಾಥ್ ರೈ, ವಿನಯ್ ಕುಮಾರ್ ಸೊರಕೆ, ಜಯಪ್ರಕಾಶ್ ಹೆಗ್ಡೆ, ಮುಖಂಡರಾದ ಉದಯ್ ಶೆಟ್ಟಿ ಮುನಿಯಾಲು, ಮಾಜಿ ಶಾಸಕ ಗೋಪಾಲ್ ಪೂಜಾರಿ, ಮುಖಂಡರಾದ ಮಂಜುನಾಥ್ ಪೂಜಾರಿ, ಎಂ.ಎ.ಗಫೂರ್, ಅಶೋಕ್ ಕುಮಾರ್ ಕೊಡವೂರು, ಕಿಸಾನ್ ಸಭಾದ ಅಧ್ಯಕ್ಷರಾದ ಹರ್ಷ ಮೊಯ್ಲಿ ಸಾಥ್ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ರಾಮೀಣ ಪ್ರದೇಶದ ಅಭಿವೃದ್ಧಿ ಅವಶ್ಯ: ಕ್ಯಾ.ಬ್ರಿಜೇಶ್ ಚೌಟ
ಕುಂದಲ್ಪಾಡಿ ಶಾಲೆಗೆ ಎಸ್ ಡಿಎಂಸಿ ಎಕ್ಸ್ ಪೋಷರ್ ತಂಡ ಭೇಟಿ