ಪಂಚಮಸಾಲಿ ಹೋರಾಟ ಘರ್ಷಣೆಗೆ ಸಿಎಂ ಕಾರಣ; ರೆಡ್ಡಿ ಆರೋಪ

KannadaprabhaNewsNetwork |  
Published : Dec 12, 2024, 12:32 AM IST
ಬಳ್ಳಾರಿಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಶಾಸಕ ಜನಾರ್ದನ ರೆಡ್ಡಿ, ಪಂಚಮಸಾಲಿ ಹೋರಾಟವನ್ನು ಹತ್ತಿಕ್ಕಲು ಪೊಲೀಸರು ನಡೆಸಿದ ಲಾಠಿ ಪ್ರಹಾರವನ್ನು ಖಂಡಿಸಿದರು.  | Kannada Prabha

ಸಾರಾಂಶ

ಬಿಜೆಪಿ ಜಯಮೃತ್ಯುಂಜಯ ಸ್ವಾಮಿ ಪರವಾಗಿ ಇರಲಿದೆ. ಅವರ ಹೋರಾಟವನ್ನು ಬೆಂಬಲಿಸಲಿದೆ.

ಬಳ್ಳಾರಿ: ಪಂಚಮಸಾಲಿ ಸಮಾಜದ 2ಎ ಮೀಸಲಾತಿಗೆ ಒತ್ತಾಯಿಸಿ ನಡೆಸಿದ ಹೋರಾಟವನ್ನು ಹತ್ತಿಕ್ಕಲು ಲಾಠಿ ಚಾರ್ಜ್‌ ಮಾಡಿರುವ ಪೊಲೀಸರ ನಡೆ ಹೇಯವಾದದ್ದು. ಹಿರಿಯರು, ವಯಸ್ಸಾದವರು ಎನ್ನದೇ ಭಯಾನಕವಾಗಿ ಲಾಠಿ ಪ್ರಹಾರ ನಡೆಸಿದ್ದು, ಈ ಕೃತ್ಯಕ್ಕೆ ಮುಖ್ಯಮಂತ್ರಿಯೇ ನೇರ ಹೊಣೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಲಾಠಿ ಚಾರ್ಜ್ ಮಾಡುವ ಮೂಲಕ ರಾಜ್ಯ ಸರ್ಕಾರ ಸೇಡಿನ ರೀತಿಯಲ್ಲಿ ವರ್ತಿಸಿದೆ. ಹೋರಾಟಗಾರರ ಮೇಲೆ ಬ್ರಿಟಿಷರಂತೆ ಹೀನಾಯವಾಗಿ ಪೊಲೀಸರು ಹಲ್ಲೆಗೈದಿದ್ದಾರೆ. ಸಮುದಾಯದ ಜಯಮೃತ್ಯುಂಜಯ ಶ್ರೀಗಳನ್ನು ಬಂಧಿಸಲಾಗಿದೆ. ಮುಖಂಡರಾದ ಸಿ.ಸಿ. ಪಾಟೀಲ್, ಅರವಿಂದ ಬೆಲ್ಲದ್, ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಅನೇಕರನ್ನು ಬಂಧಿಸಲಾಗಿದೆ. ಎಡಿಜಿಪಿ ಹಿತೇಂದ್ರ ಬ್ರಿಟಿಷ್ ಕಾಲದ ರೀತಿ ಅಮಾನುಷವಾಗಿ ಲಾಠಿ ಚಾರ್ಜ್‌ ಮಾಡಿಸಿದ್ದಾರೆ ಎಂದು ದೂರಿದರು.

ಬಿಜೆಪಿ ಜಯಮೃತ್ಯುಂಜಯ ಸ್ವಾಮಿ ಪರವಾಗಿ ಇರಲಿದೆ. ಅವರ ಹೋರಾಟವನ್ನು ಬೆಂಬಲಿಸಲಿದೆ ಎಂದು ಜನಾರ್ದನ ರೆಡ್ಡಿ ತಿಳಿಸಿದರು.

ಪಕ್ಷದ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕಾ, ಹಿರಿಯ ಮುಖಂಡರಾದ ಡಾ.ಮಹಿಪಾಲ್, ಡಾ.ಬಿ.ಕೆ. ಸುಂದರ್, ಅಡವಿಸ್ವಾಮಿ, ಶರಣು, ಕೆ.ಆರ್‌.ಮಲ್ಲೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿದ್ದರು.

ಬಳ್ಳಾರಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌
ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ