ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಏಳನೇ ವೇತನ ಆಯೋಗದ ಶಿಫಾರಸು ಅಂಗೀಕರಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ರಾಜ್ಯ ಸರ್ಕಾರವು ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಏಳನೇ ವೇತನ ಆಯೋಗದ ಶಿಫಾರಸು ಅಂಗೀಕರಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದೆ.
ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರು ಪದಾಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿ ಮುಖ್ಯಮಂತ್ರಿಗಳನ್ನು ಸನ್ಮಾನಿಸಿದರು.
ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಸಂಪೂರ್ಣವಾಗಿ ಒಪ್ಪಿಕೊಂಡಿದ್ದೇವೆ. ಇದರಿಂದ ಸರ್ಕಾರಕ್ಕೆ 20 ಸಾವಿರ ಕೋಟಿ ರು. ಹೊರೆಯಾಗಲಿದೆ. ನೀವು ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸುವ ಕಾರ್ಯ ಮಾಡಿ ಎಂದು ನೌಕರರಿಗೆ ಸೂಚನೆ ನೀಡಿದರು.
ನೀವು ಸರ್ಕಾರದ ನಿಲುವುಗಳಿಗೆ ತಕ್ಕಂತೆ ಕಾರ್ಯನಿರ್ವಹಿಸಬೇಕು. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸಬೇಕು. ಪ್ರಾಮಾಣಿಕವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಉಪ ಮುಖ್ಯಮoತ್ರಿ ಡಿ.ಕೆ.ಶಿವಕುಮಾರ್ ಅವರನ್ನೂ ಸoಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಹಾಗೂ ಪದಾಧಿಕಾರಿಗಳು ಸನ್ಮಾನಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.