ಸರ್ಕಾರವೇ ಜನರ ಮನೆಬಾಗಿಲಿಗೆ ತರುವುದು ಸಿಎಂ ಸಂಕಲ್ಪ

KannadaprabhaNewsNetwork |  
Published : Nov 24, 2026, 12:45 AM IST
ಫೋಟೋ: 22 ಹೆಚ್ ಎಸ್ ಕೆ 1 ಹೊಸಕೋಟೆ ತಾಲೂಕಿನ ಅನಗೊಂಡನಹಳ್ಳಿ ಹೋಬಳಿಯ ಗಣಗಲೂರು ಗ್ರಾಪಂ ವ್ಯಾಪ್ತಿಯ ಶಿವನಪುರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಪ್ರಜಾ ಸೇವಾ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಶಾಸಕ ಶರತ್ ಬಚ್ಚೇಗೌಡ. | Kannada Prabha

ಸಾರಾಂಶ

ಹೊಸಕೋಟೆ: ಸಾರ್ವಜನಿಕರು ತಮ್ಮ ಕೆಲಸ- ಕಾರ್ಯಗಳಿಗಾಗಿ ತಾಲೂಕು ಕಚೇರಿ, ಗ್ರಾಪಂ ಹಾಗೂ ಇತರ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸರ್ಕಾರವೇ ನೇರವಾಗಿ ಜನರ ಮನೆಬಾಗಿಲಿಗೆ ತಲುಪಬೇಕು ಎಂಬ ಆಶಯದೊಂದಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಜಾಸೇವಾ ಕಾರ್ಯಕ್ರಮ ರೂಪಿಸಿದ್ದಾರೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು

ಹೊಸಕೋಟೆ: ಸಾರ್ವಜನಿಕರು ತಮ್ಮ ಕೆಲಸ- ಕಾರ್ಯಗಳಿಗಾಗಿ ತಾಲೂಕು ಕಚೇರಿ, ಗ್ರಾಪಂ ಹಾಗೂ ಇತರ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸರ್ಕಾರವೇ ನೇರವಾಗಿ ಜನರ ಮನೆಬಾಗಿಲಿಗೆ ತಲುಪಬೇಕು ಎಂಬ ಆಶಯದೊಂದಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಜಾಸೇವಾ ಕಾರ್ಯಕ್ರಮ ರೂಪಿಸಿದ್ದಾರೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ತಾಲೂಕಿನ ಗಣಗಲೂರು ಗ್ರಾಪಂ ಶಿವನಪುರ ಗ್ರಾಮದಲ್ಲಿ ಆಯೋಜಿಸಿದ್ದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ ಮತ್ತು ಗೃಹಜ್ಯೋತಿ ಸೌಲಭ್ಯಗಳನ್ನು ನೇರವಾಗಿ ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುತ್ತಿರುವ ಮಾದರಿಯಲ್ಲೇ ಜನರ ಕುಂದುಕೊರತೆಗಳನ್ನೂ ಸ್ಥಳದಲ್ಲೇ ಬಗೆಹರಿಸಲು ಈ ವೇದಿಕೆ ಕಲ್ಪಿಸಲಾಗಿದೆ. ಕಂದಾಯ, ತಾಪಂ, ಆರೋಗ್ಯ, ಪಶುಸಂಗೋಪನೆ, ಶಿಕ್ಷಣ ಸೇರಿ ಸುಮಾರು 28 ವಿವಿಧ ಇಲಾಖೆಗಳ ಅಧಿಕಾರಿಗಳು ಒಂದೇ ಸೂರಿನಡಿ ಕುಳಿತು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುತ್ತಿದ್ದಾರೆ. ಸಾಧ್ಯವಾದಷ್ಟು ಸಮಸ್ಯೆಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸುವುದು ಹಾಗೂ ತಾಂತ್ರಿಕ ಕಾರಣಗಳಿಂದ ವಿಳಂಬವಾಗುವ ಪ್ರಕರಣಗಳಿಗೆ ಒಂದೆರಡು ವಾರಗಳ ಒಳಗಾಗಿ ಶಾಶ್ವತ ಪರಿಹಾರ ಒದಗಿಸುವುದು ಕಾರ್ಯಕ್ರಮದ ಉದ್ದೇಶ ಎಂದರು.66 ಕೆವಿ ವಿದ್ಯುತ್ ಸಬ್ ಸ್ಟೇಷನ್:

ಅನಗೊಂಡನಹಳ್ಳಿ ಭಾಗದ ರೈತರು ಎದುರಿಸುತ್ತಿದ್ದ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಇಂಧನ ಸಚಿವರಿಗೆ ಮನವಿ ಸಲ್ಲಿಸಲಾಗಿತ್ತು. ಅದರಂತೆ ₹105 ಕೋಟಿ ವೆಚ್ಚದಲ್ಲಿ 66 ಕೆವಿ ಸಾಮರ್ಥ್ಯದ ವಿದ್ಯುತ್ ಉಪಕೇಂದ್ರದ ಕಾಮಗಾರಿ ಈಗಾಗಲೇ ಪ್ರಾರಂಭವಾಗಿದ್ದು, ಮುಂದಿನ 6 ತಿಂಗಳೊಳಗೆ ಉದ್ಘಾಟನೆಗೊಂಡು ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ. ವಸತಿರಹಿತರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ತಾಲೂಕಿನ 7 ಗ್ರಾಮಗಳಲ್ಲಿ ಒಟ್ಟು 28 ಎಕರೆ ಸರ್ಕಾರಿ ಜಮೀನನ್ನು ಗುರುತಿಸಿದ್ದು, ಅರ್ಹರಿಗೆ ವಿತರಿಸಲಾಗುವುದು. ವಿಶೇಷವಾಗಿ ಶಿವನಪುರ ಗ್ರಾಮದಲ್ಲೇ 36 ಗುಂಟೆ ಜಮೀನನ್ನು ಗುರುತಿಸಿದ್ದು, ಸ್ಥಳೀಯ ಅರ್ಹರಿಗೆ ನಿವೇಶನ ಹಂಚಲಾಗುವುದು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂ ಗ್ಯಾರಂಟಿ ಯೋಜನೆಯಡಿ ಗ್ರಾಮಠಾಣಾ ವ್ಯಾಪ್ತಿಯಲ್ಲಿ ಬಿ-ಖಾತಾ ಹೊಂದಿರುವವರಿಗೆ ಹಾಗೂ ತೋಟ, ಹೊಲಗಳಲ್ಲಿ ಮನೆ ನಿರ್ಮಿಸಿಕೊಂಡು ಇಸಿ ಮತ್ತು ಸೇಲ್ ಡೀಡ್ ದಾಖಲೆ ಹೊಂದಿರುವವರಿಗೆ ಇ- ಖಾತಾ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶೀತಲ್, ಇಒ ಮುನಿಯಪ್ಪ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು, ಮುಖಂಡರು ಹಾಜರಿದ್ದರು.

ಫೋಟೋ: 22 ಹೆಚ್ ಎಸ್ ಕೆ 1

ಹೊಸಕೋಟೆ ತಾಲೂಕಿನ ಗಣಗಲೂರು ಗ್ರಾಪಂ ವ್ಯಾಪ್ತಿಯ ಶಿವನಪುರದಲ್ಲಿ ಆಯೋಜಿಸಿದ್ದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ಶಾಸಕ ಶರತ್ ಬಚ್ಚೇಗೌಡ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕವಿತೆಗಳು ಜೀವಪರ ಸಂದೇಶ ಸಾರುವಂತಿರಲಿ
ಶುಂಠಿ ಕಣ ಬಂದ್ ಮಾಡಿದರೆ ಶಾಸಕರು ಖರೀದಿಸ್ತಾರಾ?