ಉಪ ಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

KannadaprabhaNewsNetwork |  
Published : Oct 26, 2024, 01:13 AM ISTUpdated : Oct 26, 2024, 10:44 AM IST
ಸ | Kannada Prabha

ಸಾರಾಂಶ

ಮುಡಾ ಹಗರಣ ತನಿಖೆ ತೀವ್ರಗತಿಯಲ್ಲಿ ಸಾಗಿದೆ. ಇದರ ಸತ್ಯಾಸತ್ಯತೆ ಸಿದ್ದರಾಮಯ್ಯ ಅವರ ನಿಜವಾದ ಮುಖವಾಡ ಬಯಲಿಗೆ ತರಲಿದೆ.

ಕೊಟ್ಟೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಂತರ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಅವರು ರಾಜೀನಾಮೆ ನೀಡುವುದನ್ನು ಯಾವುದೇ ಶಕ್ತಿ ತಡೆಯಲಾರದು. ಮುಡಾ ಹಗರಣದಲ್ಲಿ ಸಿಎಂ ಪೆರೋಲ್‌ ಮೇಲೆ ಹೊರಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಶುಕ್ರವಾರ ಉಜ್ಜಯನಿ ಸದ್ಧರ್ಮ ಪೀಠಕ್ಕೆ ಆಗಮಿಸಿ ಜಗದ್ಗುರುಗಳಿಂದ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮುಡಾ ಹಗರಣ ತನಿಖೆ ತೀವ್ರಗತಿಯಲ್ಲಿ ಸಾಗಿದೆ. ಇದರ ಸತ್ಯಾಸತ್ಯತೆ ಸಿದ್ದರಾಮಯ್ಯ ಅವರ ನಿಜವಾದ ಮುಖವಾಡ ಬಯಲಿಗೆ ತರಲಿದೆ. ಈ ಬಗ್ಗೆ ಜನ ಗಮನಹರಿಸದೇ ಇರುವಂತೆ ಮಾಡುವ ಪ್ರಯತ್ನವನ್ನು ಉಪ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಮಾಡತೊಡಗಿದ್ದಾರೆ ಎಂದು ಅವರು ಹೇಳಿದರು.

ರಾಜ್ಯದ ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸ ಹೊಂದಿರುವೆ. ಮೂರು ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ನಿರಂತರ ತೊಡಗಿಸಿಕೊಳ್ಳುವ ಮೂಲಕ ಬಿಜೆಪಿ ಮತ್ತು ಜೆಡಿಎಸ್ ನಾಯಕರೊಂದಿಗೆ ಕೂಡಿ ಮೂರರಲ್ಲೂ ಗೆಲ್ಲುವಂತೆ ಮಾಡುತ್ತೇವೆ ಎಂದರು.

ಚನ್ನಪಟ್ಟಣದಲ್ಲಿ ರಾಜಕೀಯ ಮೇಲಾಟ ನಡೆದಿದೆ. ಕೊನೆಯದಾಗಿ ಮೈತ್ರಿ ಅಭ್ಯರ್ಥಿ ಗೆಲುವಿನ ದಡ ತಲುಪಲಿದ್ದಾರೆ. ಆ ಕ್ಷೇತ್ರದಲ್ಲಿ ಹರಕೆಯ ಕುರಿಯನ್ನಾಗಿ ಕಾಂಗ್ರೆಸ್ ಪಕ್ಷದವರು ಯೋಗೇಶ್ವರ ಅವರನ್ನು ಮಾಡಲು ಮುಂದಾಗಿದ್ದಾರೆಯೇ ಹೊರತು ಬಿಜೆಪಿಯವರು ನಿಖಿಲ್ ಕುಮಾರಸ್ವಾಮಿಯನ್ನು ಮಾಡುವುದಿಲ್ಲ. ಇದನ್ನು ಕಾಂಗ್ರೆಸ್ಸಿಗರು ನೆನಪಿಟ್ಟುಕೊಳ್ಳಲಿ ಎಂದರು.

ಬಿಜೆಪಿಯಲ್ಲಿ ಯಾವುದೇ ಭಿನ್ನಮತದ ಪ್ರಶ್ನೆಯೇ ಇಲ್ಲ. ತಾವು ಅಧ್ಯಕ್ಷರಾದ ಘಳಿಗೆಯಿಂದ ವಿರೋಧಿಸುತ್ತ ಬಂದಿರುವವರನ್ನು ಸಹ ಜೊತೆಗೆ ಕರೆದುಕೊಂಡು ಹೋಗಿ ಪಕ್ಷ ಸಂಘಟಿಸುವ ಕಾರ್ಯ ಮಾಡುತ್ತಿರುವೆ. ಪಕ್ಷವನ್ನು ರಾಜ್ಯದಲ್ಲಿ ಸದೃಢವಾಗಿ ಸಂಘಟಿಸಿದ ಯಡಿಯೂರಪ್ಪ ಅವರನ್ನೇ ವಿರೋಧಿಸುತ್ತಾ ಬಂದಿರುವವರಿಗೆ ವಿಜಯೇಂದ್ರ ಯಾವ ಲೆಕ್ಕ? ಆದರೂ ಅವರು ಮಾಡುವ ಟೀಕೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿ ರಾಜ್ಯದಲ್ಲಿ ಮುಂದೆ ಬಿಜೆಪಿ ಅಧಿಕಾರ ಹೊಂದಲು ಎಲ್ಲರೊಂದಿಗೆ ಕೈ ಜೋಡಿಸುತ್ತಿರುವೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಪಿ.ಚನ್ನಬಸವನಗೌಡ, ಕೂಡ್ಲಿಗಿ ಮಂಡಳ ಅಧ್ಯಕ್ಷ ನಾಗರಾಜ ಕಾಮಶೆಟ್ಟಿ, ಭರಮನಗೌಡ, ಅಂಗಡಿ ಪಂಪಾಪತಿ, ಸಿದ್ದಯ್ಯ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಬಾಡಿಗೆ ತಾಯ್ತನ’ದಿಂದ ಮಗು : ವೃದ್ಧ ದಂಪತಿಯಿಂದ ಕೋರ್ಟ್‌ ಮೊರೆ
ನೆಚ್ಚಿನ ಗುರುಗೆ ಶಿಷ್ಯರಿಂದ ‘ರಕ್ತ’ ತುಲಾಭಾರ!