ಪ್ರಾಣಿ ಸಂಘರ್ಷ ತಡೆಯಲು ಸಿಎಂ ಸೂಚನೆ: ರಾಜೇಗೌಡ

KannadaprabhaNewsNetwork |  
Published : Nov 18, 2025, 12:45 AM IST
ಟಿ.ಡಿ.ರಾಜೇಗೌಡ | Kannada Prabha

ಸಾರಾಂಶ

ನರಸಿಂಹರಾಜಪುರ, ಕಾಡಂಚಿನ ಪ್ರದೇಶಗಳಲ್ಲಿ ಮಾನವ ಪ್ರಾಣಿ ಸಂಘರ್ಷ ತಡೆಗಟ್ಟಲು ಸೂಕ್ತ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆಯಲ್ಲಿ ಸೂಚಿಸಿದ್ದಾರೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದ್ದಾರೆ.

- ರೇಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ₹500 ಕೋಟಿ ಬಿಡುಗಡೆಗೆ ನಿರ್ದೇಶನ

ಕನ್ನಡಪ್ರಭ ವಾರ್ತೆ,ನರಸಿಂಹರಾಜಪುರ

ಕಾಡಂಚಿನ ಪ್ರದೇಶಗಳಲ್ಲಿ ಮಾನವ ಪ್ರಾಣಿ ಸಂಘರ್ಷ ತಡೆಗಟ್ಟಲು ಸೂಕ್ತ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆಯಲ್ಲಿ ಸೂಚಿಸಿದ್ದಾರೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಸಮ್ಮುಖದಲ್ಲಿ ಗುರುವಾರ ನಡೆದ ಎಲ್ಲಾ ಅರಣ್ಯಾಧಿಕಾರಿ ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾನವ ಪ್ರಾಣಿ ಸಂಘರ್ಷ ತಡೆಯಬೇಕು. ಕಾಡು ಪ್ರಾಣಿಗಳಿಂದ ರೈತರು ಬೆಳೆದ ಬೆಳೆ ನಾಶವಾಗದಂತೆ ಕ್ರಮ ವಹಿಸಬೇಕು. ಕಾಡು ಪ್ರಾಣಿಗಳ ದಾಳಿಯಿಂದ ರೈತರಿಗೆ ಗಾಯ ಅಥವಾ ಜೀವಹಾನಿಯಾದರೆ ಪರಿಹಾರಕೊಡುವುದಕ್ಕಿಂತ ದಾಳಿಗಳು ನಡೆಯದಂತೆ ನೋಡಿಕೊಳ್ಳುವುದು ಮುಖ್ಯ. ಕಾಡು ಪ್ರಾಣಿಗಳ ಹಾವಳಿ ಹೆಚ್ಚಾದ ಪ್ರದೇಶಗಳಲ್ಲಿ ಸೋಲಾರ್ ಟೆಂಟಕಲ್ ಬೇಲಿನಿರ್ಮಾಣ ಮಾಡಬೇಕು. ಆನೆ ಕಾರ್ಯ ಪಡೆಯ (ಎಲಿಫೆಂಟ್ ಟಾಕ್ಸ್ ಫೋರ್ಸ್) ಘಟಕಗಳನ್ನು ಹೆಚ್ಚು ಸ್ಥಾಪಿಸಬೇಕು. ಸೋಲಾರ್ ಟೆಂಟಕಲ್ ಬೇಲಿ ಹಾಗೂ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಬೇಕಾದ ₹300 ರಿಂದ 500 ಕೋಟಿ ಅನುದಾನ ಶೀಘ್ರ ಬಿಡುಗಡೆ ಮಾಡುವಂತೆ ಹಣಕಾಸು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದರು.

15 ಜನ ಅರವಳಿಕೆ ತಜ್ಞರನ್ನು ನೇಮಿಸುವಂತೆಯೂ ಸೂಚಿಸಿದ್ದಾರೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವದ ವ್ಯಾಪ್ತಿಯವರಿಗೆ ಹೆಚ್ಚುವರಿ ಪರಿಹಾರದ ಹಣ ಬಿಡುಗಡೆ ಮಾಡಲು ಕ್ರಮಕೈಗೊಳ್ಳಬೇಕು. ಈ ವ್ಯಾಪ್ತಿಯಲ್ಲಿ ಕಾಡು ಪ್ರಾಣಿಗಳು ರೈತರ ಜಮೀನಿಗೆ ಬರದಂತೆ ಶಾಶ್ವತ ಪರಿಹಾರವಾಗಿ 50 ಕಿ.ಮೀ ರೈಲ್ವೆ ಬ್ಯಾರಿಕೇಡನ್ನು ಹಂತ ಹಂತವಾಗಿ ನಿರ್ಮಿಸಲು ಕ್ರಮಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ. ಕಾಡಂಚಿನ ಗ್ರಾಮಗಳಲ್ಲಿ ಉಪಟಳ ನೀಡುವ ಕಾಡಾನೆಗಳು, ಹುಲಿ, ಕಾಡುಕೋಣ ಸೆರೆ ಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕು. ಅರಣ್ಯ ಮತ್ತು ರೈತರ ಜಮೀನಿನ ಗಡಿಭಾಗಗಳಲ್ಲಿ ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಕ್ರಮ, ನಿವೃತ್ತ ಯೋಧರನ್ನು ಆದ್ಯತೆ ಮೇಲೆ ಕೆಲಸಕ್ಕೆ ನೇಮಿಸಿಕೊಳ್ಳುವಂತೆ ಸೂಚಿಸಿದ್ದಾರೆ ಎಂದರು.ಸಭೆಯಲ್ಲಿ ಶಾಸಕ ಟಿ.ಡಿ.ರಾಜೇಗೌಡ, ನರೇಂದ್ರಸ್ವಾಮಿ, ಅರಣ್ಯ ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳು ಹಾಜರಿದ್ದರು ಎಂದು ತಿಳಿಸಿದ್ದಾರೆ.

PREV

Recommended Stories

150 ದಿನವೂ ತುಂಬಿ ತುಳುಕುತ್ತಿದೆ ಕೆಆರ್‌ಎಸ್‌
ಮಹಿಳೆಯರು ಉದ್ಯಮಶೀಲತೆ ಬೆಳೆಸಿಕೊಂಡರೆ ದೇಶದ ಅಭಿವೃದ್ಧಿಗೆ ಪೂರಕ: ಎಂ.ಜೆ.ದಿನೇಶ್