ಪುತ್ತೂರು: ಮೈಸೂರಿನಲ್ಲಿ ನಡೆಯುವ ವಿಶ್ವ ಪ್ರಸಿದ್ಧ ದಸರಾ ಸಂಭ್ರಮದಲ್ಲಿ ಈ ಬಾರಿ ಕರಾವಳಿ ಜಿಲ್ಲೆಯ ಕ್ರೀಡೆ ಕಂಬಳ ನಡೆಸುವಂತೆ ಹಾಗೂ ಅದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ವ್ಯವಸ್ಥೆಗೊಳಿಸುವಂತೆ ಶಾಸಕ ಅಶೋಕ್ ರೈ ಅವರಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಕಂಬಳ ನಡೆಸುವ ಮೂಲಕ ಕಂಬಳ ಕ್ರೀಡೆಯನ್ನು ಜಗತ್ತಿಗೆ ಪರಿಚಯಿಸಿದ ಮತ್ತು ಯಶಸ್ವಿಯಾಗಿ ಕಂಬಳ ನಡೆಸಿದ ಖ್ಯಾತಿ ಅಶೋಕ್ ರೈ ಅವರಿಗಿದೆ. ಕಳೆದ ಬಾರಿ ಪುತ್ತೂರಿಗೆ ಬಂದಿದ್ದ ಡಿಕೆ ಶಿವಕುಮಾರ್ ದಸರಾ ಕಂಬಳದ ಬಗ್ಗೆ ಮಾತನಾಡಿದ್ದರು. ಇದೀಗ ಮುಖ್ಯಮಂತ್ರಿಯವರೇ ಸ್ವತ ಸೂಚನೆ ನೀಡಿದ್ದು ಈ ಬಾರಿ ಮೈಸೂರು ದಸರಾ ವೇಳೆ ಕಂಬಳ ನಡೆಯಲಿದೆ. ಈಗಾಗಲೇ ಒಂದು ಸುತ್ತಿನ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಮೈಸೂರಿನ ಜಯಲಕ್ಷ್ಮೀ ಪುರಂನ ಪ್ರೀಮಿಯರ್ ಸ್ಟುಡಿಯೋ ಬಳಿ ಇರುವ ಸುಮಾರು 17 ಎಕ್ರೆ ಜಾಗದಲ್ಲಿ ಕಂಬಳ ನಡೆಯಲಿದೆ. ಅ.18,19 ರಂದು ಎರಡು ದಿನ ಕಂಬಳ ನಡೆಯಲಿದೆ.
ಮೈಸೂರಿನಲ್ಲಿ ಸಭೆ: ಕಂಬಳ ನಡೆಸುವ ಬಗ್ಗೆ ಮುಖ್ಯಮಂತ್ರಿಗಳ ಸೂಚನೆಯಂತೆ ಮೈಸೂರಿನಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆದಿದೆ. ಈ ಸಭೆಯಲ್ಲಿ ಜಿಲ್ಲೆಯ ಕಂಬಳ ಪ್ರಮುಖರು ಭಾಗವಹಿಸಿದ್ದರು. ಎರಡನೇ ಹಂತದ ಸಭೆ ಮುಂದಿನ ಗುರುವಾರ ಮೈಸೂರಿನಲ್ಲಿ ನಡೆಯಲಿದ್ದು, ಈ ಸಭೆಯಲ್ಲಿ ಶಾಸಕ ಅಶೋಕ್ ರೈ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಸಹಿತ ಪ್ರಮುಖ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.