ಬೆಳಗಾವಿ, ಚಿಕ್ಕೋಡಿ ಅಭ್ಯರ್ಥಿಗಳ ಜತೆ ಸಿಎಂ ಸಭೆ

KannadaprabhaNewsNetwork |  
Published : Mar 23, 2024, 01:06 AM IST
ಸಿದ್ದರಾಮಯ್ಯ | Kannada Prabha

ಸಾರಾಂಶ

ಬೆಂಗಳೂರು: ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಘೋಷಣೆಯಾದ ಮರುದಿನವೇ ಕ್ಷೇತ್ರಗಳಲ್ಲಿ ಗೆಲ್ಲುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿದ್ಧತಾ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಘೋಷಣೆಯಾದ ಮರುದಿನವೇ ಕ್ಷೇತ್ರಗಳಲ್ಲಿ ಗೆಲ್ಲುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿದ್ಧತಾ ಸಭೆ ನಡೆಯಿತು.

ಶುಕ್ರವಾರ ಕಾವೇರಿ ನಿವಾಸದಲ್ಲಿ ಸಚಿವರಾದ ಸತೀಶ್‌ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್‌, ಚಿಕ್ಕೋಡಿ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ, ಬೆಳಗಾವಿ ಅಭ್ಯರ್ಥಿ ಮೃಣಾಳ್‌ ಹೆಬ್ಬಾಳ್ಕರ್‌, ಹಿರಿಯ ಶಾಸಕರು ಹಾಗೂ ಮುಖಂಡರೊಂದಿಗೆ ಸಿದ್ದರಾಮಯ್ಯ ಅವರು ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿ. ಬೆಳಗಾವಿ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರ ಒಳಗೊಂಡಿರುವ ಉತ್ತರ ಕನ್ನಡ ಜಿಲ್ಲೆ ಸೇರಿ ಬೆಳಗಾವಿಯ ಜಿಲ್ಲೆಗಳಿಗೆ ಒಳಪಡುವ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಖಚಿತವಾಗಿ ಗೆಲುವು ಸಾಧಿಸಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಬೆಳಗಾವಿ ಜಿಲ್ಲೆಯ ಲಕ್ಷಾಂತರ ಕುಟುಂಬಗಳ ಮತ್ತು ಮಹಿಳೆಯರ ಬದುಕಿನ ಸಂಕಟವನ್ನು ಕಡಿಮೆ ಮಾಡಿವೆ. ಇದಕ್ಕಾಗಿ ಯುವತಿಯರು ಮತ್ತು ಮಹಿಳೆಯರು ಶೇ.80ರಷ್ಟು ನಮ್ಮ ಪರವಾಗಿ ಇದ್ದಾರೆ ಎನ್ನುವ ಸಕಾರಾತ್ಮಕ ವರದಿ ಸಮೀಕ್ಷೆಗಳಿಂದ ಹೊರ ಬಂದಿವೆ. ನಾವು ಜನರ ಮನೆ ಬಾಗಿಲಿಗೆ ಹೋಗಿ ಪ್ರತೀ ತಿಂಗಳು ಪ್ರತಿ ಕುಟುಂಬಕ್ಕೆ 5ರಿಂದ 6 ಸಾವಿರ ರು. ಕೊಡುತ್ತಿರುವ ಮತ್ತು ವರ್ಷಕ್ಕೆ 50ರಿಂದ 60 ಸಾವಿರ ರು. ಪ್ರತಿ ಕುಟುಂಬದ ಖಾತೆಗೆ ಜಮೆ ಆಗುತ್ತಿರುವುದನ್ನು ಮನವರಿಕೆ ಮಾಡಿಸಿ, ಜನರ ನಡುವೆ ಗಟ್ಟಿಯಾಗಿ ನಿಂತು ಗೆದ್ದು ಬನ್ನಿ ಎಂದು ಕರೆ ನೀಡಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮಾತನಾಡಿ, ಎಲ್ಲರೂ ಒಟ್ಟಾಗಿ ಅಖಾಡಕ್ಕೆ ಇಳಿದಿದ್ದೇವೆ. ಬೆಳಗಾವಿ ಹಾಗೂ ಚಿಕ್ಕೋಡಿ ಎರಡೂ ಕ್ಷೇತ್ರದಲ್ಲೂ ಗೆದ್ದು ಬಂದು ಈ ಗೆಲುವನ್ನು ನಿಮಗೆ ಅರ್ಪಿಸುತ್ತೇವೆ ಎಂದು ಸಿದ್ದರಾಮಯ್ಯ ಅವರಿಗೆ ಮಾತು ನೀಡಿದರು.

ಬೆಳಗಾವಿ, ಚಿಕ್ಕೋಡಿ, ಕಾರವಾರ ಕ್ಷೇತ್ರದ ಜನಪ್ರತಿನಿಧಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದೆವು. ಮೂರೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವುದಾಗಿ ಭರವಸೆ ನೀಡಿದ್ದೇವೆ. ಬಿಜೆಪಿಯವರು ಜಗದೀಶ್‌ ಶೆಟ್ಟರ್‌ ಅವರನ್ನು ಸೋಲಿಸುವ ಸಲುವಾಗಿಯೇ ಬೆಳಗಾವಿಗೆ ಕಳುಹಿಸುತ್ತಿದ್ದಾರೆ.-ಲಕ್ಷ್ಮಣ ಸವದಿ, ಮಾಜಿ ಉಪಮುಖ್ಯಮಂತ್ರಿ

PREV

Recommended Stories

ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ