ಕನ್ನಡಪ್ರಭ ವಾರ್ತೆ ಸುವರ್ಣ ವಿಧಾನಸೌಧ
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಮಹಿಳೆಯರಿಗೆ ನೀಡಿದ ವಾಗ್ದಾನವನ್ನು ಸರ್ಕಾರ ಪಾಲಿಸುತ್ತಿದೆ. ಈವರೆಗೆ 23 ಕಂತುಗಳಲ್ಲಿ ಒಟ್ಟು 46 ಸಾವಿರ ರು. ಪ್ರತಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪಾವತಿಸಲಾಗಿದೆ. ಆಗಸ್ಟ್‌ವರೆಗೆ ಗೃಹಲಕ್ಷ್ಮೀ ಯೋಜನೆ ಹಣ ಪಾವತಿಸಲಾಗಿದೆ ಎಂಬ ನನ್ನ ಹೇಳಿಕೆಗೆ ಈಗಲೂ ಬದ್ಧಳಾಗಿದ್ದೇನೆ. ಇನ್ನು, ಪ್ರತಿ ತಿಂಗಳು ಆರ್ಥಿಕ ಇಲಾಖೆಗೆ ಗೃಹ ಲಕ್ಷ್ಮೀ ಹಣ ಬಿಡುಗಡೆಗೆ ಪ್ರಸ್ತಾವನೆ ಕಳುಹಿಸುತ್ತೇವೆ. ಆರ್ಥಿಕ ಇಲಾಖೆ ಅದನ್ನು ಪರಿಶೀಲಿಸಿ ಅನುದಾನ ಬಿಡುಗಡೆ ಮಾಡುತ್ತದೆ. ಹಾಗೇನಾದರೂ, ಫೆಬ್ರವರಿ ಮತ್ತು ಮಾರ್ಚ್‌ನ ಗೃಹಲಕ್ಷ್ಮೀ ಹಣ ಫಲಾನುಭವಿಗಳಿಗೆ ಪಾವತಿಸಿಲ್ಲ ಎಂದಾದರೆ, ಮುಖ್ಯಮಂತ್ರಿ ಅವರು ಅದಕ್ಕೆ ಉತ್ತರ ನೀಡುತ್ತಾರೆ ಎಂದರು.
ಇನ್ನು ಆರ್ಥಿಕ ಇಲಾಖೆಯಿಂದ 5 ಸಾವಿರ ಕೋಟಿ ರು. ಬಿಡುಗಡೆಯಾಗಿದ್ದರೂ ಫಲಾನುಭವಿಗಳ ಖಾತೆಗೆ ಬಿಡುಗಡೆಯಾಗಿಲ್ಲ ಎಂದು ವಿರೋಧ ಪಕ್ಷಗಳು ಹೇಳುತ್ತವೆ. ಹೀಗೆ ಚೈಲ್ಡಿಶ್ ಆಗಿ ಪ್ರಶ್ನೆ ಮಾಡುವುದನ್ನು ಬಿಜೆಪಿ ನಾಯಕರು ಬಿಡಬೇಕು. ಆರ್ಥಿಕ ಇಲಾಖೆಯಿಂದ ಅನುದಾನ ಬಂದ ಕೂಡಲೇ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗುತ್ತಿದೆ. ಬಹಳ ಒಳ್ಳೆಯ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ಅದನ್ನು ಹಾಳು ಮಾಡುವ ಕೆಲಸ ಮಾಡಬಾರದು ಎಂದು ಹೇಳಿದರು.