ಕನ್ನಡಪ್ರಭ ವಾರ್ತೆ ಬೆಂಗಳೂರು
ಜಿಬಿಎ ವ್ಯಾಪ್ತಿಯ ಯಲಹಂಕ, ಬ್ಯಾಟರಾಯನಪುರ, ಹೆಬ್ಬಾಳ, ಸರ್ವಜ್ಞನಗರ ವಿಧಾನಸಭಾ ಕ್ಷೇತ್ರಗಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಈವರೆಗೆ ಪ್ರತಿ ಯಜಮಾನಿಯರಿಗೆ ₹62 ಸಾವಿರ ತಲುಪಿದೆ. ಪಂಚ ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ಇದುವರೆಗೂ ₹1,46,443 ಕೋಟಿ ಹಣವನ್ನು ಖರ್ಚು ಮಾಡಿದೆ ಎಂದರು.
ಗ್ಯಾರಂಟಿ ಯೋಜನೆಗಳ ದುರುಪಯೋಗ ತಡೆಯಲು ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಮಾಡಲಾಗುತ್ತಿದೆ. ಗೃಹಲಕ್ಷ್ಮೀ ಯೋಜನೆಯಡಿ ನೋಂದಾಯಿತರಲ್ಲಿ 1,95,224 ಫಲಾನುಭವಿಗಳು ಮೃತಪಟ್ಟಿದ್ದರೂ ಅವರ ಖಾತೆಗೆ ಸುಮಾರು ₹115 ಕೋಟಿ ಹಣ ಸಂದಾಯವಾಗಿದೆ. ಮೃತ ಫಲಾನುಭವಿಗಳ ಹೆಸರನ್ನು 15 ದಿನದಲ್ಲಿ ಪಟ್ಟಿಯಿಂದ ಕೈಬಿಡುವ ಸಂಬಂಧ ಸರ್ಕಾರ ಶೀಘ್ರದಲ್ಲೇ ಮಾರ್ಗಸೂಚಿ ರಚಿಸಲಿದೆ ಎಂದರು.