ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡನೆ

KannadaprabhaNewsNetwork |  
Published : Apr 22, 2025, 01:46 AM ISTUpdated : Apr 22, 2025, 06:13 AM IST
ಸಿದ್ದರಾಮಯ್ಯ | Kannada Prabha

ಸಾರಾಂಶ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿಚಾರದಲ್ಲಿ ತಪ್ಪು ಮಾಡಿರುವ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

 ಬೆಂಗಳೂರು :  ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿಚಾರದಲ್ಲಿ ತಪ್ಪು ಮಾಡಿರುವ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಬಗ್ಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತಪ್ಪು ಮಾಡಿರುವ ಅಧಿಕಾರಿಗಳ ಮೇಲೆ ಕ್ರಮ ಆಗಲಿದೆ’ ಎಂದು ಭರವಸೆ ನೀಡಿದರು.

ಕಳೆದ ವಾರ ರಾಜ್ಯದ ಹಲವು ನಗರಗಳ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ, ತೆಗೆದು ಕತ್ತರಿಸಿದ ಘಟನೆ ನಡೆದಿತ್ತು. ಇದಕ್ಕೆ ರಾಜ್ಯವ್ಯಾಪಿ ಆಕ್ರೋಶ ವ್ಯಕ್ತವಾಗಿ ಆಡಳಿತ, ವಿಪಕ್ಷಗಳ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಜೊತೆಗೆ ಕೆಲ ಸಚಿವರು ಸಂತ್ರಸ್ತ ವಿದ್ಯಾರ್ಥಿಗಳ ಮನೆಗೆ ತೆರಳಿ ನೆರವಿನ ಭರವಸೆಯನ್ನೂ ನೀಡಿದ್ದರು. ಜೊತೆಗೆ ಬ್ರಾಹ್ಮಣ ಸಮುದಾಯ ಬೀದಿಗಿಳಿದು ಹೋರಾಟ ನಡೆಸಿತ್ತು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿತ್ತು. ಆದರೆ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದುವರೆಗೂ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ ಸೋಮವಾರ ಈ ಕುರಿತು ಪ್ರತಿಕ್ರಿಯಿಸಿರುವ ಅವರು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮದ ಭರವಸೆ ನೀಡಿದ್ದಾರೆ.

ವೇಮುಲಾ ಕಾಯ್ದೆಗೆ ಪ್ರಯತ್ನ:

ಇದೇ ವೇಳೆ ರಾಹುಲ್‌ಗಾಂಧಿ ಅವರು ರೋಹಿತ್‌ ವೇಮುಲಾ ಕಾಯ್ದೆ ಮಾಡಿರುವಂತೆ ಪತ್ರ ಬರೆದಿರುವ ವಿಚಾರ ಮಾತನಾಡಿ, ಈ ಕಾಯ್ದೆಯ ಕರಡು ಸಿದ್ಧಪಡಿಸುವಂತೆ ಕಾನೂನು ಸಲಹೆಗಾರರಿಗೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರಿಗೆ ಪತ್ರ ಬರೆಯಲಾಗಿದ್ದು, ಈ ಕುರಿತು ಪರಿಶೀಲಿಸಿ ಕಾಯ್ದೆ ತರಲು ಪ್ರಯತ್ನ ಮಾಡುತ್ತೇವೆ. ಶಿಕ್ಷಣ ವ್ಯವಸ್ಥೆಯಲ್ಲಿ ಜಾತಿತಾರತಮ್ಯ ನಿವಾರಣೆಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚೈತ್ರ ‌ನವರಾತ್ರಿ ನಿಮಿತ್ತ ಕನ್ನಡ ಗೀತೆ ಜತೆ ಮೋದಿ ಶುಭಾಶಯ -ದಿನಕ್ಕೊಂದು ಭಾಷೆಯ ಗೀತೆ ಪೋಸ್ಟ್‌
ಸೌದೆ ಒಲೆಗೆ ಖಾನಾವಳಿ ಮೊರೆ-ಒಂದು ಕ್ವಿಂಟಲ್ ಕಟ್ಟಿಗೆಗೆ 900 ರು. ವೆಚ್ಚ